ಉತ್ತರ ಪ್ರದೇಶ: ಬರೇಲಿಯಲ್ಲಿ 85 ವರ್ಷದ ಮಹಿಳೆ ಮೇಲೆ ಅತ್ಯಾಚಾರ, ಸಾವು

|

Updated on: Jul 30, 2024 | 8:48 AM

ಉತ್ತರ ಪ್ರದೇಶದ ಬರೇಲಿಯಲ್ಲಿ 85 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಬಳಿಕ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಉತ್ತರ ಪ್ರದೇಶ: ಬರೇಲಿಯಲ್ಲಿ 85 ವರ್ಷದ ಮಹಿಳೆ ಮೇಲೆ ಅತ್ಯಾಚಾರ, ಸಾವು
Follow us on

85 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಬರೇಲಿಯ ಹಫೀಜ್​ಗಂಜ್​ನಲ್ಲಿ ನಡೆದಿದೆ. ಪರಿಣಾಮ ಅವರು ಸಾವನ್ನಪ್ಪಿದ್ದಾರೆ. ಪಕ್ಕದ ಮನೆಯವನೇ ಆದ ರಾಕೇಶ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪತಿ ಮತ್ತು ಮಗ ಮೃತಪಟ್ಟ ನಂತರ ಸಂತ್ರಸ್ತೆ ಒಂಟಿಯಾಗಿ ವಾಸವಾಗಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.

ಮಹಿಳೆಯ ಸಹೋದರ ಮತ್ತು ಅತ್ತಿಗೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಸೊಸೆ ಅವರೊಂದಿಗೆ ವಾಸಿಸುತ್ತಿದ್ದಾರೆ.
ಸೊಸೆಯ ಪ್ರಕಾರ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಮನೆಗೆ ಹೋದಾಗ, ರಾಕೇಶ್ ತನ್ನ ಅತ್ತೆಯ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ಕಂಡು ದಿಗ್ಭ್ರಮೆಗೊಂಡಳು ಎಂದು ಆರ್ಯ ಹೇಳಿದರು.

ಆಕೆ ಕೂಗಲು ಆರಂಭಿಸಿದಾಗ ಆರೋಪಿ ಪರಾರಿಯಾಗಿದ್ದು, ಮನೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಚೆನ್ನೈ: ವೃದ್ಧೆಯನ್ನು ಕೊಂದು, ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುರುಳರು

ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮದ್ಯವ್ಯಸನಿಯಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಆರ್ಯ ತಿಳಿಸಿದ್ದಾರೆ. ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ