ನೇಣುಬಿಗಿದ ಸ್ಥಿತಿಯಲ್ಲಿ ಯುವಕರ ಮೃತದೇಹ ಪತ್ತೆ, ಕೊಲೆ ಶಂಕೆ
ಕೋಲಾರ: ಮುಳಬಾಗಿಲು ತಾಲೂಕಿನ ಅಣ್ಣಹಳ್ಳಿ ಗ್ರಾಮದ ಹೊರವಲಯದಲ್ಲಿ ಅನುಮಾನಾಸ್ಪದವಾಗಿ ನೇಣುಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವಕರಿಬ್ಬರ ಶವ ಪತ್ತೆಯಾಗಿದೆ. ಒಂದೇ ಮರಕ್ಕೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪ್ರವೀಣ್(20), ಶ್ರೀನಾಥ್(20) ಮೃತದೇಹ ಪತ್ತೆಯಾಗಿದೆ. ಮೃತ ಯುವಕರು ಮುಳಬಾಗಿಲು ತಾಲೂಕಿನ ಅಣ್ಣಹಳ್ಳಿ ಹಾಗೂ ಕಪ್ಪಲಮಡಗು ಗ್ರಾಮದ ನಿವಾಸಿಗಳಾಗಿದ್ದಾರೆ. ಯುವಕರ ಸಾವಿನ ಬಗ್ಗೆ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋಲಾರ: ಮುಳಬಾಗಿಲು ತಾಲೂಕಿನ ಅಣ್ಣಹಳ್ಳಿ ಗ್ರಾಮದ ಹೊರವಲಯದಲ್ಲಿ ಅನುಮಾನಾಸ್ಪದವಾಗಿ ನೇಣುಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವಕರಿಬ್ಬರ ಶವ ಪತ್ತೆಯಾಗಿದೆ. ಒಂದೇ ಮರಕ್ಕೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪ್ರವೀಣ್(20), ಶ್ರೀನಾಥ್(20) ಮೃತದೇಹ ಪತ್ತೆಯಾಗಿದೆ.
ಮೃತ ಯುವಕರು ಮುಳಬಾಗಿಲು ತಾಲೂಕಿನ ಅಣ್ಣಹಳ್ಳಿ ಹಾಗೂ ಕಪ್ಪಲಮಡಗು ಗ್ರಾಮದ ನಿವಾಸಿಗಳಾಗಿದ್ದಾರೆ. ಯುವಕರ ಸಾವಿನ ಬಗ್ಗೆ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.