ವಿಜಯಪುರದಲ್ಲಿ ರಥೋತ್ಸವ ವೇಳೆ ಅವಘಡ: ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರಾ ಉತ್ಸವದ ವೇಳೆ ನಿನ್ನೆ ಸಂಜೆ ಗೋಧೋಳಿ ಮುಹೂರ್ತದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ನಡೆದಿದ್ದ ಮಹಾರಥೋತ್ಸವದಲ್ಲಿ ರಥ ಎಳೆಯುವ ವೇಳೆ ಆಯತಪ್ಪಿ ಚಕ್ರದಡಿ ಸಿಲುಕಿದ್ದ 7 ಜನರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ವಿಜಯಪುರದಲ್ಲಿ ರಥೋತ್ಸವ ವೇಳೆ ಅವಘಡ: ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ
ಮೃತರ ಸಂಖ್ಯೆ ಮೂರಕ್ಕೆ ಏರಿಕೆ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 29, 2024 | 4:57 PM

ವಿಜಯಪುರ, ಏಪ್ರಿಲ್ 29: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರಾ ಉತ್ಸವದ ವೇಳೆ ರಥದ (Rathotsava) ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಕೂಡ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ (death) ಸಾವನ್ನಪ್ಪಿದ್ದಾರೆ. ಆ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸುರೇಶ್ ಕಟಕದೊಂಡ (36) ಮೃತ ವ್ಯಕ್ತಿ. ನೂಕುನುಗ್ಗಲಿನಲ್ಲಿ ರಥದ ಗಾಲಿಗೆ ಸಿಲುಕಿ ನಿನ್ನೆ ಅಭಿಷೇಕ್ ಮುಜಗೊಂಡ(17), ಸೋಬು ಶಿಂಧೆ(51) ಮೃತಪಟ್ಟಿದ್ದರು. ಇಂಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲಚ್ಯಾಣ ಗ್ರಾಮದಲ್ಲಿ ನಿನ್ನೆ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆ ಪ್ರತಿ ವರ್ಷದಂತೆ ಈ ವರ್ಷವೂ ನಡೆದಿತ್ತು. ರಥೋತ್ಸವಕ್ಕೆ ಸಾವಿರಾರು ಭಕ್ತರು ಜಮಾಯಿಸಿದ್ದರು. ಈ ವೇಳೆ ಜನರ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಕೆಲವರು ಸಿಲುಕಿದರು. ಈ ವೇಳೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಮದುವೆ ದಿಬ್ಬಣದ ಲಾರಿ ಪಲ್ಟಿ; ಇಬ್ಬರು ಸ್ಥಳದಲ್ಲೇ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಇನ್ನು ಗಂಭೀರವಾಗಿ ಗಾಯಗೊಂಡ ಓರ್ವ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು ಆತನ ಸ್ಥಿತಿಯೂ ಚಿಂತಾಜನಕವಾಗಿತ್ತು. ಇನ್ನು ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟವರನ್ನು ಬಂಡು ಕಟಕದೊಂಡ (35), ಸೋಬು ಶಿಂಧೆ (55) ಎಂದು ಗುರುತಿಸಲಾಗಿತ್ತು.

ಇದನ್ನೂ ಓದಿ: ವಿಜಯಪುರ: ರಂಜಾನ್ ಹಬ್ಬದಂದೇ ಯುವಕನ ಹತ್ಯೆ ಪ್ರಕರಣ; ಆರೋಪಿಗಳ ಬಂಧನ

ಮೃತರು ಇದೇ ಲಚ್ಯಾಣ ಗ್ರಾಮದವರು ಎಂದು ತಿಳಿದು ಬಂದಿದೆ. ಗಾಯಾಳು ನೆರೆಯ ಮಹಾರಾಷ್ಟ್ರದ ಮೂಲದ ವ್ಯಕ್ತಿ ಎನ್ನಲಾಗಿದೆ. ಸ್ಥಳದಲ್ಲಿ ಇಂಡಿ ಪಟ್ಟಣ ಹಾಗೂ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬೀಡು ಬಿಟ್ಟಿದ್ದರು. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:48 pm, Mon, 29 April 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ