ಉತ್ತರಪ್ರದೇಶ: ಸುತ್ತಿಗೆಯಿಂದ ತಲೆಗೆ ಹೊಡೆದು ಪತಿಯನ್ನು ಹತ್ಯೆ ಮಾಡಿದ ಪತ್ನಿ

|

Updated on: Jan 08, 2024 | 9:48 AM

ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ, ಮಹಿಳೆಯೊಬ್ಬರು ಸುತ್ತಿಗೆಯಿಂದ ತನ್ನ ಪತಿಯ ತಲೆಗೆ ಹೊಡದು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. 20 ವರ್ಷ ವಯಸ್ಸಿನ ಪಾರ್ವತಿ ಎಂಬ ಮಹಿಳೆಯನ್ನು ನಿನ್ನೆ ಬಂಧಿಸಲಾಗಿದೆ. ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯ ರೋಜಾ ಜಲಾಲ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರಪ್ರದೇಶ: ಸುತ್ತಿಗೆಯಿಂದ ತಲೆಗೆ ಹೊಡೆದು ಪತಿಯನ್ನು ಹತ್ಯೆ ಮಾಡಿದ ಪತ್ನಿ
ಹ್ಯಾಮರ್
Follow us on

ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ, ಮಹಿಳೆಯೊಬ್ಬರು ಸುತ್ತಿಗೆಯಿಂದ ತನ್ನ ಪತಿಯ ತಲೆಗೆ ಹೊಡದು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. 20 ವರ್ಷ ವಯಸ್ಸಿನ ಪಾರ್ವತಿ ಎಂಬ ಮಹಿಳೆಯನ್ನು ನಿನ್ನೆ ಬಂಧಿಸಲಾಗಿದೆ. ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯ ರೋಜಾ ಜಲಾಲ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪಾರ್ವತಿಯ ಪತಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಆರೋಪಿ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ, ಯಾವುದೋ ಕಾರಣಕ್ಕಾಗಿ ದಂಪತಿ ನಡುವೆ ಜಗಳ ಉಂಟಾಗಿತ್ತು. ಬಳಿಕ ಪತ್ನಿ ಪತಿಯ ತಲೆ ಮೇಲೆ ಸುತ್ತಿಗೆಯಿಂದ ಹೊಡೆದಿದ್ದಾಳೆ.

ಮತ್ತಷ್ಟು ಓದಿ: ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿಯಿಂದ ಲೈಂಗಿಕ‌ ದೌರ್ಜನ್ಯ ಆರೋಪ: ದೂರು ದಾಖಲು

ಪೊಲೀಸರು ತಕ್ಷಣವೇ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ, ಬಿಸ್ರಖ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ