Uttar Pradesh: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿಯ ಬಂಧನ

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನರಾಯಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.

Uttar Pradesh: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿಯ ಬಂಧನ
ಸಾಮಧರ್ಭಿಕ ಚಿತ್ರ
Image Credit source: NDTV
Updated By: ಅಕ್ಷಯ್​ ಪಲ್ಲಮಜಲು​​

Updated on: Jul 23, 2022 | 4:59 PM

ಯುಪಿ: ಉತ್ತರ ಪ್ರದೇಶ ಜಿಲ್ಲೆಯ ಬಂದಾ ಗ್ರಾಮದ ವ್ಯಕ್ತಿಯೊಬ್ಬ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನರಾಯಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿ ಫರೀದ್ (22)ನನ್ನು ಶನಿವಾರ ಬಂಧಿಸಲಾಗಿದೆ ಎಂದು ಬಂದಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿನಂದನ್ ತಿಳಿಸಿದ್ದಾರೆ.

ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಆರೋಪಿಗಳು ಆಕೆಗೆ ಆಮಿಷ ಒಡ್ಡಿ  ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದನೆ. ಅಪ್ರಾಪ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.