ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ; ಗುಪ್ತಾಂಗಕ್ಕೆ ಕೋಲು, ಮೆಣಸಿನ ಪುಡಿ ತುರುಕಿ ಚಿತ್ರಹಿಂಸೆ

ಉತ್ತರ ಪ್ರದೇಶದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಜಲೌನ್‌ನಲ್ಲಿ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆ ಗುಪ್ತಾಂಗದಲ್ಲಿ ಕೋಲು ಮತ್ತು ಮೆಣಸಿನ ಪುಡಿಯನ್ನು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ ಚುರ್ಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ; ಗುಪ್ತಾಂಗಕ್ಕೆ ಕೋಲು, ಮೆಣಸಿನ ಪುಡಿ ತುರುಕಿ ಚಿತ್ರಹಿಂಸೆ
ಅತ್ಯಾಚಾರ
Follow us
ಸುಷ್ಮಾ ಚಕ್ರೆ
|

Updated on: Nov 28, 2024 | 10:29 PM

ನೊಯ್ಡಾ: ಉತ್ತರ ಪ್ರದೇಶದ ಜಲೌನ್‌ನಲ್ಲಿ ನಡೆದ ಭೀಕರ ಘಟನೆಯೊಂದರಲ್ಲಿ ನರ್ಸ್‌ ಒಬ್ಬರು ತನ್ನ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ಆರೋಪಿಸಿದ್ದಾರೆ. ಇತರ ನಾಲ್ವರು ತನ್ನನ್ನು ಹೊಡೆದಿದ್ದಾರೆ ಎಂದಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಕುಟುಂಬಸ್ಥರು ಈ ಬಗ್ಗೆ ವಿವರ ನೀಡಿದ್ದು, ಅತ್ಯಾಚಾರಿಗಳು ಆಕೆಯ ಖಾಸಗಿ ಭಾಗಗಳಿಗೆ ಕೋಲು ಮತ್ತು ಮೆಣಸಿನ ಪುಡಿಯನ್ನು ತುರುಕಿ ಹಿಂಸೆ ನೀಡಿದ್ದಾರೆ. ಇದಕ್ಕೂ ಮುಂಚೆ ಅತ್ಯಾಚಾರ ನಡೆಸಿದ್ದಾರೆ ಎಂದಿದ್ದಾರೆ.

ಇಂದು ಬೆಳಗ್ಗೆ ಚುರ್ಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ನರ್ಸ್​ ಅನ್ನು ಅಡ್ಡಗಟ್ಟಿ, ಆಕೆಯನ್ನು ಪೊದೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆಕೆಯ ಪತಿ ವಿವರಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಹಿಂದೆ ಮಹಿಳಾ ಎಸ್‌ಪಿಜಿ ಕಮಾಂಡೋ ಇರುವ ಫೋಟೋ ವೈರಲ್; ಅಸಲಿ ಸಂಗತಿ ಇಲ್ಲಿದೆ

ಆದರೆ, ಪೊಲೀಸರು ಬೇರೆಯೇ ಹೇಳಿಕೆ ನೀಡಿದ್ದಾರೆ. ವರದಿಗಳ ಪ್ರಕಾರ, ಆ ಮಹಿಳೆಯು ತನ್ನ ಹಳ್ಳಿಯ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು. ವಿವಾದದ ಸಂದರ್ಭದಲ್ಲಿ ವ್ಯಕ್ತಿ ಮತ್ತು ಆತನ ಕುಟುಂಬದವರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಂತದಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣವು ಸುತ್ತಮುತ್ತಲೂ ಆಕ್ರೋಶವನ್ನು ಹುಟ್ಟುಹಾಕಿದೆ. ಕಾರ್ಯಕರ್ತರು ಸತ್ಯವನ್ನು ಬಹಿರಂಗಪಡಿಸಲು ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ