ಉಡುಪಿ, ಫೆ.04: ಮೂರು ವರ್ಷದ ಹಿಂದೆ ನಡೆದಿದ್ದ ಗೃಹಿಣಿ ಕೊಲೆ (Murder) ಪ್ರಕರಣ ಸಂಬಂಧ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆ ಕೊಲೆ ಮಾಡಿ ವಿದೇಶಕ್ಕೆ ಹೋಗಿ ತಲೆ ಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಏರ್ ಪೋರ್ಟ್ ನಲ್ಲಿ ಆರೋಪಿ ಕಾಣಿಸಿಕೊಳ್ಳುತ್ತಿದ್ದಂತೆ ಬಂಧಿಸಲಾಗಿದೆ. ಸದ್ಯ ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
2021ರ ಜುಲೈನಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಕುಮ್ರಗೋಡುವಿನ ಪ್ಲಾಟ್ನಲ್ಲಿ ಗೃಹಿಣಿ ವಿಶಾಲ ಗಾಣಿಗ ಹತ್ಯೆ ಮಾಡಲಾಗಿತ್ತು. ಪ್ರಕರಣ ಬೆನ್ನು ಹತ್ತಿದ್ದ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು. ಕೊಲೆ ಆರೋಪಿ ವಿಶಾಲ ಗಾಣಿಗ ಪತಿ ರಾಮಕೃಷ್ಣ, ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್ ನನ್ನು ಬಂಧಿಸಲಾಗಿತ್ತು. ಕೊಲೆಗೆ ಸಹಕರಿಸಿದ ಧರ್ಮೇಂದ್ರ ಕುಮಾರ್ ಸುಹಾನಿ ವಿದೇಶಕ್ಕೆ ಪರಾರಿಯಾಗಿದ್ದ. ಸದ್ಯ ಮೂರು ವರ್ಷದ ಬಳಿಕ ಮೂರನೇ ಆರೋಪಿಯನ್ನೂ ಬಂಧಿಸಲಾಗಿದೆ. ಲಕ್ನೋಗೆ ತೆರಳಿದ್ದ ಬ್ರಹ್ಮಾವರ ಎಎಸೈ ಶಾಂತಾರಾಜ ಮತ್ತು ಕಾನ್ಸ್ಟೇಬಲ್ ಸುರೇಶ್ ಬಾಬು ಅವರ ಕಣ್ಣಿಗೆ ಆರೋಪಿ ಮೂರು ವರ್ಷದ ಬಳಿಕ ಲಕ್ನೋ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದು ಪೊಲೀಸರು ಅಲರ್ಟ್ ಆಗಿ ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಇದನ್ನೂ ಓದಿ: ಮೀರತ್ನಲ್ಲಿ ಪಾಕಿಸ್ತಾನಿ ಐಎಸ್ಐ ಏಜೆಂಟ್ ಬಂಧನ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬಂಡಹಳ್ಳಿಯಲ್ಲಿ ಮದ್ಯದಂಗಡಿ ತೆರೆದಿದ್ದಕ್ಕೆ ಮಹಿಳೆಯರು ರೊಚ್ಚಿಗೆದ್ದಿದ್ದಾರೆ. ಗ್ರಾಮಕ್ಕೆ ಬಾರ್ ಬೇಡ ಅಂತಾ ಪ್ರತಿಭಟನೆ ನಡೆಸಿ ಬಾರ್‌ನ ಕಿಟಕಿ ಬಾಗಿಲಿನ ಗ್ಲಾಸ್ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಕಲ್ಲುಗಳಿಂದ ದಾಳಿ ಮಾಡುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
ಸಾಲ ಪಡೆದು ವಾಪಸ್ ನೀಡಲಿಲ್ಲ ಅನ್ನೋ ಕಾರಣಕ್ಕೆ ಯುವಕನಿಗೆ ಚಿತ್ರಹಿಂಸೆ ನೀಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಸೋಮ್ಲಪುರದಲ್ಲಿ ನಡೆದಿದೆ. ಮರಕ್ಕೆ ಯುವಕನ ಕೈ ಕಾಲು ಕಟ್ಟಿ ಹಿಗ್ಗಾಮುಗ್ಗ ಥಳಿಸಲಾಗಿದೆ. ಈ ಸಂಬಂದ ಆರು ಜನರ ವಿರುದ್ಧ ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆನೇಕಲ್ ತಾಲೂಕಿನ ಪೂನಹಳ್ಳಿ ಬಳಿ ಕೂದಲೆಳೆ ಅಂತರದಲ್ಲಿ ಟಿಪ್ಪರ್ ಚಾಲಕ ಬಚಾವ್ ಆಗಿದ್ದಾನೆ. ಚಲಿಸುತ್ತಿದ್ದ ಟಿಪ್ಪರ್ ಲಾರಿ ಮೇಲೆ ಬಾರಿ ಗಾತ್ರದ ಗ್ರಾನೈಟ್ ಕಲ್ಲು ಬಿದ್ದಿದೆ. ಕಲ್ಲು ಸಾಗಿಸ್ತಿದ್ದ ಟ್ರಕ್ ಹಿಂದೆ ಲಾರಿ ಹೋಗ್ತಿತ್ತು. ಈ ವೇಳೆ ಓವರ್ ಲೋಡ್‌ನಿಂದ ಕಲ್ಲು ಹಿಂದಕ್ಕೆ ಬಿದ್ದಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ