Uttar Pradesh: ಆಗ್ರಾದ ಖಾಸಗಿ ಆಸ್ಪತ್ರೆಗೆ ಬೆಂಕಿ, ಮೂವರು ಸಾವು

ಆಗ್ರಾ ಖಾಸಗಿ ಆಸ್ಪತ್ರೆಯ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ರಾಜ್ಯದ ರಾಜಧಾನಿ ಲಕ್ನೋದಿಂದ ಸುಮಾರು 330 ಕಿಮೀ ದೂರದಲ್ಲಿರುವ ನಗರದ ಶಾಹಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

Uttar Pradesh: ಆಗ್ರಾದ ಖಾಸಗಿ ಆಸ್ಪತ್ರೆಗೆ ಬೆಂಕಿ, ಮೂವರು ಸಾವು
Uttar Pradesh
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 05, 2022 | 12:39 PM

ಲಕ್ನೋ: ರಾಜ್ಯದ ಆಗ್ರಾ ಖಾಸಗಿ ಆಸ್ಪತ್ರೆಯ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ರಾಜ್ಯದ ರಾಜಧಾನಿ ಲಕ್ನೋದಿಂದ ಸುಮಾರು 330 ಕಿಮೀ ದೂರದಲ್ಲಿರುವ ನಗರದ ಶಾಹಗಂಜ್ ಪ್ರದೇಶದಲ್ಲಿ ಮನೆಯೊಂದರ ಕೆಳಗೆ ಆಸ್ಪತ್ರೆಯು ಕಾರ್ಯನಿರ್ವಹಿಸುತ್ತಿತ್ತು.

ಬೆಂಕಿ ನಂದಿಸಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಪೊಲೀಸರು ಮತ್ತು ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಮನೆಯಲ್ಲಿ ಇರಿಸಲಾಗಿದ್ದ ಫೋಮ್ ಮೆಟ್ರೆಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ. ಬೆಂಕಿ ಕಾಣಿಸಿಕೊಂಡಿದೆ ಎಂಬ ಮಾಹಿತಿಯನ್ನು ನಮಗೆ ಬಂದಿತ್ತು. ಕಟ್ಟಡದ ಮೊದಲ ಮಹಡಿಯಲ್ಲಿ ಕುಟುಂಬವೊಂದು ವಾಸವಾಗಿದ್ದರು, ನಮ್ಮ ಪ್ರೋಟೋಕಾಲ್ ಮೂಲಕ ಎಲ್ಲ ಮಾಹಿತಿಯನ್ನು ಪಡೆದಿದ್ದೇವು ಎಂದು ಆಗ್ರಾ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಬೆಂಕಿ ಹೊತ್ತಿಕೊಂಡಾಗ ಮನೆಯಲ್ಲಿದ್ದ ಕೆಲವರು ಹೊರಗೆ ಬಂದರು, ಕುಟುಂಬದ ಮೂವರು ಸದಸ್ಯರು ಬೆಂಕಿಯಲ್ಲಿ ಸಿಲುಕಿಕೊಂಡರು ಎಂದು ಅವರು ಹೇಳಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗ್ರಾ ಆಸ್ಪತ್ರೆಯಲ್ಲಿ ಮೃತಪಟ್ಟವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಇದನ್ನು ಓದಿ: ಕಾಶ್ಮೀರದ ಶೋಪಿಯಾನ್​ನಲ್ಲಿ ಸರಣಿ ಎನ್​ಕೌಂಟರ್; ಭದ್ರತಾ ಪಡೆಯಿಂದ ನಾಲ್ವರು ಉಗ್ರರ ಹತ್ಯೆ

ಬೆಂಕಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ, ಮುಖ್ಯ ವೈದ್ಯಾಧಿಕಾರಿ ಡಾ ಎಕೆ ಶ್ರೀವಾಸ್ತವ, ಆಸ್ಪತ್ರೆಗೆ ಭೇಟಿ ನೀಡಿದ ನಂತರ, ಮೃತ – ರಾಜನ್ – ವೈದ್ಯರಲ್ಲ, ಆದರೆ ಆವರಣದ ಮಾಲೀಕ ಎಂದು ಸ್ಪಷ್ಟಪಡಿಸಿದರು. ಕೆಳ ಮಹಡಿಯನ್ನು ಡಾ ಇಶು ವರ್ಮಾ ಅವರ ಹೆಸರಿನಲ್ಲಿ ನೋಂದಾಯಿಸಿದ ಆಸ್ಪತ್ರೆಗೆ ಬಾಡಿಗೆಗೆ ಪಡೆದಿದ್ದರು.

Published On - 12:33 pm, Wed, 5 October 22

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್