AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಮೀರತ್​ನ ಚರಂಡಿಯಲ್ಲಿ ರುಂಡವಿಲ್ಲದ ದೇಹ ಪತ್ತೆ

ಉತ್ತರ ಪ್ರದೇಶದ ಮೀರತ್​ನ ಚರಂಡಿಯೊಂದರಲ್ಲಿ ರುಂಡವಿಲ್ಲದ ದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ತಲೆ ಇಲ್ಲದ ದೇಹ ಕೊಳೆತ ಸ್ಥಿತಿಯಲ್ಲಿತ್ತು. ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಮೃತದೇಹವನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಇದುವರೆಗೆ ಯಾವುದೇ ಮಹತ್ವದ ಸುಳಿವು ದೊರೆತಿಲ್ಲ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಪಿಯೂಶ್ ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶದ ಮೀರತ್​ನ ಚರಂಡಿಯಲ್ಲಿ ರುಂಡವಿಲ್ಲದ ದೇಹ ಪತ್ತೆ
ಪೊಲೀಸ್Image Credit source: Jagaran English
ನಯನಾ ರಾಜೀವ್
|

Updated on: Sep 10, 2023 | 12:44 PM

Share

ಉತ್ತರ ಪ್ರದೇಶದ ಮೀರತ್​ನ ಚರಂಡಿಯೊಂದರಲ್ಲಿ ರುಂಡವಿಲ್ಲದ ದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ತಲೆ ಇಲ್ಲದ ದೇಹ ಕೊಳೆತ ಸ್ಥಿತಿಯಲ್ಲಿತ್ತು. ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಮೃತದೇಹವನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಇದುವರೆಗೆ ಯಾವುದೇ ಮಹತ್ವದ ಸುಳಿವು ದೊರೆತಿಲ್ಲ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಪಿಯೂಶ್ ಸಿಂಗ್ ಹೇಳಿದ್ದಾರೆ.

ಮೀರತ್​ನ ದೌರಾಲಾ ಪೊಲೀಸ್ ಠಾಣೆ ವ್ಯಪ್ತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಕೃಷಿ ವಿಶ್ವವಿದ್ಯಾಲಯದ ಹಿಂಭಾಗದ ಚರಂಡಿಯಲ್ಲಿ ಶವ ಪತ್ತೆಯಾಗಿದೆ. ವ್ಯಕ್ತಿ 20 ವರ್ಷ ಆಸುಪಾಸಿನವರು ಎಂದು ಹೇಳಲಾಗಿದೆ.

ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ, ನಾಪತ್ತೆಯಾದ ತಲೆಯ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ಹಣ ಕೊಡಲಿಲ್ಲವೆಂದು ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿದ ಸೊಸೆಯ ಬಂಧನ

ಶವವನ್ನು ಚರಂಡಿಗೆ ಎಸೆದ ವ್ಯಕ್ತಿಯನ್ನು ಗುರುತಿಸಲು ಪೊಲೀಸರು ಆ ಪ್ರದೇಶದಲ್ಲಿರುವ ಎಲ್ಲಾ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಲು ಮುಂದಾಗಿದ್ದಾರೆ. ಮೃತ ದೇಹವು ಹಲವು ದಿನಗಳ ಹಳೆಯದು. ನಾಪತ್ತೆಯಾದವರ ಬಗ್ಗೆ ಸಮೀಪದ ಪೊಲೀಸ್ ಠಾಣೆಗಳಿಂದಲೂ ಮಾಹಿತಿ ಪಡೆಯಲಾಗುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ