ಕೆಜಿಎಫ್​ನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಮಹಿಳೆಯ ಶವ ಪತ್ತೆ, ತನಿಖೆ ಕೈಗೊಂಡ ರೈಲ್ವೆ ಪೊಲೀಸ್ರು

ರೈಲಿನಲ್ಲಿ ಪ್ಲಾಸ್ಟಿಕ್​ ಚೀಲದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ ಆಗಿರುವಂತಹ ಘಟನೆ ನಗರದಲ್ಲಿ ನಡೆದಿದೆ.

ಕೆಜಿಎಫ್​ನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಮಹಿಳೆಯ ಶವ ಪತ್ತೆ, ತನಿಖೆ ಕೈಗೊಂಡ ರೈಲ್ವೆ ಪೊಲೀಸ್ರು
ಪ್ಲಾಸ್ಟಿಕ್​ ಚೀಲದಲ್ಲಿ ಪತ್ತೆಯಾದ ಅಪರಿಚಿತ ಮಹಿಳೆಯ ಶವ.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 09, 2022 | 4:07 PM

ಬೆಂಗಳೂರು: ರೈಲಿನಲ್ಲಿ ಪ್ಲಾಸ್ಟಿಕ್​ ಚೀಲದಲ್ಲಿ ಅಪರಿಚಿತ ಮಹಿಳೆಯ ಶವ (Dead Body) ಪತ್ತೆ ಆಗಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಕೆಜಿಎಫ್​ನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಬೆಡ್ ಶೀಟ್, ಬಟ್ಟೆಗಳ ನಡುವೆ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.  ಮಹಿಳೆಯ ಯಾವುದೇ ಗುರುತುಗಳು ಪತ್ತೆಯಾಗಿಲ್ಲ. ರೈಲು ಖಾಲಿಯಾದರೂ ಚೀಲವನ್ನು ಯಾರೂ ತೆಗೆದುಕೊಂಡು ಹೋಗುತ್ತಿರಲಿಲ್ಲ. ಹಾಗಾಗಿ ಅನುಮಾನದಿಂದ ರೈಲ್ವೆ ಪೊಲೀಸರಿಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಚೀಲವನ್ನು ಬಿಚ್ಚಿ ಪರಿಶೀಲಿಸಿದಾಗ ಅಪರಿಚಿತ ಮಹಿಳೆ ಶವವಿರುವುದು ಕಂಡುಬಂದಿದೆ. ಶವದ ಗುರುತು ಪತ್ತೆಹಚ್ಚಲು ರೈಲ್ವೆ ಪೊಲೀಸರಿಂದ ಪ್ರಯತ್ನ ನಡೆದಿದೆ. ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಹತ್ಯೆ‌ಮಾಡಿದ್ದ ಆರೋಪಿ ಪತಿ ಬಂಧನ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಹತ್ಯೆ‌ಮಾಡಿದ್ದ ಆರೋಪಿ ಪತಿಯನ್ನು ಅರೆಸ್ಟ್​ ಮಾಡಲಾಗಿದೆ. ತನ್ನ ಮಗು ನೋಡಲು ಗಂಡನ ವಿರುದ್ದ ಕಾನೂನು ಹೋರಾಟ ನಡೆಸುತ್ತಿದ್ದ ಕೊಡಗು ಮೂಲದ ಪತ್ನಿ ಡಿಂಪಲ್​ನ್ನು ಪತಿ ಆನಂದ್​ ಬರ್ಬರ ಹತ್ಯೆ ಮಾಡಿದ್ದ. ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮುದ್ದನಹಳ್ಳಿ ಬಳಿ ಘಟನೆ ನಡೆದಿದೆ. ಎರಡು ವರ್ಷದ ಹಿಂದೆ ಹಾಸನ ನಗರದ ವಲ್ಲಭಾಯ್ ರಸ್ತೆಯ ಆನಂದ್​​ನನ್ನ ಪ್ರೀತಿಸಿ ಡಿಂಪಲ್ ಮದುವೆಯಾಗಿದ್ದರು. ಬಳಿಕ ದಂಪತಿಗೆ ಮಗು ಜನಿಸಿದೆ. ಆದರೆ ಆನಂದ್ ಪತ್ನಿಯಿಂದ ಮಗು ಕಿತ್ತುಕೊಂಡು ಸಂಬಂಧಿಕರ ಮನೆಯಿಲ್ಲಿ ಇಟ್ಟಿದ್ದ​. ಮಗು ಮುಖ ನೋಡ್ತಿನಿ ಎಂದು ಪತಿ ಬಳಿ ಬಂದು ಡಿಂಪಲ್ ಬೇಡಿಕೊಂಡಿದ್ದಾಳೆ. ಆದರೆ ಆನಂದ್​ ಮಾತ್ರ ಒಪ್ಪಿಗೆ ನೀಡಿಲ್ಲ. ಇದೇ ವಿಚಾರಕ್ಕೆ ಹಾಸನ ಮಹಿಳಾ ಠಾಣೆಗೆ ಪತ್ನಿ ದೂರು ನೀಡಿದ್ದು, ಕಾನೂನು ಹೋರಾಟ ನಡೆಸುತ್ತಿದ್ದಳು.

ಇದನ್ನೂ ಓದಿ: ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದ ತಾಯಿ: ಚಿಕಿತ್ಸೆ ಫಲಕಾರಿಯಾಗದೆ ಮತ್ತೊಂದು ಮಗು ಸಾವು

ಡಿಸೆಂಬರ್ 3 ರಂದು ಡಿಂಪಲ್ ನೀಡಿದ್ದ ದೂರಿನ ವಿಚಾರಣೆಗೆ ಮಹಿಳಾ ಠಾಣೆಗೆ ಆನಂದ್ ಬಂದಿದ್ದ. ವಿಚಾರಣೆ ಮುಗಿಸಿ ವಾಪಸ್ ಹೋಗುವಾಗ ಕಬಾಬ್ ಬಿರಿಯಾನಿ‌ ಕೊಡಿಸೋದಾಗಿ ಹೇಳಿ ತನ್ನದೇ ಆಟೋದಲ್ಲಿ ಕರೆದೊಯ್ದಿದ್ದ. ಈ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಬಳಿ ರಾಡ್​​ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಸದ್ಯ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಪತಿ ಅರೆಸ್ಟ್ ಆಗಿದ್ದಾನೆ.

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ರಾಮನಗರ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ರಾಮನಗರದ ರಾಮ್ ಘಡ್ ಲಾಡ್ಜ್ ನಲ್ಲಿ ನಡೆದಿದೆ. ರಾಮನಗರದ ಆರ್ಕಾವತಿ ಬಡಾವಣೆ ನಿವಾಸಿ ಬಾಲಾಜಿ(23) ಮೃತ ಯುವಕ. ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಬಿಲ್ಡಿಂಗ್​ಗಳನ್ನು ಹಾರಿ ವಿಡಿಯೋ ಚಿತ್ರೀಕರಿಸಿ ಯುವತಿಯರನ್ನು ಮಂಚಕ್ಕೆ ಕರೆಯುತ್ತಿದ್ದ ಕಾಮುಕ ಅರೆಸ್ಟ್

ಬೈಕ್​ಗೆ ಕಾರು ಡಿಕ್ಕಿ; ಅಪಘಾತದ ವಿಡಿಯೋ ವೈರಲ್

ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದ ಹೊರಭಾಗದ ನಾಲ್ಕನೇ ಮೈಲಿನಲ್ಲಿ ಬೈಕ್​ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಬೆಚ್ಚಿ ಬೀಳಿಸೊ ಸಿಸಿಟಿವಿ ದೃಶ್ಯಗಳು ಸದ್ಯ ವೈರಲ್ ಆಗಿದೆ, ನಿನ್ನೆ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಬೈಕ್ ಸವಾರ ಹನುಮಂತ (30), ಮಕ್ಕಳಾದ ಯಶವಂತ (10) ಹಾಗೂ‌ ಸಂಜೀವ(5) ಗಾಯಾಳುಗಳು. ಬೈಕ್​​ನಲ್ಲಿ ಇಬ್ಬರು ಮಕ್ಕಳನ್ನ ಕರೆದುಕೊಂಡು ಹನುಮಂತ ಎಂಬುವವರು ಸಿಂಧನೂರು ಕಡೆ ಹೊರಟಿದ್ದರು. ಈ ವೇಳೆ ಕಾರ್​ನಲ್ಲಿ ಕುಷ್ಟಗಿ ಮಾರ್ಗದಿಂದ ಸಿಂಧನೂರಿಗೆ ಬರ್ತಿದ್ದ ಕಾರು ಅತೀ ವೇಗದಲ್ಲಿದ್ದ ಕಾರಣ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:04 pm, Fri, 9 December 22

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ