ಮುಂಬೈನ ಬೀಚ್ ಬಳಿ 7 ತುಂಡುಗಳಾಗಿ ವ್ಯಕ್ತಿಯ ದೇಹ ಕತ್ತರಿಸಿ ಪ್ಲಾಸ್ಟಿಕ್ ಬಾಕ್ಸ್‌ನಲ್ಲಿ ಎಸೆದ ಹಂತಕರು

ಮಹಾರಾಷ್ಟ್ರದ ಮುಂಬೈನ ಗೊರೈ ಬೀಚ್‌ಗೆ ಹೋಗುವ ಪಕ್ಕದ ರಸ್ತೆಯಲ್ಲಿ 25ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಛಿದ್ರಗೊಂಡ ದೇಹವು ಪ್ಲಾಸ್ಟಿಕ್ ಬಾಕ್ಸ್‌ಗಳಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅದನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮುಂಬೈನ ಬೀಚ್ ಬಳಿ 7 ತುಂಡುಗಳಾಗಿ ವ್ಯಕ್ತಿಯ ದೇಹ ಕತ್ತರಿಸಿ ಪ್ಲಾಸ್ಟಿಕ್ ಬಾಕ್ಸ್‌ನಲ್ಲಿ ಎಸೆದ ಹಂತಕರು
ಸಾಂದರ್ಭಿಕ ಚಿತ್ರ

Updated on: Nov 11, 2024 | 8:28 PM

ಮುಂಬೈ: ಮಹಾರಾಷ್ಟ್ರದ ಮುಂಬೈನ ಗೊರೈ ಬೀಚ್‌ಗೆ ಹೋಗುವ ರಸ್ತೆಯಲ್ಲಿ 25ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಛಿದ್ರಗೊಂಡ ದೇಹದ 7 ತುಂಡುಗಳು ಪ್ಲಾಸ್ಟಿಕ್ ಬಾಕ್ಸ್​ಗಳಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹದ ಭಾಗಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅದನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪೊಲೀಸರ ಪ್ರಕಾರ, ಭಾನುವಾರದಂದು ಬೊರಿವಲಿ ಪಶ್ಚಿಮದ ಬಾಬರ್ ಪಾಡಾ, ಪಿಕ್ಸಿ ಹೋಟೆಲ್ ಬಳಿ ಪುರುಷನ ಶವ ಪತ್ತೆಯಾಗಿದೆ. ದೇಹವನ್ನು ಏಳು ಭಾಗಗಳಾಗಿ ಕತ್ತರಿಸಿ ನಾಲ್ಕು ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಲಾಗಿತ್ತು. ಮೃತರು 25 ರಿಂದ 40 ವರ್ಷ ವಯಸ್ಸಿನವರಾಗಿದ್ದು, ಕಡು ನೀಲಿ ಬಣ್ಣದ ಜೀನ್ಸ್ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದರು. ಅವರ ಬಲಗೈಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ, 48 ಗಂಟೆಗಳಲ್ಲಿ ಇಬ್ಬರು ಮಹಿಳೆಯರ ಹತ್ಯೆ

ಮೀರಾ ರಸ್ತೆಯ ನಿವಾಸಿ ಸಂತೋಷ್ ಶಿಂಧೆ ಎಂಬುವವರು ಘಟನೆಯ ಬಗ್ಗೆ ತಿಳಿದು ಗೊರೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗೊರೈ ಪೊಲೀಸರು ಬಾಬರ್‌ಪದ ಪ್ರದೇಶದ ಶೆಫಾಲಿ ಗ್ರಾಮದಿಂದ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಫೋರೆನ್ಸಿಕ್ ತಂಡವು ಪ್ರಕರಣದ ತನಿಖೆ ನಡೆಸುತ್ತಿದ್ದು, ಘಟನಾ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ವಿಚಾರಣೆ ನಡೆಯುತ್ತಿದೆ. ಪತ್ತೆಯಾಗಿರುವ ಮೃತದೇಹ ಇನ್ನೂ ಅಪರಿಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೊರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಯುವಕನ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹತ್ಯೆಗೆ ಕಾರಣವಾಯ್ತಾ ವಿಧವೆಯೊಂದಿಗಿನ ಲವ್​?

ಈ ಬಗ್ಗೆ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಮೃತದೇಹವನ್ನು ಗುರುತಿಸಲು ಸಹಾಯ ಮಾಡಲು ಸಿಸಿಟಿವಿ ದೃಶ್ಯಗಳು ಮತ್ತು ಹತ್ತಿರದ ಪೊಲೀಸ್ ಠಾಣೆಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭಗವತಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us