AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಗುಂಡಿಕ್ಕಿ ಜಾನುವಾರು ಹತ್ಯೆ, ಮಾಂಸ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್​

ಗುಂಡು ಹಾರಿಸಿ ಜಾನುವಾರು ಹತ್ಯೆ ಮಾಡಿ, ಮಾಂಸ ಮಾರಾಟಕ್ಕೆ ಯತ್ನಿಸಿದ ಅಮಾನವೀಯ ಘಟನೆ ಹಾಸನ ಜಿಲ್ಲೆ‌ಯ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿಯಲ್ಲಿ ನಡೆದಿದೆ.

Hassan News: ಗುಂಡಿಕ್ಕಿ ಜಾನುವಾರು ಹತ್ಯೆ, ಮಾಂಸ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್​
ಪ್ರಾತಿನಿಧಿಕ ಚಿತ್ರ
ಮಂಜುನಾಥ ಕೆಬಿ
| Edited By: |

Updated on: Jun 28, 2023 | 10:30 AM

Share

ಹಾಸನ: ಗುಂಡು ಹಾರಿಸಿ ಜಾನುವಾರು ಹತ್ಯೆ ಮಾಡಿ, ಮಾಂಸ ಮಾರಾಟಕ್ಕೆ ಯತ್ನಿಸಿದ ಅಮಾನವೀಯ ಘಟನೆ ಹಾಸನ (Hassan) ಜಿಲ್ಲೆ‌ಯ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿಯಲ್ಲಿ ನಡೆದಿದೆ. ನಿನ್ನೆ(ಜೂ.27) ಸಂಜೆ ಕಾಫಿ ತೋಟದಲ್ಲಿ ಕ್ಯಾಮನಹಳ್ಳಿಯ ದಯಾನಿದಿ ಎಂಬುವರಿಗೆ ಸೇರಿದ ಎಮ್ಮೆಯ ಮೇಲೆ ಪರವಾನಗಿ ಇಲ್ಲದ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಮಾಂಸ ಕತ್ತರಿಸುವ ವೇಳೆ ವೇಳೆ ಸ್ಥಳೀಯರು ಸ್ಥಳಕ್ಕೆ ಬಂದಿದ್ದು, ಅವರನ್ನು ನೋಡುತ್ತಿದ್ದಂತೆ ಕಿಡಿಗೇಡಿಗಳು ಎಸ್ಕೇಪ್ ಆಗಿದ್ದರು. ಬಳಿಕ ಜಾನುವಾರು ಹತ್ಯೆ ಆರೋಪದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತ ಆರೋಪಿಗಳ ಬಳಿಯಿದ್ದ 1 ಬಂದೂಕನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗುಡಿಸಲಿನಲ್ಲಿ ಮಲಗಿದ್ದ ರೈತನ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಂಚಗಳ್ಳಿಯಲ್ಲಿ ಹೊಲದ ಗುಡಿಸಲಿನಲ್ಲಿ ಮಲಗಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಜೋಳದ ಫಸಲು ಕಾವಲು ಕಾಯುತ್ತಿದ್ದ ರೈತ ನಂಜಪ್ಪ, ಸ್ವಲ್ಪ ಸಮಯದ ಬಳಿಕ ರಗ್ಗು ಹೊದ್ದು ಮಲಗಿದ್ದ. ಈ ವೇಳೆ ರೈತ ನಂಜಪ್ಪನ ಮೇಲೆ ಚಿರತೆ ದಾಳಿ ನಡೆಸಿ, ತೋಳು ಪರಚಿದೆ. ತಕ್ಷಣ ರಗ್ಗು ಬೀಸಾಡುತ್ತಿದ್ದಂತೆ ಚಿರತೆ ಓಡಿ ಹೋಗಿದ್ದು, ರೈತ ನಂಜಪ್ಪನಿಗೆ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಬಕ್ರಿದ್ ಕುರ್ಬಾನಿ ಹೆಸರಿನಲ್ಲಿ ಗೋವುಗಳ ಮಾರಣ ಹೋಮ; ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಬಜರಂಗದಳ ಮನವಿ

ಆಡು ನುಂಗಲು ವಿಫಲಯತ್ನ ಮಾಡಿದ ಹೆಬ್ಬಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಆಡು ನುಂಗಲು ಹೆಬ್ಬಾವು ವಿಫಲಯತ್ನ ಮಾಡಿದ ಘಟನೆ ನಡೆದಿದೆ. ಆಹಾರ ಅರಸಿ ನಾಡಿಗೆ ಬಂದಿದ್ದ ಭಾರೀ ಗಾತ್ರದ ಹೆಬ್ಬಾವು, ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಆಡೊಂದನ್ನು ಬೇಟೆಯಾಡಿತ್ತು. ಬಳಿಕ ಅದನ್ನು ಹಿಡಿದ ನುಂಗಲು‌ ಸುಮಾರು ಒಂದು ತಾಸು ಸೆಣಸಿ ಬಳಿಕ ಸಾದ್ಯವಾಗದೆ ಬಿಟ್ಟು ಹೋಗಿದೆ. ಈ ಆಡು ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ್ದು, ಸುಮಾರು 45 ಕೆಜಿ ತೂಕವನ್ನ ಹೊಂದಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ