ಉಡುಪಿ: ಮಾದಕ ಲೋಕದ ನಂಟು ಹೊಂದಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಮಾಹೆ ವಿವಿಗೆ ತಾಕೀತು ಮಾಡಿದ ಪೊಲೀಸ್ ಇಲಾಖೆ

ಇತ್ತೀಚೆಗೆ ಮಂಗಳೂರಿನಲ್ಲಿ ಅನೇಕ ವೈದ್ಯರು ಡ್ರಗ್ಸ್ ದಂಧೆಯಲ್ಲಿ ಸಿಲುಕಿದ್ದರು. ಇದರ ನಂಟು ಉಡುಪಿಯಲ್ಲೂ ಬೆಳೆದಿದೆ. ಮಣಿಪಾಲ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಸಕ್ರೀಯವಾಗಿದ್ದು, ಕ್ರಮಕ್ಕೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.

ಉಡುಪಿ: ಮಾದಕ ಲೋಕದ ನಂಟು ಹೊಂದಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಮಾಹೆ ವಿವಿಗೆ ತಾಕೀತು ಮಾಡಿದ ಪೊಲೀಸ್ ಇಲಾಖೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Feb 16, 2023 | 3:11 PM

ಉಡುಪಿ: ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು ಹಾಗೂ ವೈದ್ಯರು ಭಾಗಿಯಾಗಿ ಅರೆಸ್ಟ್ ಆಗಿದ್ದ ಡ್ರಗ್ಸ್ ದಂಧೆ (Drugs Racket) ಪ್ರಕರಣ ಇದೀಗ ಉಡುಪಿಗೂ ಕಾಲಿಟ್ಟಿದೆ. ಈ ಬಗ್ಗೆ ತಿಳಿದು ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಅಂತಹವರ ವಿರುದ್ಧ ಕ್ರಮಕ್ಕೆ ಸೂಚಿಸಿದೆ. ಮಣಿಪಾಲದ ಕೆಲವು ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ತೊಡಗಿಕೊಂಡಿದ್ದಾರೆ. ಅದರಲ್ಲೂ ಮಾಹೆ ವಿಶ್ವವಿದ್ಯಾಲಯದ (MAHE University) ವಿದ್ಯಾರ್ಥಿಗಳು. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಅವರು ವಿಶ್ವವಿದ್ಯಾಲಯಕ್ಕೆ ತಾಕೀತು ಮಾಡಿದ್ದಾರೆ. ಸದ್ಯ ಪೊಲೀಸ್ ಇಲಾಖೆಯ ಒತ್ತಡಕ್ಕೆ ಮಣಿದ ವಿವಿ, ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ತನಿಖೆಗೆ ಸಹಕರಿಸಲು ನಿರ್ಧಾರಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಅಕ್ಷಯ್ ಮಚ್ಚೀಂದ್ರ ಹಾಕೆ, ಮಣಿಪಾಲದ ಕೆಲ ವಿದ್ಯಾರ್ಥಿಗಳು ಡ್ರಗ್ಸ್ ಪೆಡ್ಲಿಂಗ್​ನಲ್ಲಿ ಭಾಗಿಯಾಗಿದ್ದಾರೆ. ಹಾಗಾಗಿ ಕಾಲೇಜು ಆಡಳಿತ ಮಂಡಳಿಗಳಿಗೆ ಎಚ್ಚರಿಕೆ ನೀಡಿದ್ದೇವೆ. ಡ್ರಗ್ ಪೆಡ್ಲರ್ಗಳ ಬಗ್ಗೆ ಎಚ್ಚರ ನೀಡಿದ್ದೇವೆ. ವಿದ್ಯಾರ್ಥಿಗಳು ಅರಿವು ಇದ್ದೇ ಈ ಕೃತ್ಯ ಮಾಡುತ್ತಿದ್ದಾರೆ. ಕೇವಲ ಕಾನೂನು ಕ್ರಮ ಎಫ್ಐಆರ್​ಗಳಿಂದ ಪ್ರಯೋಜನ ಇಲ್ಲ. ಕಾಲೇಜು ಆಡಳಿತ ಮಂಡಳಿಗಳು ಕೂಡ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಹೇಳಿರುವುದಾಗಿ ತಿಳಿಸಿದರು.

ಪೊಲೀಸ್ ಇಲಾಖೆಯ ಸೂಚನೆಗೆ ಮಾಹೆ ವಿಶ್ವವಿದ್ಯಾಲಯ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈಗಾಗಲೇ ಇಬ್ಬರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣ ಇತ್ಯರ್ಥ ಆಗುವವರೆಗೆ ಶೈಕ್ಷಣಿಕ ಚಟುವಟಿಕೆಗೆ ಅವಕಾಶವಿಲ್ಲ. ಕಾನೂನು ವಿಚಾರಣೆ ಮುಗಿಯುವವರೆಗೆ ತರಗತಿಗಳಿಂದ ಡಿಬಾರ್ ಮಾಡಲಾಗಿದೆ. ವಿಶ್ವವಿದ್ಯಾಲಯ ಕೂಡ ಆಂತರಿಕ ಶಿಸ್ತು ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ಹಾಳು ಮಾಡುವ ಉದ್ದೇಶ ನಮಗೆ ಇಲ್ಲ. ಕೆಟ್ಟ ಚಟಗಳಲ್ಲಿ ಭಾಗಿಯಾದರೆ ಯಾರು ಕೂಡ ರಕ್ಷಣೆಗೆ ಬರೋಲ್ಲ ಅನ್ನೋದು ವಿದ್ಯಾರ್ಥಿಗಳಿಗೆ ಗೊತ್ತಾಗಬೇಕು. ಮಾಹೆ ಈ ಬಗ್ಗೆ ಕಠಿಣ ಕ್ರಮ ಕೈಗೊಂಡಿದೆ ಇತರ ಶಿಕ್ಷಣ ಸಂಸ್ಥೆಗಳಿಗೂ ಸೂಚನೆ ನೀಡಿದ್ದೇವೆ ಎಂದರು.

ಇದನ್ನೂ ಓದಿ: ಸವದತ್ತಿ ಯಲ್ಲಮ್ಮ ಸನ್ನಿಧಾನದಲ್ಲಿಯೇ ಮದ್ಯ ಮಾರಾಟ, ದಂಧೆಕೋರರಿಗೆ ಸಾಥ್ ಕೊಟ್ಟರಾ ಅಬಕಾರಿ, ಪೊಲೀಸ್ ಸಿಬ್ಬಂದಿ

ಅನ್ಯ ರಾಜ್ಯದ ವಿದ್ಯಾರ್ಥಿಗಳು ಪಾರ್ಸೆಲ್ ಮೂಲಕ ಡ್ರಗ್ಸ್ ಧರಿಸಿಕೊಳ್ಳುತ್ತಾರೆ. ಹೊಸ ಟೆಕ್ನಿಕ್ ಬಳಸಿ ಪಾರ್ಸೆಲ್ ತರಿಸಿಕೊಳ್ಳುತ್ತಾರೆ ಒಮ್ಮೆ ಈ ಕೃತ್ಯದಲ್ಲಿ ಭಾಗಿಯಾದರೆ ನೆಟ್ವರ್ಕಿಂಗ್ ಗಟ್ಟಿಯಾಗುತ್ತದೆ. ಮಹಾರಾಷ್ಟ್ರ ಚಂದ್ರಪುರದ ಒಬ್ಬ ವಿದ್ಯಾರ್ಥಿ ಹಾಗೂ ಮಧ್ಯಪ್ರದೇಶದ ಓರ್ವ ವಿದ್ಯಾರ್ಥಿ ವಿರುದ್ಧ ಕ್ರಮ ಜರುಗಿಸಲಾಗಿದೆ. ಎಡಿಜಿಪಿ ಅಲೋಕ್ ಕುಮಾರ್ ಅವರ ಸೂಚನೆಯಂತೆ ಈ ಹೊಸ ಕ್ರಮ ಕೈಗೊಂಡಿದ್ದೇವೆ. ಮಂಗಳೂರು ಘಟನೆಯ ನಂತರ ಎಚ್ಚೆತ್ತು ಈ ಕ್ರಮಕ್ಕೆ ಮುಂದಾಗಿದ್ದೇವೆ. ಮಣಿಪಾಲ ಹಾಗೂ ಸೆನ್ ಪೊಲೀಸ್ ಠಾಣೆಯಲ್ಲಿ ಈ ವಿದ್ಯಾರ್ಥಿಗಳ ಪ್ರಕರಣ ದಾಖಲಾಗಿತ್ತು. ಪ್ರತಿದಿನ ತಲಾ ಒಂದರಂತೆ ಪ್ರಕರಣ ದಾಖಲಿಸುತ್ತಿದ್ದೇವೆ ಎಂದರು.

ಸ್ಮಾರ್ಟ್ ವಾಚ್ ಮೂಲಕ ಡ್ರಗ್ಸ್ ದಂಧೆ?

ಮಣಿಪಾಲ ವಿದ್ಯಾರ್ಥಿಗಳ ಹೊಸ ಮಾದರಿಯ ಡ್ರಗ್ಸ್ ಜಾಲ ಪತ್ತೆಯಾಗಿದ್ದು, LSD stips ಗಳನ್ನು ಸ್ಮಾರ್ಟ್ ವಾಚ್ ಜೊತೆಗೆ ಪಾರ್ಸೆಲ್ ಮಾಡಿ ಕಳಿಸುತ್ತಿದ್ದಾರೆ. ಆನ್ ಲೈನ್ ಮೂಲಕ ಸ್ಮಾರ್ಟ್ ವಾಚ್ ಖರೀದಿ ಮಾಡಿದಂತೆ ಬಿಂಬಿಸಲಾಗುತ್ತದೆ. ಪಾರ್ಸೆಲ್ ಮೂಲಕ ಡೆಲಿವರಿ ಮಾಡಿದಂತೆ ನಟಿಸುತ್ತಾರೆ. ಬಾಕ್ಸ್​ನ ಒಳಗೆ ಕ್ರಮಬದ್ಧವಾಗಿ ಪ್ಯಾಕಿಂಗ್ ಮಾಡುತ್ತಾರೆ. ಸ್ಮಾರ್ಟ್ ವಾಚ್ ಸ್ಟಿಕರ್ ಕೂಡ ಹಾಗೆ ಇರುತ್ತದೆ. ವಾಚ್ ಜೊತೆಗೆ ಇರುವ ಮಾಹಿತಿ ನೀಡುವ ಬುಕ್ ನೆಟ್ ಒಳಗೆ ಈ ಸ್ಡ್ರಿಪ್ಸ್ ಇಡಲಾಗುತ್ತದೆ. ಖಚಿತ ವರ್ತಮಾನದ ಮೇರೆಗೆ ಇಂತಹ ಪ್ರಕರಣವನ್ನು ಬಯಲು ಮಾಡಿದ್ದೇವೆ. ಡಿಸೆಂಬರ್ 31ರಂದು ಈ ಮಾದರಿಯ ಪ್ರಕರಣ ನಡೆದಿತ್ತು ಎಂದು ಎಸ್​​ಪಿ ಅಕ್ಷಯ್ ಮಚ್ಚೀಂದ್ರ ಹಾಕೆ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್