AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು

ಪಾಸ್ ಪೋರ್ಟ್ ಅವಧಿ ಮುಗಿದ ವಿದೇಶಿಗರ ನಿರಾಶ್ರಿತ ಕೇಂದ್ರದಲ್ಲಿದ್ದ ಉಗಾಂಡದ ನಾಲ್ವರು ಮಹಿಳೆಯರು ಪೊಲೀಸ್ ಹಾಗೂ ಕೇಂದ್ರದ ಸಿಬ್ಬಂದಿ ಮೇಲೆ ದಾಳಿ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು
ಉಗಾಂಡ ಮಹಿಳೆಯರಿಂದ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್ ಸಿಬ್ಬಂದಿ
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi|

Updated on:Jul 07, 2023 | 9:09 PM

Share

ತುಮಕೂರು: ಉಗಾಂಡದ (Uganda) ನಾಲ್ವರು ಮಹಿಳೆಯರು ಪೊಲೀಸ್ ಹಾಗೂ ಪಾಸ್ ಪೋರ್ಟ್ ಅವಧಿ ಮುಗಿದ ವಿದೇಶಿಗರ ನಿರಾಶ್ರಿತ ಕೇಂದ್ರದ (Foreigners Refugee Centre) ಸಿಬ್ಬಂದಿ ಮೇಲೆ ದಾಳಿ ನಡೆಸಿದ ಘಟನೆ ಜಿಲ್ಲೆಯ ದಿಬ್ಬೂರಿನಲ್ಲಿ ನಡೆದಿದೆ. ಪಿಎಸ್ಐ ಚಂದ್ರಕಲಾ, ಡಬ್ಲ್ಯುಪಿಸಿ ತಾಸೀನಾ ಬಾನು, ನಿರಾಶ್ರಿತ ಕೇಂದ್ರದ ಡ್ರೈವರ್ ಬಸವರಾಜು, ಅಡುಗೆ ಸಹಾಯಕಿ ಲಕ್ಷ್ಮೀ ಎಂಬುವರ ಮೇಲೆ ದಾಳಿ ನಡೆಸಲಾಗಿದೆ.

ಪಾಸ್​ಪೋರ್ಟ್ ಅವಧಿ ಮುಕ್ತಾಯದ ನಂತರವೂ ಅಕ್ರಮವಾಗಿ ಇಲ್ಲೇ ಉಳಿದುಕೊಂಡಿದ್ದ ವಿದೇಶಿ ಪ್ರಜೆಗಳನ್ನು ದಿಬ್ಬೂರಿನಲ್ಲಿರುವ ವಿದೇಶಿಗರ ನಿರಾಶ್ರಿತರ ಕೇಂದ್ರದಲ್ಲಿ ಇರಿಸಲಾಗಿತ್ತು. ಈ ಕೇಂದ್ರದಲ್ಲಿ ಸುಮಾರು 30 ಜನರಿದ್ದಾರೆ. ಅದರಂತೆ ಅಡುಗೆ ಮಾಡಲು ಗ್ಯಾಸ್ ಸಿಲಿಂಡರ್ ನೀಡಲು ಹೋದಾಗ ಉಗಾಂಡದ ನಾಲ್ವರು ಮಹಿಳೆಯರು ಸಿಬ್ಬಂದಿಯನ್ನು ಕೊಠಡಿಯಲ್ಲಿ ಕೂಡಿಹಾಕಿ ಚಾಕು ಹಿಡಿದುಕೊಂಡು ಕೊಲೆ ಯತ್ನ ನಡೆಸಿದ್ದಾರೆ.

ಇದನ್ನೂ ಓದಿ: Ramanagara News: ಮಹಿಳೆ ಮೇಲೆ ದಾಳಿ ಮಾಡಿದ ರಾಷ್ಟ್ರೀಯ ಪಕ್ಷಿ ನವಿಲು: ಅರಣ್ಯ ಇಲಾಖೆಗೆ ದೂರು

ಘಟನೆಯಲ್ಲಿ ಪಿಎಸ್ಐ ಚಂದ್ರಕಲಾ, ಡಬ್ಲ್ಯುಪಿಸಿ ತಾಸೀನಾ ಬಾನು, ನಿರಾಶ್ರಿತ ಕೇಂದ್ರದ ಡ್ರೈವರ್ ಬಸವರಾಜು, ಅಡುಗೆ ಸಹಾಯಕಿ ಲಕ್ಷ್ಮೀ ಎಂಬವರ ಕೈ ಕಾಲುಗಳಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿದ ಎಸ್​ಪಿ ರಾಹುಲ್ ಕುಮಾರ್, ಕಳೆದ ಎರಡು ತಿಂಗಳಿಂದ ತುಮಕೂರಿನಲ್ಲಿ ವಿದೇಶಿ ಪ್ರಜೆಗಳ ನಿರಾಶ್ರಿತರ ಕೇಂದ್ರ ಓಪನ್ ಆಗಿದೆ‌. ಆ ಕೇಂದ್ರದಲ್ಲಿ ಬಾಂಗ್ಲಾದೇಶ, ನೈಜೀರಿಯ ಸೇರಿದಂತೆ ಒಟ್ಟು 5 ದೇಶದ 27 ವಿದೇಶಿ ಮಹಿಳಾ ಪ್ರಜೆಗಳು ಇದ್ದಾರೆ. ಬೇರೆ ಬೇರೆ ಕಾರಣಗಳಿಂದ ಹಾಗೂ ವಿಸಾ ಮುಗಿದ ಹಿನ್ನೆಲೆ ಅವರನ್ನ ಇಲ್ಲಿ ಕರೆತಂದು ಇರಿಸಲಾಗಿದೆ. ಇವತ್ತು ಸಂಜೆ ಸ್ಟವ್​ಗಳನ್ನ ಬಳಸುತ್ತಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಪರಿಶೀಲನೆ ನಡೆಸಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪೊಲೀಸ್ ಸಿಬ್ಬಂದಿ ಜೊತೆಗೆ ಇಲ್ಲಿಗೆ ಬಂದಿದ್ದಾರೆ. ಈ ವೇಳೆ ದಾಳಿ ನಡೆಸಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗುತ್ತದೆ. ದೂರು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತೇವೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 pm, Fri, 7 July 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ