Shocking News: 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ

ಎರಡು ವರ್ಷದ ಹೆಣ್ಣುಮಗುವನ್ನು ಅಪಹರಣ ಮಾಡಿ, ಅತ್ಯಾಚಾರ ನಡೆಸಲು ಪ್ರಯತ್ನಿಸಿದ ವ್ಯಕ್ತಿಯೊಬ್ಬ ಬಳಿಕ ಆ ಮಗುವನ್ನು ಚರಂಡಿಗೆ ಎಸೆದಿದ್ದಾನೆ. ಉತ್ತರ ಪ್ರದೇಶದಲ್ಲಿ ಈ ಹೇಯಕೃತ್ಯ ನಡೆದಿದೆ. ಆರೋಪಿ ರಾತ್ರಿ ವೇಳೆ ಆ ಬಾಲಕಿಯನ್ನು ಆಕೆಯ ಮನೆಯ ಹೊರಗಿನಿಂದ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮನೆಯವರು ಎಚ್ಚೆತ್ತುಕೊಂಡು ಆತನನ್ನು ಹಿಂಬಾಲಿಸಿದಾಗ, ಆ ಮಗುವನ್ನು ಚರಂಡಿಗೆ ಎಸೆದು ಓಡಿಹೋಗಿದ್ದಾನೆ.

Shocking News: 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ
ಸಾಂದರ್ಭಿಕ ಚಿತ್ರ
Follow us
|

Updated on: Aug 17, 2024 | 6:00 PM

ಮೀರತ್: ಭೀಕರ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಮೀರತ್‌ನಲ್ಲಿ ವ್ಯಕ್ತಿಯೊಬ್ಬ 2 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಬಾಲಕಿಯ ಮನೆಯವರು ಆತನನ್ನು ಹಿಂಬಾಲಿಸಿಕೊಂಡು ಹೋದಾಗ ಆತ ಹೆದರಿಕೊಂಡು ಆ ಮಗುವನ್ನು ಚರಂಡಿಗೆ ಎಸೆದು ಓಡಿಹೋಗಿದ್ದಾನೆ. ತೀವ್ರವಾದ ಗಾಯದಿಂದಾಗಿ ಆ ಬಾಲಕಿ ಮೃತಪಟ್ಟಿದ್ದು, ಆಕೆಯ ಶವ ಚರಂಡಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಕುರಿತು ವಿವರಗಳನ್ನು ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್, ಶುಕ್ರವಾರ ತಡರಾತ್ರಿ 20 ವರ್ಷದ ಮೋಯಿಶ್ ಎಂಬಾತ ಮೀರತ್‌ನ ಸದರ್ ಪ್ರದೇಶದಲ್ಲಿ ಮನೆಯಿಂದ ಹೊರಗೆ ತನ್ನ ಕುಟುಂಬದ ಸದಸ್ಯರೊಂದಿಗೆ ಮಲಗಿದ್ದ 2 ವರ್ಷದ ಬಾಲಕಿಯನ್ನು ತನ್ನ ಮನೆಯ ಹೊರಗಿನಿಂದ ಅಪಹರಿಸಿದ ಘಟನೆ ನಡೆದಿದೆ. ಕುಟುಂಬದ ಸದಸ್ಯರು ಎಚ್ಚರಗೊಂಡ ನಂತರ, ತಮ್ಮ ಮನೆಯ ಮಗು ಇಲ್ಲವೆಂದು ಗೊತ್ತಾಗಿದೆ. ತಕ್ಷಣ ಆರೋಪಿಯನ್ನು ಹಿಂಬಾಲಿಸಿ ಹೋಗಿದ್ದಾರೆ. ಆದರೆ, ಆತ ಆ ಬಾಲಕಿಯನ್ನು ಚರಂಡಿಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಇದರಿಂದ ಮಗು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್; ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಇದಲ್ಲದೆ, ಆರೋಪಿಯನ್ನು ಬಂಧಿಸಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್ಪಿ ಆಯುಷ್ ಸಿಂಗ್ ಹೇಳಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಉತ್ತರ ಪ್ರದೇಶವನ್ನು ಬೆಚ್ಚಿ ಬೀಳಿಸಿದ 2 ಅತ್ಯಾಚಾರ ಪ್ರಕರಣಗಳ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ