ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ವಿಜಯಪುರ ನೂತನ ಡಿಸಿ ಕಾರು ಪಲ್ಟಿ; ಡಿಸಿ ವಿಜಯ ಮಹಾಂತೇಶ ದಾನಮ್ಮ ಕುಟುಂಬಸ್ಥರಿಗೆ ಗಾಯ

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ವಿಜಯ ಮಹಾಂತೇಶ ದಾನಮ್ಮನವರಿಗೆ ವಿಜಯಪುರ ಡಿಸಿಯಾಗಿ ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ವಿಜಯಪುರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ವಿಜಯಪುರ ನೂತನ ಡಿಸಿ ಕಾರು ಪಲ್ಟಿ; ಡಿಸಿ ವಿಜಯ ಮಹಾಂತೇಶ ದಾನಮ್ಮ ಕುಟುಂಬಸ್ಥರಿಗೆ ಗಾಯ
ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ವಿಜಯಪುರ ನೂತನ ಡಿಸಿ ಕಾರು ಪಲ್ಟಿ; ಡಿಸಿ ವಿಜಯ ಮಹಾಂತೇಶ ದಾನಮ್ಮ ಕುಟುಂಬಸ್ಥರಿಗೆ ಗಾಯ
Follow us
TV9 Web
| Updated By: ಆಯೇಷಾ ಬಾನು

Updated on: Apr 19, 2022 | 10:18 AM

ಧಾರವಾಡ: ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ವಿಜಯಪುರ ನೂತನ ಡಿಸಿಗೆ ಗಾಯಗಳಾಗಿರುವ ಘಟನೆ ಧಾರವಾಡ ಬಳಿಯ ಬೈಪಾಸ್‌ನಲ್ಲಿ ಸಂಭವಿಸಿದೆ. ವಿಜಯ ಮಹಾಂತೇಶ ದಾನಮ್ಮನವರ, ಪತ್ನಿ, ಮಕ್ಕಳಿಗೆ ಗಾಯಗಳಾಗಿದ್ದು ಗಾಯಾಳುಗಳಿಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ವಿಜಯ ಮಹಾಂತೇಶ ದಾನಮ್ಮನವರಿಗೆ ವಿಜಯಪುರ ಡಿಸಿಯಾಗಿ ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ವಿಜಯಪುರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಬಸ್ ಡಿಕ್ಕಿ ವೃದ್ದೆ ಸಾವು ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಡಿಕ್ಕಿಯಾಗಿ ವೃದ್ಧೆ ಮೃತಪಟ್ಟಿದ್ದಾರೆ. ಕೆ.ಆರ್.ನಗರ ತಾಲೂಕಿನ ಸತ್ತಿ ಗ್ರಾಮದ ನೀಲಮ್ಮ ಮೃತ ದುರ್ದೈವಿ. ಮತ್ತೊಂದು ಬಸ್ ಓವರ್‌ಟೇಕ್ ಮಾಡುವಾಗ ದುರ್ಘಟನೆ ಸಂಭವಿಸಿದೆ. ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಲೋಹಿತ್ ನಗರದಲ್ಲಿ ಬ್ರಿಡ್ಜ್ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಮೂಲದ ಸಚಿನ್ ಕುಮಾರ್ ದೇಸಾಯಿ(35) ಮೃತ ದುರ್ದೈವಿ. ರಸ್ತೆ ಬಳಿ ಲಾರಿ ನಿಲ್ಲಿಸಿ ಪರಾರಿಯಾದ ಚಾಲಕನ ವಿರುದ್ಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿಟ್ಟಗೊಂಡನಹಳ್ಳಿಯಲ್ಲಿ ನೇಣು ಬಿಗಿದುಕೊಂಡು ರಂಭಾ(21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಡಿಕೆ ತಟ್ಟೆ ತಯಾರಿಸುವ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೇಪಾಳಿ ಮೂಲದ ಗಣೇಶ್ ಭಂಡಾರಿ ಎಂಬುವರ ಪತ್ನಿ ರಂಭಾ 21 ನೇಣಿಗೆ ಶರಣಾಗಿದ್ದಾರೆ. ರಂಭಾ ಮಾನಸಿಕ ಕಾಯಿಲೆಯಿಂದ ನರಳುತ್ತಿದ್ದರು ಎನ್ನಲಾಗಿದೆ. ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವು ತುಮಕೂರು ತಾಲೂಕಿನ ನಂದಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮೇಲ್ಸೇತುವೆ ಕಂಬಿಗಳಿಗೆ ಬೈಕ್ ಡಿಕ್ಕಿ ಹೊಡೆದು ವೈದ್ಯ ವಿದ್ಯಾರ್ಥಿ ಮೋಕ್ಷಿತ್ ಹೆಗಡೆ(21) ಮೃತಪಟ್ಟಿದ್ದಾರೆ. ತಿಪಟೂರು ತಾಲೂಕಿನ ರಾಮಚಂದ್ರಪುರ ನಿವಾಸಿಯಾಗಿದ್ದು ಬೆಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ. ಬೆಂಗಳೂರಿಗೆ ತೆರಳುವಾಗ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಜೋ ಬೈಡನ್​ ಕೀವ್​​ಗೆ ತೆರಳಲಿದ್ದಾರಾ?- ಪ್ರಶ್ನೆಗೆ ಉತ್ತರ ನೀಡಿದ ಶ್ವೇತ ಭವನ

ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ