AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 2ನೇ ಕ್ಲಾಸ್ ಬಾಲಕಿಗೆ ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ

ಉತ್ತರಾಖಂಡದಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಗೆ ತನ್ನ ಖಾಸಗಿ ಅಂಗ ತೋರಿಸಿರುವ ಮೊಹಮ್ಮದ್ ಹಸೀಬ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಅವನ ಈ ಕೃತ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Crime News: 2ನೇ ಕ್ಲಾಸ್ ಬಾಲಕಿಗೆ ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Aug 29, 2024 | 9:25 PM

ನವದೆಹಲಿ: ಉತ್ತರಾಖಂಡದಲ್ಲಿ ಯುವತಿಯೊಬ್ಬಳು ತನ್ನ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಬೆನ್ನಟ್ಟಿದ ನಂತರ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. 2ನೇ ತರಗತಿಯ ಬಾಲಕಿ ಮುಂದೆ ಪ್ಯಾಂಟ್ ಬಿಚ್ಚಿದ ಯುವಕ ತನ್ನ ಗುಪ್ತಾಂಗ ತೋರಿಸಿದ್ದಾನೆ. ನಂತರ ಆಕೆಯನ್ನು ಕಿಡ್ನಾಪ್ ಮಾಡಲು ಪ್ರಯತ್ನಿಸಿದ್ದಾನೆ.

ಈ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಭಾನುವಾರ ರಾತ್ರಿ ಬಾಲಕಿ ಹಲ್ದ್ವಾನಿಯ ಕೊತ್ವಾಲಿ ಪ್ರದೇಶದಲ್ಲಿ ಆ ಬಾಲಕಿ ಮನೆಯಿಂದ ಹೊರಟಿದ್ದಾಗ ಈ ಘಟನೆ ನಡೆದಿದೆ. ಆರೋಪಿಯನ್ನು ಮೊಹಮ್ಮದ್ ಹಸೀಬ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Shocking News: ನನ್ನ ಆರ್ಡರ್ ಇನ್ನೂ ರೆಡಿ ಆಗಿಲ್ಲವಾ? ಎಂದು ಕೇಳಿದ ಗ್ರಾಹಕನನ್ನು ಕೊಂದ ಹೋಟೆಲ್ ಮಾಲೀಕ!

ಬಂಭುಲ್‌ಪುರದ ಆಜಾದ್‌ನಗರ ನಿವಾಸಿ ಮತ್ತು ವೃತ್ತಿಯಲ್ಲಿ ಬಡಗಿಯಾಗಿರುವ ಮೊಹಮ್ಮದ್ ಹಸೀಬ್ ಎಂದು ಗುರುತಿಸಲಾದ ಆರೋಪಿ, ಪ್ಯಾಂಟ್ ತೆಗೆದು ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಭಯಭೀತಳಾದ ಹುಡುಗಿ ಹತ್ತಿರದ ಮನೆಗೆ ಓಡಿ ಹೋಗುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾದಳು. ಇದರಿಂದ ಅವಳು ಬಚಾವಾಗಿದ್ದಾಳೆ. ಆದರೂ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿರುವ ಆ ಯುವಕನ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Crime News: ಪ್ರಿಯಕರನನ್ನು ರಾತ್ರಿ ಕಬ್ಬಿನ ಗದ್ದೆಗೆ ಕರೆಸಿ ಕೊಂದ ಯುವತಿಯರು

ಈ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದ್ದು, ದಾಳಿಕೋರನಿಂದ ಪರಾರಿಯಾಗುತ್ತಿದ್ದಂತೆ ಆ ಬಾಲಕಿ ಅಲುಗಾಡುತ್ತಿರುವುದು ಗೋಚರಿಸುತ್ತದೆ. ಈ ದೃಶ್ಯಾವಳಿಗಳು ಮೊಹಮ್ಮದ್ ಹಸೀಬ್‌ನನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರಿಗೆ ಸಹಾಯ ಮಾಡಿತು. ಆತನನ್ನು ಸೋಮವಾರ ಎಫ್‌ಟಿಐ ರಸ್ತೆಯಿಂದ ಬಂಧಿಸಲಾಗಿದ್ದು, ವಿಚಾರಣೆ ನಡೆಸಿದ ಪೊಲೀಸರು ಆತ ಈ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಖಚಿತಪಡಿಸಿದ್ದಾರೆ.

ಮೊಹಮ್ಮದ್ ಹಸೀಬ್‌ನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ. ಆತನನ್ನು ಸೋಮವಾರ ತಡರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ