AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಜಮೀನು ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

ಇಂದು ಕ್ರಿಸ್​ಮಸ್ ಹಿನ್ನೆಲೆ ಸ್ನೇಹಿತರೆಲ್ಲರೂ ಸೇರಿ ಪಾರ್ಟಿ ಮಾಡುತ್ತಿದ್ದರು, ಈ  ವೇಳೆ ಮೃತ ವ್ಯಕ್ತಿ ಹಾಗೂ ಆರೋಪಿ ಮಧು ಇಬ್ಬರು ಸಂಬಂಧಿಗಳಾಗಿದ್ದು, ಜಮೀನು ವಿಚಾರಕ್ಕೆ ಗಲಾಟೆ, ಶುರುವಾಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಇನ್ನು ಆರೋಪಿ ಮಧು(40), ರೌಡಿಶೀಟರ್ ಎಂದು ಹೇಳಲಾಗುತ್ತಿದೆ.

ತುಮಕೂರು: ಜಮೀನು ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ
ಪ್ರಾತಿನಿಧಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 25, 2023 | 10:50 PM

Share

ತುಮಕೂರು, ಡಿ.25: ಜಮೀನು ವಿಚಾರಕ್ಕೆ ಶುರುವಾದ ಗಲಾಟೆ ಓರ್ವನ ಕೊಲೆ(Murder)ಯಲ್ಲಿ ಅಂತ್ಯವಾದ ಘಟನೆ ತುಮಕೂರು(Tumakuru) ಹೊರವಲಯದ ಬೆತ್ತಲೂರಿನಲ್ಲಿ ನಡೆದಿದೆ. ನಿರಂಜನ್(35) ಕೊಲೆಯಾದ ರ್ದುದೈವಿ. ಕ್ರಿಸ್​ಮಸ್ ಹಿನ್ನೆಲೆ ಸ್ನೇಹಿತರೆಲ್ಲರೂ ಸೇರಿ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಮಧು ಹಾಗೂ ನಿರಂಜನ್ ನಡುವೆ ಗಲಾಟೆ ಶುರುವಾಗಿದೆ. ಇದು ವಿಕೋಪಕ್ಕೆ ಹೋಗಿ ಮಧು ಹಾಗೂ ಸಹಚರರು ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ.

ಕೊಲೆಯಾದ ನಿರಂಜನ್ ಹಾಗೂ ಆರೋಪಿ ಮಧು ಇಬ್ಬರು ಸಂಬಂಧಿಕರು

ಇಂದು ಕ್ರಿಸ್​ಮಸ್ ಹಿನ್ನೆಲೆ ಸ್ನೇಹಿತರೆಲ್ಲರೂ ಸೇರಿ ಪಾರ್ಟಿ ಮಾಡುತ್ತಿದ್ದರು, ಈ  ವೇಳೆ ಮೃತ ವ್ಯಕ್ತಿ ಹಾಗೂ ಆರೋಪಿ ಮಧು ಇಬ್ಬರು ಸಂಬಂಧಿಗಳಾಗಿದ್ದು, ಜಮೀನು ವಿಚಾರಕ್ಕೆ ಗಲಾಟೆ, ಶುರುವಾಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಇನ್ನು ಆರೋಪಿ ಮಧು(40), ರೌಡಿಶೀಟರ್ ಎಂದು ಹೇಳಲಾಗುತ್ತಿದೆ. ಇತ್ತ ಕೊಲೆಯಾದ ನಿರಂಜನ್ ಬಿಲ್ಡಿಂಗ್‌ ಕಂಟ್ರಾಕ್ಟರ್ ಆಗಿದ್ದನಂತೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:ಕಲಬುರಗಿ: ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರನ ಬರ್ಬರ ಕೊಲೆ, ನಡು ರಸ್ತೆಯಲ್ಲಿ ಚಾಕು ಇರಿದು ಹತ್ಯೆ

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರ ದುರ್ಮರಣ

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಗಾಳಪೂಜಿ ಗ್ರಾಮದಲ್ಲಿರುವ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ದುರ್ಮರಣ ಹೊಂದಿದ್ದಾರೆ. ನಾಗರಾಜ ಮಾರುತಿ(11) ಹಾಗೂ ಹೇಮಂತ್ ಮಾಲತೇಶ್(12) ಕೊನೆಯುಸಿರೆಳೆದಿದ್ದಾರೆ. ಈಜಲು ಬರದಿದ್ದರೂ ಕೆರೆಗೆ ಇಳಿದು ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳನ್ನು ಮರಣೋತ್ತರ ಪರೀಕ್ಷೆಗೆ ಬ್ಯಾಡಗಿ ಆಸ್ಪತ್ರೆ ರವಾನೆ ಮಾಡಲಾಗಿದೆ. ಮೃತ ಮಕ್ಕಳ ಮನೆಗೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭೇಟಿ ನೀಡಿ ಸಾಂತ್ವಾನ ಹೇಳಿದರು. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ