AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime |ಅಡುಗೆ ತಯಾರಿಸುವ ವಿಚಾರಕ್ಕೆ ಶೆಫ್​ಗಳ ನಡುವೆ ಜಗಳ.. ಚಾಕು ಇರಿದು ಯುವಕನ ಕೊಲೆ, ಆರೋಪಿ ಎಸ್ಕೇಪ್

ಜೆ.ಪಿ.ನಗರದ ವಾಲ್ ಸ್ಟ್ರೀಟ್ ಪಬ್‌ನಲ್ಲಿ ಶೆಫ್‌ಗಳಾಗಿದ್ದ ಸಾಗರ್ ಮತ್ತು ಮೌಸಿಕ್ ನಡುವೆ ಅಡುಗೆ ತಯಾರಿಸುವ ವಿಚಾರಕ್ಕೆ ಜಗಳ ಶುರುವಾಗಿದ್ದು ಅದು ಕೊಲೆಯಲ್ಲಿ ಅಂತ್ಯ ಕಂಡಿದೆ. ಚಾಕುವಿನಿಂದ ಇರಿದು ಪಶ್ಚಿಮ ಬಂಗಾಳದ ಯುವಕ ಸಾಗರ್​ನನ್ನು ಮೌಸಿಕ್ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

Bengaluru Crime |ಅಡುಗೆ ತಯಾರಿಸುವ ವಿಚಾರಕ್ಕೆ ಶೆಫ್​ಗಳ ನಡುವೆ ಜಗಳ.. ಚಾಕು ಇರಿದು ಯುವಕನ ಕೊಲೆ, ಆರೋಪಿ ಎಸ್ಕೇಪ್
ಸಾಗರ್ (ಎಡ) ಮೌಸಿಕ್ (ಬಲ)
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Mar 23, 2021 | 12:44 PM

Share

ಬೆಂಗಳೂರು: ಅಡುಗೆ ತಯಾರಿಸುವ ವಿಚಾರಕ್ಕೆ ಜಗಳವಾಗಿ ಯುವಕನ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಜೆ.ಪಿ.ನಗರದ ಪಬ್‌ನಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಸಾಗರ್(22) ಕೊಲೆಯಾದ ದುರ್ದೈವಿ. ಪಬ್‌ನಲ್ಲಿ ಶೆಫ್‌ಗಳಾಗಿದ್ದ ಸಾಗರ್ ಮತ್ತು ಮೌಸಿಕ್ ನಡುವೆ ಜಗಳ ಉಂಟಾಗಿ ಮೌಸಿಕ್ ಹೊಟ್ಟೆ, ಎದೆಗೆ ಚಾಕು ಇರಿದು ಸಾಗರ್​ನನ್ನು ಕೊಲೆ ಮಾಡಿದ್ದಾನೆ.

ಜೆ.ಪಿ.ನಗರದ ವಾಲ್ ಸ್ಟ್ರೀಟ್ ಪಬ್‌ನಲ್ಲಿ ಶೆಫ್‌ಗಳಾಗಿದ್ದ ಸಾಗರ್ ಮತ್ತು ಮೌಸಿಕ್ ನಡುವೆ ಅಡುಗೆ ತಯಾರಿಸುವ ವಿಚಾರಕ್ಕೆ ಜಗಳ ಶುರುವಾಗಿದ್ದು ಅದು ಕೊಲೆಯಲ್ಲಿ ಅಂತ್ಯ ಕಂಡಿದೆ. ಚಾಕುವಿನಿಂದ ಇರಿದು ಪಶ್ಚಿಮ ಬಂಗಾಳದ ಯುವಕ ಸಾಗರ್​ನನ್ನು ಮೌಸಿಕ್ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಾರ್ಚ್ 20ರ ತಡರಾತ್ರಿ ಈ ಘಟನೆ ನಡೆದಿದೆ.

ಅಡುಗೆ ರೆಡಿ ಮಾಡೋದಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಬಳಿಕ ಸರಿಯಾಗಿ ಕೆಲಸ ಮಾಡಲ್ಲವೆಂದು ಮೌಸಿಕ್ ಮೇಲೆ ಸಾಗರ್ ಹಲ್ಲೆ ಮಾಡಿದ್ದಾನೆ. ಈ ವೇಳೆ ಕೋಪಗೊಂಡ ಮೌಸಿಕ್ ಸ್ಥಳದಲ್ಲಿದ್ದ ಚಾಕುವಿನಿಂದ ಸಾಗರ್​ನ ಹೊಟ್ಟೆ ಹಾಗೂ ಎದೆಭಾಗಕ್ಕೆ ಇರಿದಿದ್ದಾನೆ. ಕೂಡಲೇ ಗಾಯಾಳು ಸಾಗರ್​ನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಿಸದೆ ಸಾಗರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆಯ ನಂತರ ಸ್ಥಳದಲ್ಲಿದ್ದ ಆರೋಪಿ ಮೌಸಿಕ್ ಪರಾರಿಯಾಗಿದ್ದು ತಲೆ ಮರೆಸಿಕೊಂಡಿದ್ದಾನೆ. ಸ್ಥಳಕ್ಕೆ ಜೆ.ಪಿ.ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ….

ಇದನ್ನೂ ಓದಿ: ತಿಪ್ಪೆ ಜಾಗದ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ, ಯಾವೂರಲ್ಲಿ?

Published On - 7:44 am, Sun, 21 March 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ