ಉತ್ತರ ಪ್ರದೇಶ(Uttar Pradesh) ದ ಮೀರತ್ನಲ್ಲಿ ರುಂಡವಿಲ್ಲದ ಬಾಲಕನ ಶವವೊಂದು ಪತ್ತೆಯಾಗಿದ್ದು, ಇದು ನರ ಬಲಿ ಇರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಇಂಚೋರಿ ಪೊಲೀಸ್ ಠಾಣಾ ವ್ಯಾಪ್ತಿಯ ನಂಗ್ಲಿಶಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಬಾಲಕನನ್ನು ನವೆಂಬರ್ 30 ರಂದು ಪ್ರೀತ್ ವಿಹಾರ್‌ನಲ್ಲಿರುವ ನಿವಾಸದಿಂದ ಅಪಹರಿಸಲಾಗಿದೆ ಬಳಿಕ ಹತ್ಯೆ ಮಾಡಲಾಗಿದೆ. ಮೀರತ್‌ನ ಹೊಲವೊಂದರಲ್ಲಿ ರುಂಡ ಇಲ್ಲದ ಶವ ಪತ್ತೆಯಾಗಿತ್ತು ಸಾವಿಗೆ ನರಬಲಿಯೇ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಪೊಲೀಸ್ ತಂಡವನ್ನು ಜಗತ್ಪುರಿ ನಿವಾಸಕ್ಕೆ ಕಳುಹಿಸಲಾಗಿದೆ ಮತ್ತು ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ನಿರಂತರ ವಿಚಾರಣೆಯ ಬಳಿಕ ಆರೋಪಿಯು ಮೀರತ್‌ನ ಕಬ್ಬಿನ ಗದ್ದೆಯಲ್ಲಿ ಮಗುವನ್ನು ಎಸೆದಿರುವುದನ್ನು ಒಪ್ಪಿಕೊಂಡಿದ್ದಾನೆ. ನಂತರ, ತಂಡವನ್ನು ಮೀರತ್‌ಗೆ ಕಳುಹಿಸಲಾಯಿತು, ಸ್ಥಳೀಯ ಪೊಲೀಸರು ಈಗಾಗಲೇ ತಲೆ ಮತ್ತು ಕೈಕಾಲು ಇಲ್ಲದ ದೇಹವನ್ನು ಪತ್ತೆ ಮಾಡಿದ್ದಾರೆ.
ಸಮೀಪದಲ್ಲಿ ತಲೆ ಕೂಡ ಪತ್ತೆಯಾಗಿದೆ. ಸಾಮಾನುಗಳು ಮತ್ತು ಬಟ್ಟೆಗಳ ಆಧಾರದ ಮೇಲೆ, ಶವವು ಪ್ರೀತ್ ವಿಹಾರ್ ಪ್ರದೇಶದಲ್ಲಿ ಕಾಣೆಯಾದ ಬಾಲಕನದ್ದು ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.
ಮಗುವಿನ ಭೀಕರ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ, ಅವನ ಕುಟುಂಬ ಮತ್ತು ಇತರ ಸ್ಥಳೀಯರು ಪ್ರತಿಭಟನೆಗಳನ್ನು ನಡೆಸಿದರು. ಪ್ರೀತ್ ವಿಹಾರ್ ಪ್ರದೇಶದಲ್ಲಿ ರಸ್ತೆಯನ್ನು ತಡೆದರು. ಆಕ್ರೋಶಗೊಂಡ ಪ್ರತಿಭಟನಾಕಾರರು ಗುಂಪನ್ನು ಚದುರಿಸಲು ಯತ್ನಿಸುತ್ತಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ