ಉಡುಪಿ: ವಿದೇಶಿ ಕರೆನ್ಸಿ ನೀಡುವುದಾಗಿ ವಂಚನೆ, 6 ಮಂದಿ ಅಂತರಾಜ್ಯ ಆರೋಪಿಗಳ ಬಂಧನ

ಭಾರತೀಯ ಕರೆನ್ಸಿ ಬದಲಾಗಿ ಯುಎಇ ಕರೆನ್ಸಿಯನ್ನು ಕಡಿಮೆ ಬೆಲೆಗೆ ನೀಡುವುದಾಗಿ ಭರವಸೆ ನೀಡಿ ಹಲವರಿಗೆ ವಂಚಿಸಿದ ಆರೋಪದಡಿ ಉಡುಪಿ ಜಿಲ್ಲಾ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ಉಡುಪಿ: ವಿದೇಶಿ ಕರೆನ್ಸಿ ನೀಡುವುದಾಗಿ ವಂಚನೆ, 6 ಮಂದಿ ಅಂತರಾಜ್ಯ ಆರೋಪಿಗಳ ಬಂಧನ
ಉಡುಪಿ ಪೊಲೀಸ್​ ಠಾಣೆ
Follow us
|

Updated on:Apr 03, 2023 | 8:16 AM

ಉಡುಪಿ: ಭಾರತೀಯ ಕರೆನ್ಸಿ (Indian Currency) ಬದಲಾಗಿ ಯುಎಇ ದಿರ್ಹಾಮ್ (ದುಬೈ ಹಣ) ಅನ್ನು (UAE Dirham) ಕಡಿಮೆ ಬೆಲೆಗೆ ನೀಡುವುದಾಗಿ ಭರವಸೆ ನೀಡಿ ಹಲವು ವ್ಯಕ್ತಿಗಳಿಗೆ ವಂಚಿಸಿದ ಆರೋಪದಡಿ ಉಡುಪಿ ಜಿಲ್ಲಾ ಪೊಲೀಸರು (Udupi District Police) ಆರು ಮಂದಿ ಅಂತರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿ ಮೂಲದ, ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್ ಪೋಲಾಶ್ ಖಾನ್ (42), ಮುಂಬೈ ಮೂಲದ, ಮಹಮ್ಮದ್ ಮಹತಾಬ್ ಬಿಲ್ಲಾಲ್ ಶೇಕ್ (43), ಪಶ್ಚಿಮ ಬಂಗಾಳದ ಮಹಮ್ಮದ್ ಫಿರೋಜ್ (30), ದೆಹಲಿಯಲ್ಲಿ ವಾಸವಾಗಿರುವ ನೂರ್ ಮಹಮ್ಮದ್ (36) ಹರಿಯಾಣದ ಮೀರಜ್ ಮತ್ತು ದೆಹಲಿ ಮೂಲದ ಮೊಹಮ್ಮದ್ ಜಹಾಂಗೀರಾ (60) ಬಂಧಿತ ಆರೋಪಿಗಳು.

ಆರೋಪಿಗಳು ಕರೆನ್ಸಿ ವಿನಿಮಯದಲ್ಲಿ ಕಡಿಮೆ ಬೆಲೆಗೆ ಯುಎಇ ದಿರ್ಹಾಮ್ ನೀಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಗಳ ವಿರುದ್ಧ ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣೆಗಳಲ್ಲಿ ವಂಚನೆಗೆ ಒಳಗಾದವರು ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ಭೇದಿಸಲು ಉಡುಪಿ ಎಸ್ಪಿ ಅಕ್ಷಯ ಎಂ.ಹೆಚ್ ವಿಶೇಷ ತಂಡ ರಚಿಸಿದ್ದರು.

ಇದನ್ನೂ ಓದಿ: ಟ್ರಾಫಿಕ್​ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿದ್ದ ಮೂವರ ಬಂಧನ

ಆರೋಪಿಗಳು ಕಡಿಮೆ ದರದಲ್ಲಿ ಭಾರತೀಯ ಕರೆನ್ಸಿಗೆ ಬದಲಾಗಿ ಯುಎಇ ದಿರ್ಹಾಮ್‌ಗಳನ್ನು ನೀಡುವ ಮೂಲಕ ಸಂತ್ರಸ್ತರನ್ನು ಮೊದಲು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ. ನಂತರ, ಸಂತ್ರಸ್ತರಿಗೆ ತಮ್ಮ ಬಳಿ ಹೆಚ್ಚು ವಿದೇಶಿ ಕರೆನ್ಸಿ ಇದೆ ಎಂದು ಮನದಟ್ಟು ಮಾಡುತ್ತಿದ್ದರು. ನಂತರ, ಆರೋಪಿಗಳು ಹಣ ಬದಲಾಯಿಸಿಕೊಳ್ಳಲು, ಸ್ಥಳ ನಿಗದಿ ಮಾಡುತ್ತಿದ್ದರು. ಹಣ ಬದಲಾಯಿಸಿಕೊಳ್ಳಲು ಸ್ಥಳಕ್ಕೆ ಬಂದ ಸಂತ್ರಸ್ತರಿಗೆ ದಿರಾಹಮ್‌ಗಳ ಬದಲಿಗೆ ಬಟ್ಟೆಯಲ್ಲಿ ಸುತ್ತಿದ ಸಾಬೂನಿನ ಪ್ಯಾಕೆಟ್​​ನ್ನು ನೀಡುತ್ತಿದ್ದರು. ಸಂತ್ರಸ್ತರು ಆರೋಪಿ ನೀಡಿದ ವಿದೇಶಿ ಕರೆನ್ಸಿ ನೋಟುಗಳಿರುವ ಬ್ಯಾಗ್​​ನ್ನು ಪರಿಶೀಲಿಸುವ ಮೊದಲೇ ಆರೋಪಿಗಳು ಹಣವನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗುತ್ತಿದ್ದರು ಎಂದು ಎಸ್​ಪಿ ಎಸ್ಪಿ ಅಕ್ಷಯ ಎಂ.ಹೆಚ್ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ದೆಹಲಿ ಮತ್ತು ದಾವಣಗೆರೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸನ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇದೇ ರೀತಿಯ ಅಪರಾಧ ಎಸಗಿದ್ದಾರೆ ಎಂದು ಎಸ್ಪಿ ಅಕ್ಷಯ್ ಹೇಳಿದ್ದಾರೆ. ಆರೋಪಿಗಳನ್ನು ಮಾರ್ಚ್ 31 ರಂದು ಬಂಧಿಸಲಾಯಿತು ಮತ್ತು ಅವರನ್ನು ಕಸ್ಟಡಿಗೆ ಪಡೆದ ನಂತರ ಪೊಲೀಸರು 100 ದಿರ್ಹಮ್ ಮೌಲ್ಯದ 32 ವಿದೇಶಿ ಕರೆನ್ಸಿ ನೋಟುಗಳು, 19 ಮೊಬೈಲ್ ಫೋನ್‌ಗಳು, 6.29 ಲಕ್ಷ ರೂ. ಹಣ, ಮೂರು ಮೋಟಾರ್‌ಸೈಕಲ್‌ಗಳು ಮತ್ತು 30 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:54 am, Mon, 3 April 23

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು