Uttar Pradesh: ಆಗ್ರಾದ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ

|

Updated on: Nov 13, 2023 | 9:37 AM

ಉತ್ತರ ಪ್ರದೇಶ, ಆಗ್ರಾದ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆಗ್ರಾದ ಹೋಟೆಲ್‌ವೊಂದರಲ್ಲಿ ಯುವತಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.

Uttar Pradesh: ಆಗ್ರಾದ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ
ಅಪರಾಧ
Image Credit source: Mint
Follow us on

ಉತ್ತರ ಪ್ರದೇಶ, ಆಗ್ರಾದ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಆಗ್ರಾದ ಹೋಟೆಲ್‌ವೊಂದರಲ್ಲಿ ಯುವತಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.

ತನ್ನ ಸ್ನೇಹಿತ ಮತ್ತು ಇತರ ಕೆಲವರು ತನಗೆ ಬಲವಂತವಾಗಿ ಕುಡಿಯಲು ಒತ್ತಾಯಿಸಿದರು ಎಂದು ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ, ಮೊದಲು ಕೋಣೆಯೊಳಗೆ ಎಳೆದೊಯ್ದರು ಮತ್ತು ಪ್ರತಿಭಟಿಸಲು ಮುಂದಾದಾಗ ಕೆಲವರು ಥಳಿಸಿದ್ದಾರೆ.

ಈ ಸಂಬಂಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಅತ್ಯಾಚಾರ, ಹಲ್ಲೆ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪುರುಷರು ಹಾಗೂ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ: ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ಪಿಯುಸಿ ವಿದ್ಯಾರ್ಥಿಯ ಬೆರಳು ಕತ್ತರಿಸಿದ ಹಳೆ ವಿದ್ಯಾರ್ಥಿ

ಹೋಟೆಲ್​ನಲ್ಲಿ ಉದ್ಯೋಗಿಯಾಗಿದ್ದ ಆಕೆ ಒಂದೂವರೆ ವರ್ಷದಿಂದ ಅಲ್ಲಿಯೇ ಕೆಲಸ ಮಾಡುತ್ತಿದ್ದಳು. ವಿಡಿಯೋದಲ್ಲಿ ಓರ್ವ ವ್ಯಕ್ತಿಯು ಕೋಣೆಗೆ ಆಕೆಯನ್ನು ಎಳೆದುಕೊಂಡು ಹೋಗುತ್ತಿರುವುದು ಹಾಗೂ ಸಹಾಯಕ್ಕಾಗಿ ಮನವಿ ಮಾಡುತ್ತಿರುವುದು ಕಂಡುಬಂದಿದೆ.

ಕೋಣೆಯಲ್ಲಿ ಬಲವಂತವಾಗಿ ಹಿಡಿದುಕೊಂಡು ಅಮಾನುಷವಾಗಿ ಥಳಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಗಳು ಆಕೆಗೆ ಮದ್ಯ ಸೇವಿಸುವಂತೆ ಒತ್ತಾಯಿಸಿದ್ದಾರೆ. ಮಹಿಳೆ ತಲೆಯಲ್ಲಿ ರಕ್ತಸ್ರಾವವಾಗುತ್ತಿತ್ತು. ಆರೋಪಿಯೊಬ್ಬ ಮದ್ಯದ ಬಾಟಲಿಯಿಂದ ಆಕೆಯ ತಲೆಗೆ ಹೊಡೆದಿದ್ದಾನೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ