ಪಕ್ಕದ ಮನೆಯವನಿಂದ ಅತ್ಯಾಚಾರ; ಬಾತ್​ರೂಂ ಕ್ಲೀನರ್ ಸೇವಿಸಿ ಯುವತಿ ಆತ್ಮಹತ್ಯೆಗೆ ಯತ್ನ

ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ 20 ವರ್ಷದ ಯುವತಿಯೊಬ್ಬಳು ತನ್ನ ಪಕ್ಕದ ಮನೆಯವನಿಂದ ಅತ್ಯಾಚಾರಕ್ಕೊಳಗಾಗಿದ್ದಾಳೆ. ಇದರಿಂದ ಮನನೊಂದು ಟಾಯ್ಲೆಟ್ ಕ್ಲೀನರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಪಕ್ಕದ ಮನೆಯವನಿಂದ ಅತ್ಯಾಚಾರ; ಬಾತ್​ರೂಂ ಕ್ಲೀನರ್ ಸೇವಿಸಿ ಯುವತಿ ಆತ್ಮಹತ್ಯೆಗೆ ಯತ್ನ
ಸಾಂದರ್ಭಿಕ ಚಿತ್ರ

Updated on: Jul 13, 2024 | 3:46 PM

ಕನೌಜ್: ನೆರೆಹೊರೆಯ ವ್ಯಕ್ತಿಯಿಂದ ಅತ್ಯಾಚಾರಕ್ಕೆ ಒಳಗಾದ 20 ವರ್ಷದ ಯುವತಿಯೊಬ್ಬಳು ಟಾಯ್ಲೆಟ್ ಕ್ಲೀನರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಿಂದ ಬೆಳಕಿಗೆ ಬಂದಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕನೌಜ್‌ನಲ್ಲಿ ಈ ಘಟನೆ ನಡೆದಿದ್ದು, ಬಾತ್​ರೂಮ್ ಕ್ಲೀನರ್ ಸೇವಿಸಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾದ ಯುವತಿಯ ಬಗ್ಗೆ ಪೊಲೀಸರಿಗೆ ಕರೆ ಬಂದಿತ್ತು. ಪೊಲೀಸರ ತಂಡ ಆಸ್ಪತ್ರೆಗೆ ಆಗಮಿಸಿ ಯುವತಿಯ ಹೇಳಿಕೆಯನ್ನು ಪಡೆದುಕೊಂಡಿದೆ.

ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ದೂರಿನ ಪ್ರಕಾರ, ಜುಲೈ 9ರಂದು ಯುವತಿ ತನ್ನ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ಪಕ್ಕದ ಮನೆಯ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ.

ಇದನ್ನೂ ಓದಿ: Viral Video: ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ತಂದೆ-ಮಗ; ಭೀಕರ ದೃಶ್ಯ ವೈರಲ್

ಈ ಘಟನೆಯ ನಂತರ ಆಘಾತಕ್ಕೊಳಗಾದ ಆಕೆ ಜುಲೈ 10ರಂದು ಟಾಯ್ಲೆಟ್ ಕ್ಲೀನರ್ ಸೇವಿಸಿ ಸಾಯಲು ಪ್ರಯತ್ನಿಸಿದಳು. ಸಮಾಜದಲ್ಲಿ ಟೀಕೆಗೆ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ಆಕೆ ಟಾಯ್ಲೆಟ್ ಕ್ಲೀನರ್ ಸೇವಿಸಿದ ವಿಷಯ ತಿಳಿದ ಕುಟುಂಬಸ್ಥರು ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಪ್ರಾಣ ಉಳಿಸಿದ್ದಾರೆ.

ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಎಸ್‌ಎಸ್‌ಪಿ ಆನಂದ್ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us