Crime News: ಅಶ್ಲೀಲ ವಿಡಿಯೋ ನೋಡಿ ಬಾಲಕನ ಮೇಲೆ ಅತ್ಯಾಚಾರವೆಸಗಿ ಕೊಂದ ಮದರಸಾ ಶಿಕ್ಷಕ

ಉತ್ತರ ಪ್ರದೇಶದಲ್ಲಿ ಮದರಸಾದ ಶಿಕ್ಷಕನು ಅಶ್ಲೀಲ ವಿಡಿಯೋ ನೋಡಿದ ನಂತರ ಹುಡುಗನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಸೌರಾ ಗ್ರಾಮದ ಮದರಸಾದಲ್ಲಿ ಹಫೀಜ್ ಎಂಬ ಶಿಕ್ಷಕ 9 ವರ್ಷದ ಬಾಲಕನನ್ನು ಸೊಡೊಮೈಸ್ ಮಾಡಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Crime News: ಅಶ್ಲೀಲ ವಿಡಿಯೋ ನೋಡಿ ಬಾಲಕನ ಮೇಲೆ ಅತ್ಯಾಚಾರವೆಸಗಿ ಕೊಂದ ಮದರಸಾ ಶಿಕ್ಷಕ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Jul 08, 2024 | 9:44 PM

ಸೌರಾ: ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಸೌರಾ ಗ್ರಾಮದ ಮದರಸಾವೊಂದರ ಇತರ ಮಕ್ಕಳು ಆಟವಾಡಲು ಹೊರಗೆ ಹೋಗಿದ್ದಾಗ, 9 ವರ್ಷದ ಬಾಲಕನೊಬ್ಬ ಮೆಟ್ಟಿಲುಗಳ ಮೂಲಕ ಬೇರೆ ರೂಂಗೆ ಹೋಗಿದ್ದನ್ನು ಶಿಕ್ಷಕ ಹಫೀಜ್ ದಿಲ್ನವಾಜ್ ನೋಡಿದ್ದಾರೆ. ದಿನವೂ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ಶಿಕ್ಷಕ ಆ ವಿದ್ಯಾರ್ಥಿಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾನೆ.

ಆ ಶಿಕ್ಷಕ ಆ ಬಾಲಕನಿಗೆ ಸೊಡೊಮೈಸ್ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆತನ ಮೇಲೆ ಅತ್ಯಾಚಾರ ನಡೆಸಲಾಗಿದೆ. ಆತ ಕಿರುಚುವುದನ್ನು ತಡೆಯಲು ಬಾಯಿ ಮುಚ್ಚಿ, ಉಸಿರುಗಟ್ಟಿಸಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆ ಹುಡುಗ ಮೂರ್ಛೆ ಹೋಗಿದ್ದಾನೆ. ಹಫೀಜ್ ದಿಲ್ನವಾಜ್ ನಂತರ ಹುಡುಗನ ಕೈಗಳನ್ನು ಒಟ್ಟಿಗೆ ಕಟ್ಟಿ, ನಂತರ ಅವನ ಪಾದಗಳನ್ನು ಕಟ್ಟಿದನು. ಅವನು ಆತನ ಬಾಯಿಗೆ ಟೇಪ್ ಹಾಕಿದನು. ಇದರಿಂದ ಆ ಹುಡುಗನಿಗೆ ಕಿರುಚಾಡಲು ಸಾಧ್ಯವಾಗಲಿಲ್ಲ. ಈ ವೇಳೆ ಉಸಿರಾಡಲಾಗದೆ ಆ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮರ್ಯಾದಾ ಹತ್ಯೆ; ಅಂತರ್ಜಾತಿ ವಿವಾಹವಾದ ಮಗಳಿಗೆ ಬೆಂಕಿ ಹಚ್ಚಿ ಕೊಂದ ತಂದೆ

ಆಗ ಹಫೀಜ್ ದಿಲ್ನವಾಜ್ ತನ್ನ ಸೋದರ ಮಾವ ಮೌಲ್ವಿ ರಖಿಯುದ್ದೀನ್​ಗೆ ತಾನು ಮಾಡಿದ ಕೃತ್ಯವನ್ನು ತಿಳಿಸಿದ್ದಾನೆ. ಇಬ್ಬರೂ ಒಟ್ಟಾಗಿ ಶವವನ್ನು ಬಾವಿಗೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನ ಮೇಲೆ ಅತ್ಯಾಚಾರ ಮತ್ತು ಕೊಲೆ ಎರಡನ್ನೂ ಮಾಡಿರುವುದಾಗಿ ಹಫೀಜ್ ದಿಲ್ನವಾಜ್ ಒಪ್ಪಿಕೊಂಡಿದ್ದಾನೆ ಎಂದು ಮಾಲ್ವಾನ್ ಪೊಲೀಸ್ ಠಾಣೆಯ ಹಿರಿಯ ಸಬ್ ಇನ್ಸ್‌ಪೆಕ್ಟರ್ ಉಮೇಶ್ ಚಂದ್ರ ಹೇಳಿದ್ದಾರೆ.

ಮರುದಿನ ಅವರ ಕುಟುಂಬ ಮತ್ತು ಇತರ ಗ್ರಾಮಸ್ಥರ ನೇತೃತ್ವದಲ್ಲಿ ಶೋಧ ತಂಡವು ತಪಾಸಣೆ ನಡೆಸಿದಾಗ ಸಿಮೆಂಟ್ ಸಂಗ್ರಹಿಸಲು ಬಳಸಿದ ಚೀಲದಲ್ಲಿ ಶವ ಪತ್ತೆಯಾಗಿದೆ. ಜುಲೈ 3ರಂದು ಇಬ್ಬರನ್ನು ಬಂಧಿಸಲಾಗಿತ್ತು. ಆ ಬಾಲಕನನ್ನು ಅತ್ಯಾಚಾರ ಮಾಡಿ ಕೊಂದಿರುವುದಾಗಿ ದಿಲ್ನವಾಜ್ ಒಪ್ಪಿಕೊಂಡಿದ್ದಾನೆ. ತಾನು ನಿಯಮಿತವಾಗಿ ಅಶ್ಲೀಲ ವೀಡಿಯೊಗಳನ್ನು ನೋಡುತ್ತೇನೆ ಎಂದು ಆ ಶಿಕ್ಷಕ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಪ್ರೇಮಿಯ ಮೇಲಿನ ಕೋಪಕ್ಕೆ 7 ವರ್ಷದ ಮಗುವನ್ನು ಗೋಡೆಗೆ ಬಡಿದು ಕೊಲೆ

9 ವರ್ಷದ ಬಾಲಕನ ಮೇಲೆ ಅತ್ಯಾಚಾರ ಮಾಡಲು ತಾನು ನೋಡುತ್ತಿದ್ದ ವೀಡಿಯೋಗಳು ಪ್ರೇರೇಪಿಸಿತು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ. ಹುಡುಗನ ಪೋಷಕರು ಮೌಲ್ವಿಗೆ ಫೋನ್ ಮಾಡಿ ಅವರ ಮಗ ಕಾಣೆಯಾಗಿದ್ದಾನೆ ಎಂದು ದೂರು ನೀಡಿದ್ದರು. ತಮ್ಮ ಮಗನು ಗೇಟ್ ಬಳಿ ಕೊನೆಯದಾಗಿ ಕಾಣಿಸಿಕೊಂಡಿದ್ದಾನೆ. ಆತ ಬಹುಶಃ ಹೊರಗೆ ಹೋಗಿದ್ದಾನೆ ಎಂದು ಭಾವಿಸಿರುವುದಾಗಿ ಅವರು ಹೇಳಿದರು. ಬಳಿಕ ನಾಪತ್ತೆ ಪ್ರಕರಣ ದಾಖಲಿಸಲಾಯಿತು. ಅದಾಗಿ, 24 ಗಂಟೆಗಳ ಹುಡುಕಾಟದ ನಂತರ ದೇಹವನ್ನು ಪತ್ತೆಹಚ್ಚಲಾಯಿತು. ಆ ದಂಪತಿಗೆ ವಿವಿಧ ವಯಸ್ಸಿನ 3 ಹೆಣ್ಣು ಮಕ್ಕಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ