ತುಮಕೂರು: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕಿ ಮೇಲೆ ಪ್ರಿಯಕರನಿಂದ ಹಲ್ಲೆ

ಪ್ರೀತಿ ನಿರಾಕರಿಸಿದ್ದಕ್ಕೆ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 25 ವರ್ಷದ ವಿನಯ್ ಕುಮಾರ್ ಎಂಬಾತನಿಂದ ಹಲ್ಲೆ.

ತುಮಕೂರು: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕಿ ಮೇಲೆ ಪ್ರಿಯಕರನಿಂದ ಹಲ್ಲೆ
ಪ್ರಾತಿನಿಧಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 11, 2023 | 11:30 AM

ತುಮಕೂರು: ಪ್ರೀತಿ ನಿರಾಕರಿಸಿದ್ದಕ್ಕೆ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ (Chikkanayakanahalli) ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 25 ವರ್ಷದ ವಿನಯ್ ಕುಮಾರ್ ಎಂಬಾತನಿಂದ ಹಲ್ಲೆ. ಬಾಲಕಿ ಕತ್ತಿಗೆ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಬಾಲಕಿ ಪರಿಸ್ಥಿತಿ ಗಂಭೀರವಾಗಿದೆ. ಕೂಡಲೇ ಬಾಲಕಿಯನ್ನ ಹಾಸನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ಕುರಿತು ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಂ‌ ಬೆಳಗ್ಗೆ ಕಾರು ಬೈಕ್ ನಡುವೆ‌ ಬೀಕರ‌ ರಸ್ತೆ ಅಪಘಾತ; ಇಬ್ಬರು ಸ್ಥಳದಲ್ಲೆ ದುರ್ಮರಣ

ಬೆಂಗಳೂರು: ಬೆಳ್ಳಂ‌ ಬೆಳಗ್ಗೆ ಕಾರು ಬೈಕ್ ನಡುವೆ‌ ಬೀಕರ‌ ರಸ್ತೆ ಅಪಘಾತವಾಗಿದ್ದು, ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ತಾಲೂಕಿನ ರಾಜಾನುಕುಂಟೆ ಕಾಕೋಳು ರಸ್ತೆಯ ಚಲ್ಲಹಳ್ಳಿ ಬಳಿ ನಡೆದಿದೆ. ಚಲ್ಲಹಳ್ಳಿ ಗ್ರಾಮದ ರಾಮಯ್ಯ (39) ನಾಗರಾಜ್ (42) ಮೃತ ದುರ್ದೈವಿಗಳು. ಇನ್ನು ಅಪಘಾತದ ರಬಸಕ್ಕೆ ಬೈಕ್ ಮತ್ತು ಕಾರಿನ ಮುಂಬಾಗ ಜಖಂ ಆಗಿದ್ದು, ರಸ್ತೆಯಿಂದ ನೂರು ಮೀಟರ್ ದೂರದಲ್ಲಿ ಬೈಕ್ ಬಿದ್ದಿದೆ.

ಇದನ್ನೂ ಓದಿ:ಚುನಾವಣಾ ಪ್ರಚಾರಕ್ಕೆ ಬಂದಾಗ ಪ್ರಶ್ನಿಸಿದ ಮಹಿಳೆ ಮೇಲೆ ಪ್ರೀತಂಗೌಡ ಬೆಂಬಲಿಗನಿಂದ ಹಲ್ಲೆ: ಸಿಸಿಟಿವಿಯಲ್ಲಿ ಗಲಾಟೆ ದೃಶ್ಯ ಸೆರೆ

ಚಿಕ್ಕಮಗಳೂರು: ಕಾರು ಟಿಟಿ ವಾಹನ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಾರು, ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು. ಇನ್ನು ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಆ ಕಡೆ ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಡಿಕ್ಕಿಯಾಗಿದ್ದು, ಅದರ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ