ಗ್ರಾನೈಟ್ ಅನ್​ಲೋಡ್ ಮಾಡುವಾಗ ದುರಂತ: ಉತ್ತರ ಪ್ರದೇಶ ಮೂಲದ 2 ಕೂಲಿ ಕಾರ್ಮಿಕರ ಸಾವು

ಗ್ರಾನೈಟ್ ಅನ್​ಲೋಡ್ ಮಾಡುವಾಗ ಉತ್ತರ ಪ್ರದೇಶ ಮೂಲದ ಇಬ್ಬರು ಕೂಲಿ ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಉಡುಪಿ ತಾಲೂಕಿನ ಮಲ್ಪೆ ಬಳಿಯ ತೊಟ್ಟಂ ಪ್ರದೇಶದಲ್ಲಿ ನಡೆದಿದೆ. ಭಾರಿ ಗಾತ್ರದ ಗ್ರಾನೈಟ್ ಅನ್ಲೋಡ್ ಮಾಡುವಾಗ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಗ್ರಾನೈಟ್ ಅನ್​ಲೋಡ್ ಮಾಡುವಾಗ ದುರಂತ: ಉತ್ತರ ಪ್ರದೇಶ ಮೂಲದ 2 ಕೂಲಿ ಕಾರ್ಮಿಕರ ಸಾವು
ಗ್ರಾನೈಟ್​ ದುರಂತ ​
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 14, 2023 | 3:51 PM

ಉಡುಪಿ, ಸೆಪ್ಟೆಂಬರ್​ 14: ಗ್ರಾನೈಟ್ ಅನ್​ಲೋಡ್ ಮಾಡುವಾಗ ಉತ್ತರ ಪ್ರದೇಶ ಮೂಲದ ಇಬ್ಬರು ಕೂಲಿ ಕಾರ್ಮಿಕರು ದುರ್ಮರಣ (death) ಹೊಂದಿರುವಂತಹ ಘಟನೆ ಉಡುಪಿ ತಾಲೂಕಿನ ಮಲ್ಪೆ ಬಳಿಯ ತೊಟ್ಟಂ ಪ್ರದೇಶದಲ್ಲಿ ನಡೆದಿದೆ. ಭಾರಿ ಗಾತ್ರದ ಗ್ರಾನೈಟ್ ಅನ್ಲೋಡ್ ಮಾಡುವಾಗ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಲ್ಪೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ನೀರಿನ ಕಟ್ಟೆಗೆ ಬಿದ್ದು ರೈತ ಸಾವನ್ನಪ್ಪಿರುವಂತಹ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬ್ಯಾಡರ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಮುನಿಯಪ್ಪ (55) ಮೃತ ರೈತ. ದನಗಳ ಮೈ ತೊಳೆಸಲು ಹೋದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ-ಬೈಕ್​ ನಡುವೆ ಭೀಕರ ಅಪಘಾತ

ನೆಲಮಂಗಲ: ಲಾರಿ ಮತ್ತು ಬೈಕ್​​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ನೆಲಮಂಗಲ ಜಾಸ್ ಟೋಲ್ ಬಳಿ ನಡೆದಿದೆ. ಬೆಂಗಳೂರಿನ ಚಿಕ್ಕಬೇಗೂರಿನ ವಿರೂಪಾಕ್ಷ(51) ಮೃತ ಬೈಕ್​ ಸವಾರ. ಅಪಘಾತದ ಬಳಿಕ ಪರಾರಿಯಾಗುತ್ತಿದ್ದ ಲಾರಿ ಜೊತೆಗೆ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಗುಂಡು ಹಾರಿಸಿ ಪತಿಯಿಂದಲೇ ಪತ್ನಿಯ ಕೊಲೆ; ಕಾರಣವೇನು ಗೊತ್ತಾ?

ಅಪಘಾತ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್​ ಉಂಟಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೊಲೆರೊ ಹಾಗೂ ಬೈಕ್ ನಡುವೆ ಡಿಕ್ಕಿ: ಸವಾರ ಸಾವು

ಮತ್ತೊಂದು ಪ್ರಕರಣದಲ್ಲಿ ಬೊಲೆರೊ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವಂತ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಸವನಹಳ್ಳಿ ಬಳಿ ನಡೆದಿದೆ. ಧನುಷ್ (25)ಮೃತ ಬೈಕ್ ಸವಾರ.

ಇದನ್ನೂ ಓದಿ: Kalaburagi News; ಮನೆಯಿಂದಲೇ ಪಾರ್ಟ್ ಟೈಮ್ ಕೆಲಸಕ್ಕೆ ಆಫರ್; ವಂಚಕರ ಮಾತು ಕೇಳಿ ಲಕ್ಷಾಂತರ ಹಣ ಕಳೆದುಕೊಂಡ ಮಹಿಳೆ

ಅಪಘಾತದ ಬಳಿಕ ಬೊಲೆರೊ ನಿಲ್ಲಿಸದೆ ಚಾಲಕ ಪರಾರಿ ಆಗಿದ್ದಾನೆ. ಬೈಕ್ ಸವಾರನಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸತತ ಮೂರು ಗಂಟೆಗಳ ಚಿಕಿತ್ಸೆ ನೀಡಿದರು ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ