ವೇಣೂರು ದುರಂತ: ನಿಯಮ ಮೀರಿ ಗನ್ ಪೌಡರ್ ದಾಸ್ತಾನು ಮಾಡಿದ್ದೇ ಭೀಕರ ಸ್ಫೋಟಕ್ಕೆ ಕಾರಣವಾಯ್ತ?

ದಕ್ಷಿಣ ಕನ್ನಡ ಜಿಲ್ಲೆಯ ಮೇಣೂರಿನ (Venoor) ತೋಟದ ಮನೆಯಲ್ಲಿದ್ದ ಪಟಾಕಿ ಗೋಡಾನ್​ನಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದ ಪ್ರಕರಣ ನಡೆದಿತ್ತು. ಈ ಸ್ಫೋಟ ಪ್ರಕರಣದ ಹಿಂದೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ನಿಯಮ ಮೀರಿ 100 ಕೆ.ಜಿ ಗನ್ ಪೌಡರ್ ದಾಸ್ತಾನು ಮಾಡಿರುವ ಆರೋಪವೂ ಕೇಳಿಬಂದಿದ್ದು, ಇದುವೇ ಸ್ಫೋಟಕ್ಕೆ ಕಾರಣ ಎನ್ನಲಾಗುತ್ತಿದೆ.

ವೇಣೂರು ದುರಂತ: ನಿಯಮ ಮೀರಿ ಗನ್ ಪೌಡರ್ ದಾಸ್ತಾನು ಮಾಡಿದ್ದೇ ಭೀಕರ ಸ್ಫೋಟಕ್ಕೆ ಕಾರಣವಾಯ್ತ?
ವೇಣೂರು ಪಟಾಕಿ ದುರಂತ ಕೇಸ್: ನಿಯಮ ಮೀರಿ ಗನ್ ಪೌಡರ್ ದಾಸ್ತಾನು ಮಾಡಿದ್ದೇ ಸ್ಫೋಟಕ್ಕೆ ಕಾರಣ ಎಂದು ಶಂಕಿಸಲಾಗಿದೆ (ಸಾಂದರ್ಭಿಕ ಚಿತ್ರ)
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on: Jan 30, 2024 | 12:13 PM

ಮಂಗಳೂರು, ಜ.30: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ (Venoor) ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರ ಸಾವನ್ನಪ್ಪಿದ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ನಿಯಮ ಮೀರಿ ಗನ್ ಪೌಡರ್ ದಾಸ್ತಾನು ಮಾಡಿದ್ದೇ ಸ್ಫೋಟಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

ಪಟಾಕಿಗಾಗಿ ಪೊಟ್ಯಾಸಿಯಂ ಕ್ಲೋರೈಟ್, ಪೊಟ್ಯಾಸಿಯಂ ನೈಟ್ರೇಟ್ ಬಳಕೆ ಮಾಡಲಾಗುತ್ತದೆ. ಅದರಂತೆ, ಪಟಾಕಿ ತಯಾರಿಕಾ ಘಟಕದ ಮಾಲೀಕ ಬಶೀರ್ 15 ಕೆಜಿ ಗನ್ ಪೌಡರ್ ದಾಸ್ತಾನಿಗೆ ಅನುಮತಿ ಕೇಳಿದ್ದನು. ಆದರೆ, ಈ ನಿಯಮ ಉಲ್ಲಂಘಿಸಿ 100 ಕೆಜಿ ಗನ್ ಪೌಡರ್ ದಾಸ್ತಾನು ಮಾಡಿದ್ದನು. ಪಟಾಕಿ ಲೋಡಿಂಗ್ ವೇಳೆ ಒತ್ತಡ ಉಂಟಾಗಿ ಸ್ಫೋಟವಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ವೇಣೂರು ದುರಂತ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಟಾಕಿ ತಯಾರಿಕ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

ಅತಿಯಾದ ಸ್ಪೋಟಕ ದಾಸ್ತಾನು ಇಟ್ಟಿದ್ದು ಸ್ಫೋಟ ಹಾಗೂ ಅದರ ತೀವ್ರತೆ ಹೆಚ್ಚಾಗಲು ಕಾರಣ ಎನ್ನಲಾಗುತ್ತಿದೆ. ಸದ್ಯ ಎಫ್ಎಸ್ಎಲ್ ತಂಡ ಚಾರ್ಕೋಲ್, ಗಂಧಕ, ಅಲ್ಯೂಮಿನಿಯಂ ಪೌಡರ್ ಸಹಿತ 85ಕ್ಕೂ ಹೆಚ್ಚು ವಸ್ತುಗಳ ಸ್ಯಾಂಪಲ್ ವಶಕ್ಕೆ ಪಡೆದುಕೊಂಡಿದೆ.

ಸುತ್ತೂರು ಮಠದ ಜಾತ್ರೆಗೆ ಪಟಾಕಿ ಪೂರೈಕೆಗೆ ಸಿದ್ಧತೆ

ಮೈಸೂರು ಜಿಲ್ಲೆಯಲ್ಲಿರುವ ಸುತ್ತೂರು ಮಠದ ಜಾತ್ರೆಗೆ ಪಟಾಕಿ ಪೂರೈಕೆ ಮಾಡಲು ಭಾರೀ ಪ್ರಮಾಣದಲ್ಲಿ ಪಟಾಕಿ ತಯಾರಿ ಮಾಡಲಾಗುತ್ತಿತ್ತು. ಹೀಗಾಗಿ ನಿಯಮ ಉಲ್ಲಂಘಿಸಿ ರಾಸಾಯನಿಕ ದಾಸ್ತಾನು ಇಡಲಾಗಿತ್ತು. ಆದರೆ ಫೈರ್ ಸೇಫ್ಟಿ ಬಳಕೆ ಮಾಡದೇ ನಿಯಮ ಉಲ್ಲಂಘಿಸಿ ಪಟಾಕಿ ತಯಾರಿ ಮಾಡಲಾಗುತ್ತಿತ್ತು ಎನ್ನಲಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್