ಚಿಕ್ಕಮಗಳೂರು, ಜ.24: ಹುಲಿ ಉಗುರಿನ ಮಾಲೆ ಧರಿಸುತ್ತಿದ್ದ ಪ್ರಕರಣ ರಾಜ್ಯದಲ್ಲಿ ಭಾರೀ ಸುದ್ದು ಮಾಡಿತ್ತು. ಬಿಗ್ಬಾಸ್ ಸ್ಪರ್ಧಿಯೊಬ್ಬರ ಬಂಧನವೂ ಆಗಿತ್ತು. ಬಳಿಕ ಕನ್ನಡದ ನಟರ ಫೋಟೋಗಳು ಹರಿದಾಡಿದವು. ಹೀಗಾಗಿ ಪ್ರಾಣಿಗಳ ಅಂಗಾಂಗಗಳನ್ನು ವಾಪಸ್ ಅರಣ್ಯ ಇಲಾಖೆಗೆ ಒಪ್ಪಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಇದರ ಬೆನ್ನಲ್ಲೇ, ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಹುಲಿ ಅಂಗಾಂಗ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಚಿಕ್ಕಮಗಳೂರು ಹೊರ ವಲಯದ ಮತ್ತಾವರ ಬಳಿ ಹುಲಿ ತಲೆ, ನಾಲ್ಕು ಉಗುರು, ಎರಡು ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ವಿಚಾರ ತಿಳಿದು DFO ರಮೇಶ್ ಬಾಬು ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ, ಹುಲಿ ಅಂಗಾಂಗ ಮಾರಾಟ ಮಾಡಲು ಮುಂದಾಗಿದ್ದ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದ ಸತೀಶ್, ಚಂದ್ರೇಗೌಡ ಎಂಬವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು: ಡಿಸಿ ಕಚೇರಿ ಬಳಿ ಹೋಮ ಮಾಡಿ, ಮುತ್ತಿಗೆ ಹಾಕಿದ್ದ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ FIR
ಮೂಡಿಗೆರೆ ಅರಣ್ಯ ಇಲಾಖೆಯ ಕಚೇರಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಂದ ಹುಲಿ ತಲೆ, ಹುಲಿ ಉರುಗರು, ಹಲ್ಲು, ಬೈಕ್ ಸೇರಿದಂತೆ ನಾಲ್ಕು ಮೊಬೈಲ್ಗಳನ್ನ ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಈ ಹಿಂದೆಯೂ ಹುಲಿ ಅಂಗಾಂಗ ಮಾರಾಟ ಮಾಡುವಾಗ ಇಬ್ಬರು ಆರೋಪಿಗಳು ಸಿಕ್ಕಿ ಬಿದ್ದಿದ್ದರು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ