ಕೈಗಳನ್ನು ಹಿಂದಕ್ಕೆ ಕಟ್ಟಲಾಗಿತ್ತು, ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಪತ್ತೆ
ಏಪ್ರಿಲ್ನಲ್ಲಿ ಮದುವೆಯಾಗಬೇಕಿದ್ದ ಯುವತಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶ, ಬಲ್ಲಿಯಾದಲ್ಲಿ ನಡೆದಿದೆ. ಆಕೆಯ ಕೈಗಳನ್ನು ಹಿಂದಕ್ಕೆ ಕಟ್ಟಲಾಗಿತ್ತು. ನನ್ನ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ದೇಹದ ಸ್ಥಿತಿ ಸ್ಪಷ್ಟಪಡಿಸುತ್ತದೆ. ಈ ಘಟನೆಯಲ್ಲಿ ಅನೇಕ ಜನರು ಭಾಗಿಯಾಗಿದ್ದಾರೆ. ನಮಗೆ ನ್ಯಾಯ ಬೇಕು. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಬಲ್ಲಿಯಾ, ಮಾರ್ಚ್ 24: ಕೈಗಳನ್ನು ಹಿಂದಕ್ಕೆ ಕಟ್ಟಿ, ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಈ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಅಜ್ಜಿ ಮಾತನಾಡಿ, ಆಕೆ ಏಪ್ರಿಲ್ 25 ರಂದು ಮದುವೆಯಾಗಬೇಕಿತ್ತು. ನನ್ನ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ದೇಹದ ಸ್ಥಿತಿ ಸ್ಪಷ್ಟಪಡಿಸುತ್ತದೆ. ಈ ಘಟನೆಯಲ್ಲಿ ಅನೇಕ ಜನರು ಭಾಗಿಯಾಗಿದ್ದಾರೆ. ನಮಗೆ ನ್ಯಾಯ ಬೇಕು. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಮೇಲ್ನೋಟಕ್ಕೆ ಇದು ಪ್ರೇಮ ಪ್ರಕರಣವಿದ್ದಂತೆ ಕಾಣುತ್ತದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಓಂ ವೀರ್ ಸಿಂಗ್ ಹೇಳಿದ್ದಾರೆ. ಈ ವಿಷಯವನ್ನು ಕೂಲಂಕಷವಾಗಿ ತನಿಖೆ ಮಾಡಲು ಮತ್ತು ಸಾಧ್ಯವಾದಷ್ಟು ಬೇಗ ಸತ್ಯವನ್ನು ಬಹಿರಂಗಪಡಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.
ಕಳೆದ ಎರಡು ದಿನಗಳಿಂದ ಆಕೆ ಮನೆಯಲ್ಲಿ ಒಂಟಿಯಾಗಿದ್ದಳು, ಆಕೆಯ ಪೋಷಕರು ವೈದ್ಯಕೀಯ ಚಿಕಿತ್ಸೆಗಾಗಿ ಲಕ್ನೋಗೆ ತೆರಳಿದ್ದರು. ಆಕೆಯ ಶವ 6 ಅಡಿ ಎತ್ತರದ ನೇರಳೆ ಮರದಲ್ಲಿ ನೇತಾಡುತ್ತಿತ್ತು. ಆಕೆಯ ಕೈಗಳನ್ನು ಬೆನ್ನ ಹಿಂದೆ ಕಟ್ಟಲಾಗಿತ್ತು. ಆಕೆಯ ಸಹೋದರ ಗುಜರಾತ್ನಲ್ಲಿದ್ದಾರೆ.
ಆಕೆಯ ಸಹೋದರಿ ತನ್ನ ಕುಟುಂಬದೊಂದಿಗೆ ಅಸ್ಸಾಂನಲ್ಲಿ ವಾಸಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಹತ್ತಿರದ ಮನೆ 40-50 ಮೀಟರ್ ದೂರದಲ್ಲಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸ್ಥಳೀಯ ಪೊಲೀಸ್ ಮತ್ತು ಕಣ್ಗಾವಲಿನ ನಾಲ್ಕು ತಂಡಗಳು, ರಾಸ್ರಾದ ವೃತ್ತ ಅಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಪ್ರಕರಣದ ತನಿಖೆಗೆ ನಿಯೋಜಿಸಲಾಗಿದೆ ಎಂದು ಸಿಂಗ್ ಹೇಳಿದರು.
ಮತ್ತಷ್ಟು ಓದಿ: ದೆಹಲಿ: ಪಾರ್ಕ್ನಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಬಾಲಕ, ಬಾಲಕಿಯ ಶವ ಪತ್ತೆ
ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂದು ಕೇಳಿದಾಗ, ಮರಣೋತ್ತರ ಪರೀಕ್ಷೆಯ ನಂತರವೇ ವಿವರಗಳು ಸ್ಪಷ್ಟವಾಗುತ್ತವೆ ಎಂದು ಹೇಳಿದರು.
ಪಾರ್ಕ್ನಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಬಾಲಕ, ಬಾಲಕಿಯ ಶವ ಪತ್ತೆ ರಾಜಧಾನಿ ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೈಋತ್ಯ ಜಿಲ್ಲೆಯ ಜಿಂಕೆ ಉದ್ಯಾನದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕ, ಬಾಲಕಿಯ ಶವ ಪತ್ತೆಯಾಗಿದೆ. ಬೆಳಗ್ಗೆ 6.31 ರ ಸುಮಾರಿಗೆ ಉದ್ಯಾನದ ಭದ್ರತಾ ಸಿಬ್ಬಂದಿ ಬಲ್ಜೀತ್ ಸಿಂಗ್ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹುಡುಗ ಮತ್ತು ಹುಡುಗಿಯ ಶವಗಳು ಮರದಲ್ಲಿ ನೇತಾಡುತ್ತಿವೆ ಎಂದು ಅವರು ಪೊಲೀಸರಿಗೆ ತಿಳಿಸಿದರು. ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದಾಗ ಸುಮಾರು 17 ವರ್ಷ ವಯಸ್ಸಿನ ಹುಡುಗ ಕಪ್ಪು ಟಿ-ಶರ್ಟ್ ಮತ್ತು ನೀಲಿ ಜೀನ್ಸ್ ಧರಿಸಿದ್ದ ಮತ್ತು ಅವನೊಂದಿಗೆ ಮರಕ್ಕೆ ನೇತಾಡುತ್ತಿರುವ ಹುಡುಗಿಯ ಶವ ಪತ್ತೆಯಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಕ್ಷ್ಯಗಳನ್ನು ಸಹ ಸಂಗ್ರಹಿಸಲಾಗುತ್ತಿದೆ. ಈ ಇಬ್ಬರು ಸಾಯುವ ನಿರ್ಧಾರ ಏಕೆ ಮಾಡಿರಬಹುದು, ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತಯಾಗಿಲ್ಲ. ಯಾವುದೇ ಡೆತ್ನೋಟ್ ಕೂಡ ಸಿಕ್ಕಿಲ್ಲ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ