ಬಾಲಕಿಯನ್ನು ಕರೆದ್ಯೊಯ್ದು ಸುಲೇಮಾನ್ ಅತ್ಯಾಚಾರ: ವಿಡಿಯೋ ಮಾಡಿದ ಅಲ್ತಾಫ್ ಅರೆಸ್ಟ್!
ಕರ್ನಾಟಕದಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇಂದು(ಫೆಬ್ರವರಿ 03) ಮಂಡ್ಯದಲ್ಲಿ 8 ವರ್ಷದ ಬಾಲಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆನ್ನಲ್ಲೇ ಗದಗನಲ್ಲೂ ಸಹ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಾಮುಕರು ಅತ್ಯಾಚಾರ ಮಾಡುವುದನ್ನು ವಿಡಿಯೋ ಸಹ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗದಗ, (ಫೆಬ್ರವರಿ 03): ಮಂಡ್ಯದಲ್ಲಿ 8 ವರ್ಷದ ಬಾಲಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಇಂದು (ಫೆಬ್ರವರಿ 03) ಗದಗನಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದ್ಯೊಯ್ದು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಘಟನೆ ನಡೆದಿದ್ದು, ಕಾಮಾಂಧರ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಿ ಆರೋಪಿ ಸುಲೇಮಾನ್ ಸೇರಿದಂತೆ ಅತ್ಯಾಚಾರ ಎಸಗುವುದನ್ನು ವಿಡಿಯೋ ಮಾಡಿದ್ದ ಅಲ್ತಾಫ್ ಎನ್ನುವಾತನನ್ನು ಸಹ ಪೊಲೀಸರು ಬಂಧಿಸಿದ್ದಾರೆ.
ಸುಲೇಮಾನ್ ಎನ್ನುವಾತ ಅಪ್ರಾಪ್ತ ಬಾಲಕಿ ಕರೆದ್ಯೊಯ್ದು ಅತ್ಯಾಚಾರ ಎಸಗಿದ್ದಾನೆ. ಇನ್ನು ಅತ್ಯಾಚಾರ ಎಸಗಿದ ದೃಶ್ಯವನ್ನು ಅಲ್ತಾಫ್ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾನೆ. ಇನ್ನು ಈ ಘಟನೆ ಬಾಲಕಿ ಪಾಲಕರಿಗೆ ತಡವಾಗಿ ಗೋತ್ತಾಗಿದ್ದು, ಈ ಸಂಬಂಧ ಇಂದು(ಫೆಬ್ರವರಿ 03) ನರೇಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು, ಅತ್ಯಾಚಾರಿ ಆರೋಪಿ ಸುಲೇಮಾನ್ ಹಾಗೂ ವಿಡಿಯೋ ಮಾಡಿದ ಅಲ್ತಾಫ್ ನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲೊಂದು ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಹಾಡಹಗಲೇ ಮೂವರಿಂದ ಗ್ಯಾಂಗ್ರೇಪ್
ಮಂಡ್ಯದಲ್ಲಿ ಸಾಮೂಹಿಕ ಅತ್ಯಾಚಾರ
ಮಂಡ್ಯ ಹೊರವಲಯದ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜನವರಿ 31ರಂದು ಹಾಡುಹಗಲೇ ಮೂವರು ಕಾಮುಕರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇನ್ನು ತನ್ನ ಮೇಲಾದ ದುಷ್ಕೃತ್ಯವನ್ನು ಬಾಲಕಿ ಯಾರೊಂದಿಗೆ ಹೇಳಿಕೊಂಡಿರಲಿಲ್ಲ. ಬಾಲಕಿ ಋತುಮತಿಯಾಗಿ ಎರಡು ದಿನ ಕಳೆದರೂ ಆಕೆಗೆ ಹೊಟ್ಟೆ ನಾವು, ರಕ್ತಸ್ರಾವ ನಿಂತಿರಲಿಲ್ಲ. ಇದರಿಂದ ಅನುಮಾನಗೊಂಡ ಬಾಲಕಿ ಚಿಕ್ಕಮ್ಮ ಬಂದು ವಿಚಾರಿಸಿದಾಗ ಬಾಲಕಿ ನಡೆದ ಘಟನೆ ಬಗ್ಗೆ ವಿವರಿಸಿದ್ದಾಳೆ. ಸದ್ಯ ಅಸ್ವಸ್ಥ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.