Uttar Pradesh: ಉತ್ತರಪ್ರದೇಶದ ಮೀರತ್​ನಲ್ಲಿ ರುಂಡವಿಲ್ಲದ ಬಾಲಕನ ಶವ ಪತ್ತೆ, ನರ ಬಲಿ ಶಂಕೆ

ಉತ್ತರ ಪ್ರದೇಶ(Uttar Pradesh) ದ ಮೀರತ್​ನಲ್ಲಿ ರುಂಡವಿಲ್ಲದ ಬಾಲಕನ ಶವವೊಂದು ಪತ್ತೆಯಾಗಿದ್ದು, ಇದು ನರ ಬಲಿ ಇರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಇಂಚೋರಿ ಪೊಲೀಸ್ ಠಾಣಾ ವ್ಯಾಪ್ತಿಯ ನಂಗ್ಲಿಶಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

UP Protest
Follow us
TV9 Web
| Updated By: ನಯನಾ ರಾಜೀವ್

Updated on: Dec 07, 2022 | 11:45 AM

ಉತ್ತರ ಪ್ರದೇಶ(Uttar Pradesh) ದ ಮೀರತ್​ನಲ್ಲಿ ರುಂಡವಿಲ್ಲದ ಬಾಲಕನ ಶವವೊಂದು ಪತ್ತೆಯಾಗಿದ್ದು, ಇದು ನರ ಬಲಿ ಇರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಇಂಚೋರಿ ಪೊಲೀಸ್ ಠಾಣಾ ವ್ಯಾಪ್ತಿಯ ನಂಗ್ಲಿಶಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಬಾಲಕನನ್ನು ನವೆಂಬರ್ 30 ರಂದು ಪ್ರೀತ್ ವಿಹಾರ್‌ನಲ್ಲಿರುವ ನಿವಾಸದಿಂದ ಅಪಹರಿಸಲಾಗಿದೆ ಬಳಿಕ ಹತ್ಯೆ ಮಾಡಲಾಗಿದೆ. ಮೀರತ್​ನ ಹೊಲವೊಂದರಲ್ಲಿ ರುಂಡ ಇಲ್ಲದ ಶವ ಪತ್ತೆಯಾಗಿತ್ತು ಸಾವಿಗೆ ನರಬಲಿಯೇ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ. ಪೊಲೀಸ್ ತಂಡವನ್ನು ಜಗತ್ಪುರಿ ನಿವಾಸಕ್ಕೆ ಕಳುಹಿಸಲಾಗಿದೆ ಮತ್ತು ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ನಿರಂತರ ವಿಚಾರಣೆಯ ಬಳಿಕ ಆರೋಪಿಯು ಮೀರತ್‌ನ ಕಬ್ಬಿನ ಗದ್ದೆಯಲ್ಲಿ ಮಗುವನ್ನು ಎಸೆದಿರುವುದನ್ನು ಒಪ್ಪಿಕೊಂಡಿದ್ದಾನೆ. ನಂತರ, ತಂಡವನ್ನು ಮೀರತ್‌ಗೆ ಕಳುಹಿಸಲಾಯಿತು, ಸ್ಥಳೀಯ ಪೊಲೀಸರು ಈಗಾಗಲೇ ತಲೆ ಮತ್ತು ಕೈಕಾಲು ಇಲ್ಲದ ದೇಹವನ್ನು ಪತ್ತೆ ಮಾಡಿದ್ದಾರೆ. ಸಮೀಪದಲ್ಲಿ ತಲೆ ಕೂಡ ಪತ್ತೆಯಾಗಿದೆ. ಸಾಮಾನುಗಳು ಮತ್ತು ಬಟ್ಟೆಗಳ ಆಧಾರದ ಮೇಲೆ, ಶವವು ಪ್ರೀತ್ ವಿಹಾರ್ ಪ್ರದೇಶದಲ್ಲಿ ಕಾಣೆಯಾದ ಬಾಲಕನದ್ದು ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮಗುವಿನ ಭೀಕರ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ, ಅವನ ಕುಟುಂಬ ಮತ್ತು ಇತರ ಸ್ಥಳೀಯರು ಪ್ರತಿಭಟನೆಗಳನ್ನು ನಡೆಸಿದರು. ಪ್ರೀತ್ ವಿಹಾರ್ ಪ್ರದೇಶದಲ್ಲಿ ರಸ್ತೆಯನ್ನು ತಡೆದರು. ಆಕ್ರೋಶಗೊಂಡ ಪ್ರತಿಭಟನಾಕಾರರು ಗುಂಪನ್ನು ಚದುರಿಸಲು ಯತ್ನಿಸುತ್ತಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ