ಆಪರೇಷನ್ ವೇಳೆ ಹೊಟ್ಟೆಯಲ್ಲಿ ಹತ್ತಿ ಬಿಟ್ಟ ವೈದ್ಯರು; ಆಸ್ಪತ್ರೆಯ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು
ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಗರ್ಭಿಣಿಯೊಬ್ಬರು ಸಾವನ್ನಪ್ಪಿದ್ದಾರೆ. 'ಹೆರಿಗೆಗೆ ಶಸ್ತ್ರಚಿಕಿತ್ಸೆ ಮಾಡುವಾಗ ಹತ್ತಿಯನ್ನು ಹೊಟ್ಟೆಯಲ್ಲಿಯೇ ಬಿಟ್ಟಿದ್ದರು' ಎಂದು ಕುಟುಂಬದವರು ಆರೋಪಿಸಿದ್ದಾರೆ. ಇಂದು ಉತ್ತರ ಪ್ರದೇಶದ ಬಂಗಾರ್ಮೌ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಮತ್ತು ಹಲ್ಲೆಯಿಂದಾಗಿ ಗರ್ಭಿಣಿಯೊಬ್ಬರು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಆಕೆಯ ಹೆರಿಗೆ ನೋವನ್ನು ನಿರ್ಲಕ್ಷಿಸಿದ್ದಾರೆ ಮತ್ತು ಅವರು ದೂರು ನೀಡಿದಾಗ ಆಕೆಗೆ ಹೊಡೆದಿದ್ದಾರೆ ಎಂದು ಮೃತರ ಕುಟುಂಬ ಆರೋಪಿಸಿದೆ.

ಬಂಗಾರ್ಮೌ, ಮಾರ್ಚ್ 24: ಅಂಜಲಿ ವರ್ಮಾ ಎಂಬ ಗರ್ಭಿಣಿ ತನ್ನ ಡೆಲಿವರಿಗೆ ಇಂದು (ಮಾರ್ಚ್ 24) ಉತ್ತರ ಪ್ರದೇಶದ ಬಂಗಾರ್ಮೌ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು. ಅಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಆಕೆ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬದ ಸದಸ್ಯರು ಆಸ್ಪತ್ರೆ ಸಿಬ್ಬಂದಿ ಆಕೆಯ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಮತ್ತು ಆಕೆಯ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದ್ದರೆ ಆಕೆಯ ಜೀವವನ್ನು ಉಳಿಸಬಹುದಿತ್ತು ಎಂದು ಆರೋಪಿಸಿದ್ದಾರೆ.
ಅಂಜಲಿ ವರ್ಮಾ ಅವರ ಕುಟುಂಬದ ಪ್ರಕಾರ, ಅವರನ್ನು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆಗೆ ಸರಿಯಾದ ವೈದ್ಯಕೀಯ ಆರೈಕೆಯನ್ನು ಸಿಗಲಿಲ್ಲ. ಆಕೆಗೆ ತೀವ್ರ ಹೆರಿಗೆ ನೋವು ಶುರುವಾದಾಗ ವೈದ್ಯರು ಮತ್ತು ನರ್ಸ್ ಆಕೆಯ ನೋವನ್ನು ನಿರ್ಲಕ್ಷಿಸಿದ್ದಲ್ಲದೆ, ಆಕೆಯ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ. “ವೈದ್ಯಕೀಯ ಸಿಬ್ಬಂದಿ ಆಕೆಯ ಕೂದಲನ್ನು ಹಿಡಿದಿದ್ದು, ಆಕೆ ನೋವಾಗುತ್ತಿದೆ ಎಂದು ಹೇಳಿದಾಗ ಆಕೆಗೆ ಹೊಡೆದಿದ್ದಾರೆ” ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
ಇದನ್ನೂ ಓದಿ: ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ಶಾಕಿಂಗ್ ವಿಡಿಯೋ ಇಲ್ಲಿದೆ
ಆಪರೇಷನ್ ವೇಳೆ ಆಕೆಯ ಹೊಟ್ಟೆಯಲ್ಲಿ ಹತ್ತಿ ಮತ್ತು ಬ್ಯಾಂಡೇಜ್‌ಗಳನ್ನು ಬಿಟ್ಟು, ಆಕೆಯನ್ನು ಸಾಯುವಂತೆ ಮಾಡಿದರು ಎಂದು ಆಕೆಯ ಕುಟುಂಬದವರು ಹೇಳಿದ್ದಾರೆ. ಆಕೆಯ ಸ್ಥಿತಿ ಹದಗೆಟ್ಟಾಗ, ವೈದ್ಯರು ಆಕೆಯನ್ನು ಲಕ್ನೋದ ಆಸ್ಪತ್ರೆಗೆ ಕಳುಹಿಸಲು ನಿರ್ಧರಿಸಿದರು. ಆದರೆ, ಆಕೆಯನ್ನು ಸಾಗಿಸುವಾಗ ನಿಧನರಾದರು. ಹೆರಿಗೆಯಾಗುವ ಮೊದಲೇ ಆಕೆ ಮತ್ತು ಮಗು ಮೃತಪಟ್ಟಿದ್ದಾರೆ. ಬಂಗಾರ್ಮೌ ಸಿಎಚ್‌ಸಿಯಲ್ಲಿ ಸಕಾಲಿಕ ಮತ್ತು ಸರಿಯಾದ ಚಿಕಿತ್ಸೆ ಪಡೆದಿದ್ದರೆ ಆಕೆಯನ್ನು ಉಳಿಸಬಹುದಿತ್ತು ಎಂದು ಆಕೆಯ ಕುಟುಂಬ ಮತ್ತಷ್ಟು ಸೇರಿಸಿದೆ.
ಇದನ್ನೂ ಓದಿ: ಮೋದಿ ಬಳಿ ಉದ್ಧವ್ ಠಾಕ್ರೆ ಕ್ಷಮೆಯಾಚಿಸಿ, ಬಿಜೆಪಿ ಜೊತೆ ಮೈತ್ರಿ ಬಯಸಿದ್ದರು; ಏಕನಾಥ್ ಶಿಂಧೆ ಶಾಕಿಂಗ್ ಹೇಳಿಕೆ
ಆಕೆಯ ಕುಟುಂಬದ ಗಂಭೀರ ಆರೋಪಗಳ ನಂತರ ಬಂಗಾರ್ಮೌ ಪೊಲೀಸರು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ದೈನಿಕ್ ಭಾಸ್ಕರ್ ವರದಿಯ ಪ್ರಕಾರ, ಮರಣೋತ್ತರ ಪರೀಕ್ಷೆಯ ವರದಿ ಬಿಡುಗಡೆಯಾದ ನಂತರ ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆ ಆಸ್ಪತ್ರೆ ಆಡಳಿತವು ಎಲ್ಲಾ ಆರೋಪಗಳನ್ನು ನಿರಾಕರಿಸಿದೆ, ಅವುಗಳನ್ನು ಆಧಾರರಹಿತವೆಂದು ತಳ್ಳಿಹಾಕಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ