ವಿಜಯಪುರದಲ್ಲಿ ನಕಲಿ ತುಪ್ಪುದ ಜಾಲ ಬೇಧಿಸಿದ ಅಧಿಕಾರಿಗಳು, ಓರ್ವ ವಶಕ್ಕೆ

ವಿಜಯಪುರ ನಗರದಲ್ಲಿ ನಕಲಿ ತುಪ್ಪದ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ಆಧಿಕಾರಿಗಳು ಓರ್ವನ ಸಹಿತ 30 ಕೆ.ಜಿ.ಗೂ ಅಧಿಕ ನಕಲಿ ತುಪ್ಪವನ್ನು ವಶಕ್ಕೆ ಪಡೆದಿದ್ದಾರೆ.

ವಿಜಯಪುರದಲ್ಲಿ ನಕಲಿ ತುಪ್ಪುದ ಜಾಲ ಬೇಧಿಸಿದ ಅಧಿಕಾರಿಗಳು, ಓರ್ವ ವಶಕ್ಕೆ
ವಿಜಯಪುರದಲ್ಲಿ ನಕಲಿ ತುಪ್ಪುದ ಜಾಲ ಬೇಧಿಸಿದ ಅಧಿಕಾರಿಗಳು
Follow us
TV9 Web
| Updated By: Rakesh Nayak Manchi

Updated on:Oct 21, 2022 | 2:04 PM

ವಿಜಯಪುರ: ನಗರದಲ್ಲಿ ನಕಲಿ ತುಪ್ಪದ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ಆಧಿಕಾರಿಗಳು ಓರ್ವನ ಸಹಿತ 30 ಕೆ.ಜಿ.ಗೂ ಅಧಿಕ ನಕಲಿ ತುಪ್ಪವನ್ನು ವಶಕ್ಕೆ ಪಡೆದಿದ್ದಾರೆ. ರವಿ ನಿಂಗನಗೌಡ ಬಿರಾದಾರ ಹಾಗೂ ಇನ್ನಿತರರು ಸೇರಿಕೊಂಡು ನಕಲಿ ತುಪ್ಪು ಮಾರಾಟ ಮಾಡುತ್ತಿದ್ದರು. ಬೆಂಗಳೂರಿನಿಂದ ಖಾಸಗಿ ಬಸ್ ಮೂಲಕ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ  ನಕಲಿ ತುಪ್ಪ ಬಾಟಲ್, ಸ್ಟಿಕರ್ ಸೇರಿದಂತೆ ಪ್ಯಾಕಿಂಗ್ ಮಟೀರಿಯಲ್ ಹಾಗೂ ಬಿಲ್ ಬುಕ್​ಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ರವಿಯನ್ನು ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಸದ್ಯ ವಶಕ್ಕೆ ಪಡೆದ ನಕಲಿ ತುಪ್ಪವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಿದ ಅಧಿಕಾರಿಗಳು, ಪ್ರಯೋಗಾಲಯದ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಬಿಜೆಪಿ ಮುಖಂಡನ ಕಾರು ಅಪಘಾತ

ವಿಜಯಪುರ: ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ್ ಅವರ ಕಾರು ಅಪಘಾತಗೊಂಡ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಅಪ್ಪು ಗೌಡ ಹಾಗೂ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅಪ್ಪುಗೌಡ ಪಾಟೀಲ್ ಸೇರಿದಂತೆ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದ್ದು, ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:25 pm, Fri, 21 October 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ