ಬಾಗೇಶ್ವರ: ಉತ್ತರಾಖಂಡದ ಬಾಗೇಶ್ವರದಲ್ಲಿ ಇಂದು (ಗುರುವಾರ) ಕಾರು ರಸ್ತೆಯಿಂದ ಸ್ಕಿಡ್ ಆಗಿ ಸುಮಾರು 50 ಅಡಿ ಕೆಳಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಮೂವರ ಮೃತದೇಹಗಳು ಪತ್ತೆ ಮಾಡಲಾಗಿದ್ದು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾವು ಗುರುವಾರ ಮುಂಜಾನೆ 1.52 ರ ಸುಮಾರಿಗೆ ಮಾಹಿತಿಯನ್ನು ಪಡೆದುಕೊಂಡಿದ್ದೇವೆ ಮತ್ತು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಾಗೇಶ್ವರ ಪೊಲೀಸ್ ಠಾಣೆ ಪ್ರಭಾರಿ ಕೈಲಾಶ್ ನೇಗಿ ತಿಳಿಸಿದ್ದಾರೆ.
ನಾಲ್ವರು ರಾಮಲೀಲಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸಿಮ್ಟೋಲಿಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮೇಲಿಂದ ಬಿದ್ದಿದೆ. ಮೃತ ಮೂವರನ್ನು ವಿಜಯ್ ಸಿಂಗ್ 30, ರೋಹಿತ್ ಸಿಂಗ್ 20, ಮತ್ತು ಸುನಿಲ್ ಸಿಂಗ್ 21, ಮತ್ತು ಗಾಯಾಳು ಮನೋಜ್ ಕುಮಾರ್, 35, ಚಾಲಕ ಎಂದು ಗುರುತಿಸಲಾಗಿದೆ.
ಚಾಲಕ ಕಾರಿನಲ್ಲಿ ಸಿಲುಕಿಕೊಂಡಿದ್ದ. ನಾವು ಅವನನ್ನು ಹೊರಕ್ಕೆ ತೆಗೆದು ಆಸ್ಪತ್ರೆ ದಾಖಲು ಮಾಡಿದ್ದೇವೆ, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ”ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.