Shocking News: ಅಕ್ರಮ ಸಂಬಂಧಕ್ಕೆ ವಿರೋಧ; ಗಂಡನನ್ನೇ ಬೆಂಕಿ ಹಚ್ಚಿ ಕೊಂದ ಹೆಂಡತಿ

Uttar Pradesh News: ಅಕ್ರಮ ಸಂಬಂಧವನ್ನು ವಿರೋಧಿಸಿದ್ದಕ್ಕೆ ದಂಪತಿ ನಡುವೆ ವಾಗ್ವಾದ ನಡೆದಿದ್ದು, ಸೋಮವಾರ ಸಂಜೆ ಚಮನ್ ಗಾಢ ನಿದ್ದೆಯಲ್ಲಿದ್ದಾಗ ರೇಖಾ ತನ್ನ ಗಂಡನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

Shocking News: ಅಕ್ರಮ ಸಂಬಂಧಕ್ಕೆ ವಿರೋಧ; ಗಂಡನನ್ನೇ ಬೆಂಕಿ ಹಚ್ಚಿ ಕೊಂದ ಹೆಂಡತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 10, 2022 | 12:35 PM

ಮಥುರಾ: ಅಕ್ರಮ ಸಂಬಂಧದ ಬಗ್ಗೆ ನಡೆದ ಗಲಾಟೆಯ ಬಳಿಕ ಉತ್ತರ ಪ್ರದೇಶದ (Uttar Pradesh) ಮಥುರಾ ಜಿಲ್ಲೆಯಲ್ಲಿ ಹೆಂಡತಿಯೇ ಗಂಡನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾಳೆ. ಈ ಘಟನೆಯಲ್ಲಿ ಚಿಕಿತ್ಸೆ ವೇಳೆ ಆರೋಪಿಯ ಗಂಡ ನವದೆಹಲಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪತಿಗೆ ಶೇ. 80ರಷ್ಟು ಸುಟ್ಟ ಗಾಯಗಳಾಗಿದ್ದು, ಅವರು ಮಂಗಳವಾರ ಸಂಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸೋಮವಾರ ಸಂಜೆ ಕೋಸಿಕಲನ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ರೇಖಾ ಎಂಬ ಮಹಿಳೆಗೆ ವಿವಾಹೇತರ ಸಂಬಂಧವಿತ್ತು. ಆಕೆಯ ಪತಿ ಚಮನ್ ಪ್ರಕಾಶ್ ಅದನ್ನು ವಿರೋಧಿಸಿದ್ದರು. ಇದೇ ವಿಷಯಕ್ಕೆ ಇಬ್ಬರ ನಡುವೆ ಜಗಳವಾಗುತ್ತಿತ್ತು.

ಇದನ್ನೂ ಓದಿ: Breaking ಮಧ್ಯಪ್ರದೇಶದ ಜಬಲಪುರ್​ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 8 ಮಂದಿ ಸಜೀವ ದಹನ

ಅಕ್ರಮ ಸಂಬಂಧವನ್ನು ವಿರೋಧಿಸಿದ್ದಕ್ಕೆ ದಂಪತಿ ನಡುವೆ ವಾಗ್ವಾದ ನಡೆದಿದ್ದು, ಸೋಮವಾರ ಸಂಜೆ ಚಮನ್ ಗಾಢ ನಿದ್ದೆಯಲ್ಲಿದ್ದಾಗ ರೇಖಾ ತನ್ನ ಗಂಡನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿದ್ರೆಯಿಂದ ಎದ್ದ ಚಮನ್ ಪ್ರಕಾಶ್​ನ ಕಿರುಚಾಟ ಕೇಳಿ ಅಕ್ಕಪಕ್ಕದವರು ಓಡಿ ಬಂದು ಬೆಂಕಿ ನಂದಿಸಿ, ಅವರನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ತೀವ್ರ ಸುಟ್ಟ ಗಾಯಗಳಾಗಿದ್ದ ಹಿನ್ನೆಲೆಯಲ್ಲಿ ಅವರು ದೆಹಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೋಸಿಕಲನ್ ಪೊಲೀಸ್ ಠಾಣೆ ಪ್ರಭಾರಿ ಅನುಜ್ ಕುಮಾರ್, ಮೃತ ಚಮನ್ ಪ್ರಕಾಶ್ ಕುಟುಂಬದಿಂದ ದೂರು ಬಂದಿದೆ. ಆ ದೂರಿನ ಹಿನ್ನೆಲೆಯಲ್ಲಿ ರೇಖಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್