ಪಿಚ್ಚನಕೆರೆ ಏರಿ ಮೇಲೆ ಚಲಿಸುತ್ತಿದ್ದ ಶಾಲಾ ಬಸ್ಸಿನಿಂದ ಚಕ್ರದಡಿಗೆ ಬಿದ್ದು ಯುಕೆಜಿ ವಿದ್ಯಾರ್ಥಿನಿ ಸಾವು

ವಿದ್ಯಾರ್ಥಿನಿ ರಕ್ಷಿತಾ ಬಸ್​​ ಬಾಗಿಲ ಬಳಿಯ ಸೀಟ್​​ನಲ್ಲಿ ಕುಳಿತಿದ್ದಳು. ಇತರೆ ವಿದ್ಯಾರ್ಥಿಗಳನ್ನು ಇಳಿಸಿ ಮುಂದೆ ಸಾಗಬೇಕಾದರೆ ಶಾಲಾ ಸಿಬ್ಬಂದಿ ಬಸ್ ನ ಬಾಗಿಲು ಹಾಕಿರಲಿಲ್ಲ. ತಿರುವಿನಲ್ಲಿ ಬ್ರೇಕ್ ಹಾಕಿದ ಸಂದರ್ಭದಲ್ಲಿ ಸೀಟಿನ ಮೇಲೆ ಕುಳಿತಿದ್ದ ವಿದ್ಯಾರ್ಥಿನಿ ಕೆಳಗಿ ಬಿದ್ದಿದ್ದಾಳೆ.

ಪಿಚ್ಚನಕೆರೆ ಏರಿ ಮೇಲೆ ಚಲಿಸುತ್ತಿದ್ದ ಶಾಲಾ ಬಸ್ಸಿನಿಂದ ಚಕ್ರದಡಿಗೆ ಬಿದ್ದು ಯುಕೆಜಿ ವಿದ್ಯಾರ್ಥಿನಿ ಸಾವು
ರಕ್ಷಿತಾ
Follow us
TV9 Web
| Updated By: ಆಯೇಷಾ ಬಾನು

Updated on:Jan 10, 2023 | 10:39 AM

ರಾಮನಗರ: ಶಾಲಾ ಬಸ್(School Bus)​​ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ರಕ್ಷಿತಾ(6) ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ‌ತಾಲೂಕಿನ ಪಿಚ್ಚನಕೆರೆ ಬಳಿ ನಡೆದಿದೆ. ಚಾಲಕ ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ಶಾಲಾ ಬಸ್​ನಿಂದ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು ನಂತರ ಶಾಲಾ ಬಸ್ ನ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾಳೆ(Student Death).

ಸಿದ್ದೇನಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ಎಂಬುವವರ ಪುತ್ರಿ ರಕ್ಷಿತಾ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಳು. ನಿನ್ನೆ ಶಾಲೆ ಮುಗಿಸಿ ಶಾಲಾ ಬಸ್​​​ನಲ್ಲಿ ಬರುವ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿನಿ ರಕ್ಷಿತಾ ಬಸ್​​ ಬಾಗಿಲ ಬಳಿಯ ಸೀಟ್​​ನಲ್ಲಿ ಕುಳಿತಿದ್ದಳು. ಇತರೆ ವಿದ್ಯಾರ್ಥಿಗಳನ್ನು ಇಳಿಸಿ ಮುಂದೆ ಸಾಗಬೇಕಾದರೆ ಶಾಲಾ ಸಿಬ್ಬಂದಿ ಬಸ್ ನ ಬಾಗಿಲು ಹಾಕಿರಲಿಲ್ಲ. ಚಾಲಕ ತಿರುವಿನಲ್ಲಿ ಬ್ರೇಕ್ ಹಾಕಿದ ಸಂದರ್ಭದಲ್ಲಿ ಸೀಟಿನ ಮೇಲೆ ಕುಳಿತಿದ್ದ ವಿದ್ಯಾರ್ಥಿನಿ ಕೆಳಗಿ ಬಿದ್ದಿದ್ದಾಳೆ. ಬಿದ್ದಾಗ ಬಸ್ ಹಿಂದಿನ ಚಕ್ರ ತಲೆಯ ಮೇಲೆ ಹತ್ತಿದೆ. ಘಟನೆ ನಂತರ ಚಾಲಕ ಹಾಗೂ ಅಯಾ ಪರಾರಿಯಾಗಿದ್ದಾರೆ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಿಂದ ಪುಟ್ಟ ಮಕ್ಕಳಿಗೆ ಶಾಲಾ ವಾಹನ ಎಷ್ಟು ಸೇಫ್ ಎಂಬ ಆತಂಕ ಪೋಷಕರಲ್ಲಿ ಕಾಡುತ್ತಿದೆ.

ಇದನ್ನೂ ಓದಿ: ಸಾಗರ ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನಿಸಿದ ಆರೋಪಿ ಸಮೀರ್ ಪೊಲೀಸ್​​ ವಶಕ್ಕೆ ​

ಲಕ್ಷಾಂತರ ರೂ ನಗದು, ಕೆಜಿಗಟ್ಟಲೆ ಚಿನ್ನ ಎಗರಿಸಿದ ಕಿರಾತಕ

ಆಗುಂತಕನೊಬ್ಬ ವಾಣಿಜ್ಯ ನಗರಿಯನ್ನ ಬೆಚ್ಚಿಬೀಳುವಂತೆ ಮಾಡಿದ್ದಾನೆ. ಕಳೆದ ಹತ್ತು ದಿನಗಳಿಂದ ಸರಣಿ ಕಳ್ಳತನ ನಡೆಸಿದ ಖದೀಮ ಲಕ್ಷಾಂತರ ರೂಪಾಯಿ ನಗದು ಕೆಜಿಗಟ್ಟಲೆ ಬಂಗಾರ ಎಗರಿಸಿದ್ದಾನೆ. ಹತ್ತಾರು ಮನೆಗಳಿಗೆ ಕನ್ನ ಹಾಕಿ ಪರಾರಿ ಆಗುತ್ತಿದ್ದಾನೆ. ರಾತ್ರಿ ಆಗುತ್ತಿದ್ದಂತೆ ಫೀಲ್ಡ್ ಗೆ ಇಳಿದು ರಾಬರಿ ಮಾಡುತ್ತಿದ್ದಾನೆ. ಈ ಖದೀಮನಿಂದ ಹುಬ್ಬಳ್ಳಿ ಜನರ ನಿದ್ದೆಗೆಟ್ಟಿದೆ.

ಈ ಖದೀಮನ ವಿರುದ್ಧ ವಿದ್ಯಾನಗರ, ಅಶೋಕ ನಗರ ಮತ್ತು ಕೇಶ್ವಾಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹುಬ್ಬಳ್ಳಿಯ ಮೂರು ಪೊಲೀಸ್ ಠಾಣೆಯ ಪೊಲೀಸರು ನಿರಂತರ ಶೋಧ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಪೊಲೀಸರಿಗೆ ಈ ಚಾಣಾಕ್ಷ ಕಳ್ಳನ ಬಂಧನ ಸವಾಲಾಗಿದೆ. ಮಾಸ್ಕ್ ಧರಿಸಿ ಜರ್ಕಿನ್ ಧರಿಸಿ ಕೈಯಲ್ಲಿ ಬ್ಯಾಗ್ ಹಿಡಿದು ಸಿಸಿ ಕ್ಯಾಮೆರಾ ಕಣ್ತಪ್ಪಿಸಿ ಓಡಾಡುವ ಈ ಆಗಂತುಕನ ದೃಶ್ಯಗಳು ಸೆರೆಯಾಗಿವೆ. ಹೆಚ್ಚಾಗಿ ಅಪಾರ್ಟ್ಮೆಂಟ್​ಗಳನ್ನೆ ಟಾರ್ಗೆಟ್ ಮಾಡಿ ದೋಚುತ್ತಿದ್ದಾನೆ. ಮನೆಗೆ ಬೀಗ ಹಾಕಿ, ಊರಿಗೆ ಹೋದವರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುತ್ತಿದ್ದಾನೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:33 am, Tue, 10 January 23

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ