ವಿಜಯಪುರ: ಅತ್ಯಾಚಾರಕ್ಕೆ ಯತ್ನ ಆರೋಪ, ಅವಳಿ ಸಹೋದರರ ತಲೆ ಬೋಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ
ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ವಿಜಯಪುರ ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ ಕೇಳಿಬಂದಿದೆ. ಇನ್ನು ಅತ್ಯಾಚಾರಕ್ಕೆ ಯತ್ನಿಸಿದ ಅವಳಿ ಸಹೋದರರ ತಲೆ ಬೋಳಿಸಿ ತಲೆಗೆ ಸುಣ್ಣ ಚಪ್ಪಲಿ ಹಾರ ಹಾಕಿದ ಜನರು ಇಬ್ಬರನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿಸಿದ್ದಾರೆ.
ವಿಜಯಪುರ: ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ (Rape Attempt) ಆರೋಪ ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ ಕೇಳಿಬಂದಿದೆ. ಇನ್ನು ಅತ್ಯಾಚಾರಕ್ಕೆ ಯತ್ನಿಸಿದ ಅವಳಿ ಸಹೋದರರ ತಲೆ ಬೋಳಿಸಿ ತಲೆಗೆ ಸುಣ್ಣ ಚಪ್ಪಲಿ ಹಾರ ಹಾಕಿದ ಜನರು ಇಬ್ಬರನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೆಲಸಕ್ಕೆ ಹೋಗಿದ್ದ ವೇಳೆ ಮಹಿಳೆ ಮೇಲೆ ಅವಳಿ ಸಹೋದರರಾದ ಪೀರು ಚೌವ್ಹಾಣ, ರಾಜು ಚೌವ್ಹಾಣ್ ಎಂಬವರು ಅತ್ಯಾಚಾರಕ್ಕೆ ಯತ್ನಿಸಿದ್ದರು. ಈ ವಿಚಾರ ತಿಳಿದ ಗ್ರಾಮದ ಲಂಬಾಣಿ ಸಮುದಾಯದ ಮುಖಂಡರು, ಆರೋಪಿಗಳನ್ನು ಕರೆಸಿ ತಲೆ ಬೋಳಿಸಿ, ತಲೆಗೆ ಸುಣ್ಣ ಬಳಿದು, ಚಪ್ಪಲಿ ಹಾರ ಹಾಕಿ ಹೆಗಡಿಹಾಳ್ ತಾಂಡಾದಲ್ಲಿ ಮೆರವಣಿಗೆ ಮಾಡಿಸಿದ್ದಾರೆ.
ಲಂಬಾಣಿ ಸಮುದಾಯದ ದೇವಾನಂದ ಚೌವ್ಹಾಣ ಶಾಸಕರಾಗಿರುವ ನಾಗಠಾಣ ಕ್ಷೇತ್ರದಲ್ಲೇ ಈ ಅಮಾನವೀಯ ಘಟನೆ ನಡೆದಿದ್ದು, ಹೆಗಡಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷ ಹಾಗೂ ತಾಂಡಾದ ಮುಖಂಡ ರಾಮಸಿಂಗ್ ಹಾಗೂ ಇತರರಿಂದ ಈ ಕೃತ್ಯ ಎಸಗಲಾಗಿದೆ. ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕೆ ಕಾನೂನು ಪ್ರಕಾರ ಕ್ರಮಕ್ಕೆ ಮುಂದಾಗಬೇಕಿತ್ತು. ಆದರೆ ಅವರು ಕಾನೂನು ಮೀರಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಈ ಘಟನೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸದ್ಯ ಪೊಲೀಸರು ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಕ್ಯಾಂಟರ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಯುವತಿ, ಯುವಕ ಸಾವು
ದೇವನಹಳ್ಳಿ: ಕ್ಯಾಂಟರ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಯುವತಿ ಮತ್ತು ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಮೂಲದ ಭರತ್ ಹಾಗೂ ಯುವತಿ ಹೋಗುತ್ತಿದ್ದ ಬುಲೆಟ್ ಬೈಕ್ ದೇವನಹಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಟ್ಟು ನಿಂತಿದ್ದ ಕ್ಯಾಂಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಭರತ್ ಹಾಗೂ ಯುವತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಭರತ್ ಬೆಂಗಳೂರು ಮೂಲದವನಾಗಿದ್ದು, ಯುವತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ವಿಜಯಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ