ಬಾಂಬ್ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಪತ್ರ ರವಾನಿಸಿದ್ದ ಆರೋಪಿ ಅರೆಸ್ಟ್
ಚೆನ್ನೈ, ಭಟ್ಕಳ ಶಹರ ಠಾಣೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಈತ ಕಳ್ಳನಾಗಿದ್ದಾನೆ ಎಂದು ತಿಳಿದುಬಂದಿದೆ.
ಉತ್ತರ ಕನ್ನಡ: ಬಾಂಬ್ ಸ್ಫೋಟಿಸುವುದಾಗಿ (Threatening to detonate bomb case) ಭಟ್ಕಳ ಶಹರ ಠಾಣೆಗೆ ಪತ್ರ ರವಾನಿಸಿದ್ದ ಆರೋಪಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಚೆನ್ನೈ, ಭಟ್ಕಳ ಶಹರ ಠಾಣೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಹನುಮಂತಪ್ಪ ಬಂಧಿತ ಆರೋಪಿಯಾಗಿದ್ದಾನೆ. ಹನುಮಂತಪ್ಪ ಚೆನ್ನೈ ಮೂಲದ ಹೊಸಪೇಟೆ ನಿವಾಸಿಯಾಗಿದ್ದು, ಚೆನ್ನೈ ಕಲೆದಾ- ನೆಕ್ಸ್ಟ್ ಟಾರ್ಗೆಟ್ ಡಿಸೆಂಬರ್-25 ಎಂಡ್ ಹ್ಯಾಪಿ ನ್ಯೂ ಇಯರ್ 2023 ಬ್ಲಾಸ್ಟ್ ಎಂದು ಇಂಗ್ಲೀಷ್ ಅಕ್ಷರದಲ್ಲಿ ಪತ್ರ ಬರೆದು ರವಾನಿಸಿದ್ದನು. ಸದ್ಯ ಬಂಧಿತ ಆರೋಪಿಯನ್ನು ಚೆನ್ನೈ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಚೆನ್ನೈನಿಂದ ಭಟ್ಕಳಕ್ಕೆ ಕರೆತಂದು ತನಿಖೆ ನಡೆಸುಲು ಪೊಲೀಸರ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ಇಂಗ್ಲಿಷ್ ಅಕ್ಷರಗಳಲ್ಲಿ ಬರೆದ ಹುಸಿ ಬಾಂಬ್ ಸ್ಫೋಟದ ಬೆದರಿಕೆ ಪತ್ರ ಭಟ್ಕಳ ಪೊಲೀಸ್ ಠಾಣೆಗೆ ತಲುಪುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಸೂಕ್ಷ್ಮ ಪ್ರಕರಣವನ್ನು ಸದ್ದಿಲ್ಲದೆ ತನಿಖೆ ನಡೆಸುತ್ತಿದ್ದರು. ಈ ನಡುವೆ ಇಂತಹದ್ದೇ ಬೆದರಿಕೆ ಪತ್ರ ಸಂಬಂಧ ತನಿಖೆ ನಡೆಸುತ್ತಿದ್ದ ಚೆನ್ನೈ ಪೊಲೀಸರು ಹನುಮಂತಪ್ಪನನ್ನು ಬಂಧಿಸಿದ್ದು, ಈತನೇ ಭಟ್ಕಳ ಶಹರ ಠಾಣೆಗೆ ಬೆದರಿಕೆ ಪತ್ರ ರವಾನಿಸಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ: ಡಿಫರೆಂಟ್ ಆಗಿ ಮನೆಗಳ್ಳತನ ಮಾಡುತ್ತಿದ್ದ ಟಚ್ ಗಣೇಶನನ್ನು ಬಂಧಿಸಿದ ಬೆಂಗಳೂರು ಪೊಲೀಸರು
ಬಂಧಿತ ಆರೋಪಿ ಕಳ್ಳನಾಗಿರುವ ಶಂಕೆ?
ಸದ್ಯ ಚೆನ್ನೈ ಪೊಲೀಸರು ಬಂಧಿಸಿದ ಆರೋಪಿ ಕಳ್ಳನಾಗಿದ್ದಾನೆ ಎನ್ನಲಾಗುತ್ತಿದೆ. ಕಳ್ಳತನ ಮಾಡಿದ್ದ ಲ್ಯಾಪ್ಟಾಪ್ ಮಾರಾಟ ಮಾಡಲು ಹೋದಾಗ ಅನುಮಾನಗೊಂಡ ಅಂಗಡಿ ಮಾಲೀಕ ಐಡಿ ಕಾರ್ಡ್ ಕೇಳಿದ್ದಾರೆ. ಈ ವೇಳೆ ಸ್ಥಳದಿಂದ ಪರಾರಿಯಾಗಿದ್ದ ಹನುಮಂತಪ್ಪ ಬಳಿಕ ಅಂಗಡಿ ಮಾಲೀಕನ ಮೇಲೆ ದ್ವೇಷಕ್ಕೆ ಬಿದ್ದು ಮಾಲೀಕನ ಮೊಬೈಲ್ ನಂಬರ್ ಉಲ್ಲೇಖಿಸಿ ಹುಸಿ ಬಾಂಬ್ ಬೆದರಿಕೆ ಪತ್ರ ಹಾಕಿರುವುದಾಗಿ ತಿಳಿದುಬಂದಿದೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:36 pm, Thu, 5 January 23