Crime News: ಕಿಡ್ನಾಪ್ ಮಾಡಿ ಜೈಲಿಗೆ ಹೋಗಿದ್ದ ಆರೋಪಿಯಿಂದ ಮತ್ತೆ ಅದೇ ಬಾಲಕಿ ಮೇಲೆ ಅತ್ಯಾಚಾರ

ಈ ಹಿಂದೆ 17 ವರ್ಷದ ಬಾಲಕಿಯನ್ನು ಅಪಹರಿಸಿದ್ದಕ್ಕಾಗಿ ಬಂಧಿತನಾಗಿದ್ದ ಬಿಹಾರದ ವ್ಯಕ್ತಿ, ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಅದೇ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಕ್ಕಾಗಿ ಮತ್ತೆ ಬಂಧಿಸಲ್ಪಟ್ಟಿದ್ದಾನೆ. ಆರೋಪಿ ವೀರ್ ನಾಥ್ ಪಾಂಡೆ ಜೈಲಿಗೆ ಹೋಗುವ ಮೊದಲು 1 ತಿಂಗಳ ಕಾಲ ಆಕೆಯನ್ನು ಸೆರೆಯಲ್ಲಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Crime News: ಕಿಡ್ನಾಪ್ ಮಾಡಿ ಜೈಲಿಗೆ ಹೋಗಿದ್ದ ಆರೋಪಿಯಿಂದ ಮತ್ತೆ ಅದೇ ಬಾಲಕಿ ಮೇಲೆ ಅತ್ಯಾಚಾರ
ಸಾಂದರ್ಭಿಕ ಚಿತ್ರ

Updated on: Sep 09, 2024 | 10:36 PM

ನವದೆಹಲಿ: 17 ವರ್ಷದ ಬಾಲಕಿಯನ್ನು ಅಪಹರಿಸಿದ ಪ್ರಕರಣದಲ್ಲಿ ಜಾಮೀನು ಪಡೆದ ಕೆಲವು ದಿನಗಳ ನಂತರ ಬಿಹಾರದ ಭೋಜ್‌ಪುರ ಜಿಲ್ಲೆಯ ನಿವಾಸಿ ವೀರ್ ನಾಥ್ ಪಾಂಡೆ ಮತ್ತೆ ಅದೇ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾನೆ. ಸ್ಥಳೀಯ ಪೊಲೀಸರ ಪ್ರಕಾರ ಸೋಮವಾರ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

2024ರ ಮೇಯಲ್ಲಿ ಆಕೆಯ ತಂದೆ ನೀಡಿದ ದೂರಿನ ಮೇರೆಗೆ ಪಾಂಡೆ ಈ ವರ್ಷದ ಆರಂಭದಲ್ಲಿ ಬಾಲಕಿಯನ್ನು ಅಪಹರಿಸಿದ್ದಕ್ಕಾಗಿ ಜೈಲು ಪಾಲಾಗಿದ್ದರು. ಕೊಯಿರೌನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಾಲಕಿ ನಾಪತ್ತೆಯಾಗಿದ್ದಾಳೆ ಎಂದು ತಿಳಿಸಿದ್ದು, ಅಪಹರಣಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿತ್ತು. ತನಿಖೆಯ ನಂತರ, ಪೊಲೀಸರು ಹುಡುಗಿಯನ್ನು ವಶಪಡಿಸಿಕೊಂಡು ಪಾಂಡೆಯನ್ನು ಬಂಧಿಸಿ ಜೈಲಿಗೆ ಹಾಕಿದ್ದರು.

ಇದನ್ನೂ ಓದಿ: Crime News: ಹುಟ್ಟುಹಬ್ಬದ ದಿನವೇ ಮಹಿಳೆಗೆ ಡ್ರಗ್ಸ್ ನೀಡಿ ಅತ್ಯಾಚಾರ

ಈ ಪ್ರಕರಣದಲ್ಲಿ ಆತ ಇತ್ತೀಚೆಗೆ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿದ್ದ. ಆಗಸ್ಟ್ 5ರಂದು ಪಾಂಡೆ ಮತ್ತೆ ಆ ಬಾಲಕಿಯನ್ನು ಅಪಹರಿಸಿದ್ದ. ಆಕೆ ಮಲವಿಸರ್ಜನೆಗೆ ಹೋಗಿದ್ದಾಗ ಕಿಡ್ನಾಪ್ ಮಾಡಿದ್ದ. 1 ತಿಂಗಳಿಗೂ ಹೆಚ್ಚು ಕಾಲ ಆತ ಆ ಬಾಲಕಿಯನ್ನು ಸೆರೆಯಲ್ಲಿಟ್ಟುಕೊಂಡು ಪದೇ ಪದೇ ಅತ್ಯಾಚಾರ ನಡೆಸಿದ್ದ. ನಂತರ ಸೆಪ್ಟೆಂಬರ್ 2ರಂದು ಪಾಂಡೆ ಜಂಗಿಗಂಜ್ ರೈಲ್ವೆ ನಿಲ್ದಾಣದ ಬಳಿ ಆ ಬಾಲಕಿಯನ್ನು ಬಿಟ್ಟು ಓಡಿಹೋಗಿದ್ದ.

ಇದನ್ನೂ ಓದಿ: Crime News: ಟಿವಿ ವಾಲ್ಯೂಮ್ ಯಾಕಿಷ್ಟು ಜೋರಾಗಿದೆ? ಎಂದ ವ್ಯಕ್ತಿಯ ಕತ್ತು ಕತ್ತರಿಸಿ ಕೊಲೆ

ಬಳಿಕ ಆ ಬಾಲಕಿ ತನಗಾದ ಲೈಂಗಿಕ ಕಿರುಕುಳದ ಬಗ್ಗೆ ಪೊಲೀಸರಿಗೆ ಹೇಳಿದ್ದಾಳೆ. ಆರೋಪಿಗಳ ವಿರುದ್ಧ ಅಪಹರಣ ಮತ್ತು ಅತ್ಯಾಚಾರಕ್ಕಾಗಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಹೊಸ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ