ಉತ್ತರ ಪ್ರದೇಶ: ಪತ್ರಕರ್ತನ ಮಗನಿಗೆ ಕಾರು ಡಿಕ್ಕಿ ಹೊಡೆದು, ಕಬ್ಬಿಣದ ರಾಡ್​​ನಿಂದ ಹೊಡೆದು ಕೊಂದ ದುಷ್ಕರ್ಮಿಗಳು

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ಪಿ ಸತ್ಪಾಲ್ ಅಂತಿಲ್, ನಿರ್ಲಕ್ಷತನ ತೋರಿದ್ದಕ್ಕಾಗಿ ಠಾಣೆಯ ಪ್ರಭಾರಿ ಅವನ್ ದೀಕ್ಷಿತ್ ಅವರನ್ನು ಅಮಾನತುಗೊಳಿಸಿದ್ದಾರೆ. ಏತನ್ಮಧ್ಯೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಉತ್ತರ ಪ್ರದೇಶ: ಪತ್ರಕರ್ತನ ಮಗನಿಗೆ ಕಾರು ಡಿಕ್ಕಿ ಹೊಡೆದು, ಕಬ್ಬಿಣದ ರಾಡ್​​ನಿಂದ ಹೊಡೆದು ಕೊಂದ ದುಷ್ಕರ್ಮಿಗಳು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 26, 2023 | 6:37 PM

ಪ್ರತಾಪಗಢ: ಉತ್ತರ ಪ್ರದೇಶದ (Uttar Pradesh) ಪ್ರತಾಪಗಢ (Pratapgarh) ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತರೊಬ್ಬರ 20 ವರ್ಷದ ಮಗನನ್ನು ಅಪರಿಚಿತ ವ್ಯಕ್ತಿಗಳು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಅತರ್ಸುಯಿ ಬದ್ಲಿ ಕಾ ಪೂರ್ವಾ (Atarsui Badli ka Purwa village) ಗ್ರಾಮದಲ್ಲಿ ಬುಧವಾರ ರಾತ್ರಿ ಬಾಘರೈ ಪೊಲೀಸ್ ಠಾಣೆ ವ್ಯಾಪ್ತಿಯ ರೋರ್ ಗ್ರಾಮದ ನಿವಾಸಿ ವಿಶಾಲ್ ಪಾಂಡೆ ಎಂಬಾತನಿಗೆ ಕಾರಿನಿಂದ ಡಿಕ್ಕಿ ಹೊಡೆದು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸದರ್ ಅಮರ್ ನಾಥ್ ಗುಪ್ತಾ ತಿಳಿಸಿದ್ದಾರೆ. ಮೃತರ ಕುಟುಂಬದವರ ದೂರಿನ ಮೇರೆಗೆ ಗ್ರಾಮದ ಮಾಜಿ ಮುಖ್ಯಸ್ಥ ರಂಗ್ ಬಹದ್ದೂರ್ ಸೇರಿದಂತೆ ಏಳು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತರ ಕುಟುಂಬ ಹಾಗೂ ಆರೋಪಿಗಳ ನಡುವಿನ ಹಳೆ ದ್ವೇಷವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ನಾಗಾಲ್ಯಾಂಡ್‌ನಲ್ಲಿ ಸಾಧ್ಯವಾದಷ್ಟು ಸ್ಥಾನಗಳಲ್ಲಿ ಸ್ಪರ್ಧೆ, ಯಾವುದೇ ಪಕ್ಷದ ಜತೆ ಮೈತ್ರಿ ಇಲ್ಲ: ಎಎಪಿ

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ಪಿ ಸತ್ಪಾಲ್ ಅಂತಿಲ್, ನಿರ್ಲಕ್ಷತನ ತೋರಿದ್ದಕ್ಕಾಗಿ ಠಾಣೆಯ ಪ್ರಭಾರಿ ಅವನ್ ದೀಕ್ಷಿತ್ ಅವರನ್ನು ಅಮಾನತುಗೊಳಿಸಿದ್ದಾರೆ. ಏತನ್ಮಧ್ಯೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಮೃತರ ಅಪ್ಪ ಉಮೇಶ್ ಪಾಂಡೆ ಸ್ಥಳೀಯ ಹಿಂದಿ ಪತ್ರಿಕೆಯೊಂದರಲ್ಲಿ ಪತ್ರಕರ್ತರಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ