ವಿಜಯಪುರ: ಕೃಷ್ಣಾ ನದಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ (suicide) ಶರಣಾಗಿರುವಂತಹ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರ ಭಾಗದಲ್ಲಿ ನಡೆದಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯ ಮಾಡಿದ್ದಾರೆ. ನದಿಯಲ್ಲಿ ಬಿದ್ದ ವ್ಯಕ್ತಿಯ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಕೋಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ನಗರದ ಆನೇಕಲ್ನ ಜಿಗಣಿಯ ಮಾದಪ್ಪನ ದೊಡ್ಡಿ ಕ್ವಾರಿಯಲ್ಲಿ ನಡೆದಿದೆ. ಶ್ರೀ ಸಾಯಿರಾಮ್ ಕಾಲೇಜಿನ ಕೇರಳ ಮೂಲದ ಬಿಇ ವಿದ್ಯಾರ್ಥಿ ಎಂದು ಹೇಳಲಾಗುತ್ತಿದ್ದು, ಹೆಸರು ಪತ್ತೆಯಾಗಿಲ್ಲ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಳೆದೊಂದು ತಾಸಿನಿಂದ ದೇಹಕ್ಕಾಗಿ ಹುಟುಕಾಟ ನಡೆಸಿದ್ದಾರೆ.
ಹಾವೇರಿ: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾವೇರಿಯ ಶಿಗ್ಗಾವಿ ತಾಲೂಕು ಹಿರೇಮಣಕಟ್ಟಿ ಗ್ರಾಮದಲ್ಲಿ ನಡೆದಿದೆ. ರಾಜೇಸಾಬ್ ತಾರಾಮನಿ ಮೃತ ರೈತ. ರಾಷ್ಟ್ರೀಯ ಬ್ಯಾಂಕಿನಲ್ಲಿ 2ಲಕ್ಷ ಹಾಗೂ ಒಂದು ಲಕ್ಷಕ್ಕೂ ಅಧಿಕ ಕೈ ಸಾಲ ಮಾಡಿದ್ದ ಎನ್ನಲಾಗುತ್ತಿದೆ. ಶಿಗ್ಗಾವಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ತುಮಕೂರು: ಕೌಟುಂಬಿಕ ಕಲಹಕ್ಕೆ ಮನನೊಂದು ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಹನುಮಂತಪುರ 4 ನೇ ಕ್ರಾಸ್ನಲ್ಲಿ ನಡೆದಿದೆ. ಮೊನಿಕಾ (21) ಮೃತ ದುರ್ದೈವಿ. ಮೂಲತಃ ಗುಬ್ಬಿ ತಾಲೂಕಿನ ಮದನಘಟ್ಟ ಗ್ರಾಮದ ನಿವಾಸಿ. ಕಳೆದ ಮೂರು ವರ್ಷಗಳ ಹಿಂದೆ ತುಮಕೂರು ಮೂಲದ ಯುವಕ ಅಭಿರಾಮ್ ಎಂಬಾತನನ್ನ ಪ್ರೀತಿಸಿ, ಅಂತರ್ಜಾತಿ ವಿವಾಹವಾಗಿದ್ರು. ಗಂಡನ ಜೊತೆ ಹನುಮಂತಪುರದ 4ನೇ ಕ್ರಾಸ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ರು.
ಇದನ್ನೂ ಓದಿ: ಬೆಂಗಳೂರು: 1 ಕೋಟಿ ರೂ. ಸುಪಾರಿ ನೀಡಿ ತಂದೆ ಕೊಲ್ಲಿಸಿದ್ದ ಮಗ ಅರೆಸ್ಟ್
ಗಂಡನ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೊನಿಕಾ ಪೋಷಕರು ಆರೋಪಿಸುತ್ತಿದ್ದಾರೆ. ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೊನಿಕಾ ಗಂಡ ಅಭಿರಾಮ್ ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕೊಲೆ ಯತ್ನ ಆರೋಪ: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸೋದರಿ ಸೇರಿ ಐವರ ವಿರುದ್ಧ ಎಫ್ಐಆರ್
ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನೈಜೀರಿಯಾ ಪ್ರಜೆ ನೋಕೊಚಾ. ಯುಕೆಯಲ್ಲಿ ಉದ್ಯೋಗ ಕೊಡಿಸುವುದಾಗಿ ದೊಡ್ಡಗುಬ್ಬಿ ಮೂಲದ ಮಹಿಳೆ ಬಳಿ 37 ಲಕ್ಷ ಹಣ ಪಡೆದು ವಂಚಿಸಿದ್ದ. ಮಹಿಳೆ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ ಲ್ಯಾಪ್ಟಾಪ್, 6 ಮೊಬೈಲ್, ಸಿಮ್ಕಾರ್ಡ್, ಪಾಸ್ಪೋರ್ಟ್ ಜಪ್ತಿ ಮಾಡಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:35 pm, Mon, 27 February 23