ಉತ್ತರ ಪ್ರದೇಶ: ಪ್ರೀತಿ, ಅಕ್ಕರೆ ಎಲ್ಲಾ ಎಲ್ಲಿ ಹೋಯ್ತು? ಇಬ್ಬರು ಸಹೋದರಿಯರ ಶಿರಚ್ಛೇದ ಮಾಡಿದ ಅಕ್ಕ

ಯುವತಿಯೊಬ್ಬಳು ತನ್ನ ಇಬ್ಬರು ಸಹೋದರಿಯ ಶಿರಚ್ಛೇದ ಮಾಡಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೆಲವೇ ಗಂಟೆಗಳ ನಂತರ ಆರೋಪಿ ಯುವತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲರಾಯ ಪೊಲೀಸ್ ಠಾಣೆ ವ್ಯಾಪ್ತಿಯ ಬಹದ್ದೂರ್‌ಪುರ ಗ್ರಾಮದಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತರನ್ನು ಜೈವೀರ್ ಸಿಂಗ್ ಅವರ ಪುತ್ರಿಯರಾದ ಸುರಭಿ (6) ಮತ್ತು ರೋಷ್ನಿ (4) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಮನೆಯ ವಿವಿಧ ಕೊಠಡಿಗಳಲ್ಲಿ ವಿಕೃತ ರೀತಿಯಲ್ಲಿ ಶವಗಳು ಪತ್ತೆಯಾಗಿವೆ ಎಂದು ಹೇಳಿದರು.

ಪ್ರಾತಿನಿಧಿಕ ಚಿತ್ರ
Follow us
ನಯನಾ ರಾಜೀವ್
|

Updated on: Oct 10, 2023 | 12:56 PM

ಯುವತಿಯೊಬ್ಬಳು ತನ್ನ ಇಬ್ಬರು ಸಹೋದರಿಯ ಶಿರಚ್ಛೇದ ಮಾಡಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ.  ಘಟನೆಯ ಬಗ್ಗೆ ಮಾಹಿತಿ ಪಡೆದ ಕೆಲವೇ ಗಂಟೆಗಳ ನಂತರ ಆರೋಪಿ ಯುವತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲರಾಯ ಪೊಲೀಸ್ ಠಾಣೆ ವ್ಯಾಪ್ತಿಯ ಬಹದ್ದೂರ್‌ಪುರ ಗ್ರಾಮದಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತರನ್ನು ಜೈವೀರ್ ಸಿಂಗ್ ಅವರ ಪುತ್ರಿಯರಾದ ಸುರಭಿ (6) ಮತ್ತು ರೋಷ್ನಿ (4) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಮನೆಯ ವಿವಿಧ ಕೊಠಡಿಗಳಲ್ಲಿ ವಿಕೃತ ರೀತಿಯಲ್ಲಿ ಶವಗಳು ಪತ್ತೆಯಾಗಿವೆ ಎಂದು ಹೇಳಿದರು.

ಅಂಜಲಿ ಪಾಲ್ ಎಂದು ಗುರುತಿಸಲಾದ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾಳೆ ಎಂದು ಕಾನ್ಪುರ ರೇಂಜ್ ಪೊಲೀಸ್ ಮಹಾನಿರೀಕ್ಷಕ (ಐಜಿ) ಪ್ರಶಾಂತ್ ಕುಮಾರ್ ಹೇಳಿದ್ದಾರೆ. ಈ ಪ್ರಕರಣದ ಉದ್ದೇಶವನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ತನಿಖೆಯ ನೇತೃತ್ವ ವಹಿಸಿರುವ ಕುಮಾರ್ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ) ಮತ್ತು 201 (ಸಾಕ್ಷ್ಯವನ್ನು ಮರೆಮಾಚುವುದು ಅಥವಾ ಸುಳ್ಳು ಮಾಹಿತಿ ನೀಡುವುದು) ಅಡಿಯಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಯುವತಿಯೊಂದಿಗೆ ಮೂವರು ಪುರುಷರನ್ನು ಸಹ ವಿಚಾರಣೆ ನಡೆಸಿದ್ದಾರೆ ಎಂದು ಎಸ್‌ಪಿ ಸಂಜಯ್ ವರ್ಮಾ ತಿಳಿಸಿದ್ದಾರೆ.

ಪೋಷಕರು ಇರದೇ ಇದ್ದಾಗ ಅಂಜಲಿ ತನ್ನ ಪ್ರಿಯಕರನೊಂದಿಗೆ ಇರುವುದನ್ನು ಮಕ್ಕಳು ನೋಡಿದ್ದರು ಹಾಗಾಗಿ ಅವರನ್ನು ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಒಡಿಶಾ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿದ ಶಿಕ್ಷಕರು, ಬಾಲಕ ಸಾವು

ಕೊಲೆಗೆ ಬಳಸಿದ ಗುದ್ದಲಿಯನ್ನು ಪೊಲೀಸರು ಅಪರಾಧ ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಫೋರೆನ್ಸಿಕ್ ತಂಡವು ತನಿಖೆಗಾಗಿ ಸ್ಥಳದಿಂದ ಗುದ್ದಲಿಯನ್ನು ವಶಪಡಿಸಿಕೊಂಡಿದೆ. ಫೋರೆನ್ಸಿಕ್ ತಂಡವು ಆರೋಪಿಯ ಮನೆಯ ಹೊರಗೆ ಬಿಸಿಲಿನಲ್ಲಿ ಒಣಗಲು ಹಾಕಿದ್ದ ಕೆಲವು ಬಟ್ಟೆಗಳನ್ನು ಸಹ ಪತ್ತೆ ಮಾಡಿದ್ದು, ವಶಪಡಿಸಿಕೊಳ್ಳಲಾಗಿದೆ.

ಘಟನೆಯ ವೇಳೆ ಜೈವೀರ್, ಅವರ ಪತ್ನಿ ಸುಶೀಲಾ, ಅವರ ಮಕ್ಕಳಾದ ನಂದ್ ಕಿಶೋರ್ (12) ಮತ್ತು ಕನ್ಹಯ್ಯ (8) ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ