Crime News: ಉಡುಪಿ ಸಬ್​ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣುಬಿಗಿದುಕೊಂಡು ಆತ್ಮಹತ್ಯೆ

ವಿಚಾರಣಾಧೀನ ಕೈದಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಬ್​ಜೈಲಿನಲ್ಲಿ ನಡೆದಿದೆ.

Crime News: ಉಡುಪಿ ಸಬ್​ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣುಬಿಗಿದುಕೊಂಡು ಆತ್ಮಹತ್ಯೆ
ವಿಚಾರಣಾಧೀನ ಕೈದಿ ಸದಾನಂದ ಸೇರಿಗಾರ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 11, 2022 | 2:49 PM

ಉಡುಪಿ: ವಿಚಾರಣಾಧೀನ ಕೈದಿ ನೇಣುಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಬ್​ಜೈಲಿನಲ್ಲಿ ನಡೆದಿದೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ. ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್, ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸಹ ಕೈದಿಗಳು ಗಮನಿಸಿ ನೇಣಿನ ಕುಣಿಕೆಯಿಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಕೈದಿ ಕೊನೆಯುಸಿರೆಳೆದಿದ್ದಾರೆ. ಕುರುಪ್ ಸಿನಿಮಾ ಮಾದರಿಯಲ್ಲಿ ಕೊಲೆ ಮಾಡಿ ಗಮನಸೆಳೆದಿದ್ದ ಪ್ರಕರಣದ ಪ್ರಮುಖ ಆರೋಪಿ ಸದಾನಂದ ಸೆರೆಗಾರ್. ಸುಟ್ಟ ಕಾರಿನಲ್ಲಿ ತಾನೇ ಸತ್ತಿರುವುದಾಗಿ ಬಿಂಬಿಸಲು ಹೊರಟು ಆರೋಪಿ ಬಂಧಿಯಾಗಿದ್ದ. ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರು ಒತ್ತಿನೆಣೆ ಹೇನ್ಬೇರ್​ನಲ್ಲಿ ಪ್ರಕರಣ ನಡೆದಿತ್ತು.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಧಾರವಾಡ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವರಾಜ ಸುಳ್ಳದ (35) ಆತ್ಮಹತ್ಯೆ ಮಾಡಿಕೊಂಡ ರೈತ. ಮನೆಯಲ್ಲಿ ನೇಣುಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ವಿವಿಧ ಬ್ಯಾಂಕ್‌ಗಳಲ್ಲಿ ಮೃತ ಬಸವರಾಜ 3 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗುತ್ತಿದೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಕಲಬುರ್ಗಿ: ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನ ಕೊಲೆ

ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ತಾಲ್ಲೂಕಿನ ಮಾಲಗತ್ತಿ ಗ್ರಾಮದ ಬಳಿ ನಡೆದಿದೆ. ಫೈನಾನ್ಸ್​ ಲೋನ್​ ರಿಕವರಿ ಏಜೆಂಟ್ ಸಚಿನ್ ಅಂಬಲಗಿ (25) ಕೊಲೆಯಾದ ಯುವಕ. ಶನಿವಾರ (ಡಿ 10) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನು ಕೊಲೆ ಮಾಡಲಾಗಿದೆ. ಕಲಬುರ್ಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಯಾಬಿನ್ ಬಣವೆಗೆ ಬೆಂಕಿ

ಆಳಂದ ತಾಲ್ಲೂಕಿನ ಸಾಲೆಗಾಂವ ಗ್ರಾಮದಲ್ಲಿ ಸೋಯಾಬಿನ್​ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ರೈತ ಮಹಿಳೆ ಜಯಶ್ರೀ ಕುಪನೂರೆ ಎಂಬುವರಿಗೆ ಸೇರಿದ ಅಪಾರ ಮೌಲ್ಯದ ಸೋಯಾಬಿನ್ ಬಣವೆ ಬೆಂಕಿಗಾಹುತಿಯಾಗಿದೆ. ಸಾವಿರಾರು ರೂಪಾಯಿ ನಷ್ಟವಾಗಿದೆ. ಕಿಡಿಗೇಡಿಗಳ ಕೃತ್ಯಕ್ಕೆ ರೈತ ಕುಟುಂಬ ಕಂಗಾಲಾಗಿದೆ.

ಇದನ್ನೂ ಓದಿ: ಮಂಗಳೂರು: ಸುಲ್ತಾನ್​ ಜ್ಯುವೆಲರಿ ಶಾಪ್​ನಲ್ಲಿ ನೈತಿಕ ಪೊಲೀಸ್​ಗಿರಿ ನಡೆಸಿದ ಬಜರಂಗದಳದ ನಾಲ್ವರು ಕಾರ್ಯಕರ್ತರ ಬಂಧನ

ಇಂದಿರಾನಗರ ಕ್ಯಾಸಿನೊ ಮೇಲೆ ಸಿಸಿಬಿ ದಾಳಿ

ಇಂದಿರಾನಗರದಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿರುವ ಕ್ಯಾಸಿನೊ ಮೇಲೆ‌ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೂ ನಿರ್ಮಾಣ ಹಂತದಲ್ಲಿರುವ ಕ್ಯಾಸಿನೊ ಅದಾಗಲೇ ಜೂಜುಕೋರರ ಅಡ್ಡೆಯಾಗಿತ್ತು. ಗೋಲ್ಡನ್ ಚಿಪ್ಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಹೆಸರಲ್ಲಿ ಪರವಾನಗಿ ಪಡೆದು ಅಕ್ರಮವಾಗಿ ಕ್ಯಾಸಿನೊ ನಡೆಸಲಾಗುತ್ತಿತ್ತು. ಪ್ರತಿ ಟೇಬಲ್ ಮೇಲೆಯೂ ಸಿಸಿಟಿವಿ ಕಣ್ಗಾವಲು ಇರಿಸಲಾಗಿದ್ದು, 20ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಲಾಗುತ್ತಿದೆ.

ಜಗಳೂರು: ಬಕೆಟ್​ಗೆ ಬಿದ್ದು 10 ತಿಂಗಳ ಮಗು ಸಾವು

ದಾವಣಗೆರೆ: ನೀರು ತುಂಬಿದ್ದ ಬಕೆಟ್​ಗೆ ಬಿದ್ದು 10 ತಿಂಗಳ ಮಗು ಮೃತಪಟ್ಟಿರುವ ಘಟನೆ ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್​​, ತಾರಾ ದಂಪತಿ ಪುತ್ರಿ ಅನುಶ್ರಾವ್ಯ ಮೃತ ಬಾಲಕಿ. ಮನೆ ಬಳಿ ಆಟವಾಡುತ್ತಿದ್ದಾಗ ಮಗು ಬಕೆಟ್​ಗೆ ಮುಗುಚಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:42 pm, Sun, 11 December 22

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ