ಲಕ್ಷ್ಮೀಪುರ ಬಳಿ ಗಾಂಜಾ ಮಾರಾಟ: ಇಬ್ಬರು Drug ಪೆಡ್ಲರ್ಸ್ ಅಂದರ್
ಬೆಂಗಳೂರು: ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಲಕ್ಷ್ಮೀಪುರ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕ್ ಪಾಷಾ (25) ಹಾಗೂ ಮಂಜ ಅಲಿಯಾಸ್ ಕೋಳಿ ಮಂಜ(26) ಬಂಧಿತ ಆರೋಪಿಗಳು. ಆರೋಪಿಗಳು ಮಾದನಾಯಕನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಆರೋಪಿಗಳು ಲಕ್ಷ್ಮೀಪುರದ ಖಾಲಿ ಜಾಗದಲ್ಲಿ ಗಾಂಜಾ ಮಾರಾಟ ಮಾಡುವಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಕೆ.ಜಿ ಗಾಂಜಾ ಸಹ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು: ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಲಕ್ಷ್ಮೀಪುರ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕ್ ಪಾಷಾ (25) ಹಾಗೂ ಮಂಜ ಅಲಿಯಾಸ್ ಕೋಳಿ ಮಂಜ(26) ಬಂಧಿತ ಆರೋಪಿಗಳು.
ಆರೋಪಿಗಳು ಮಾದನಾಯಕನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಆರೋಪಿಗಳು ಲಕ್ಷ್ಮೀಪುರದ ಖಾಲಿ ಜಾಗದಲ್ಲಿ ಗಾಂಜಾ ಮಾರಾಟ ಮಾಡುವಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಕೆ.ಜಿ ಗಾಂಜಾ ಸಹ ವಶಕ್ಕೆ ಪಡೆಯಲಾಗಿದೆ.