ವಿಜಯಪುರದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ದಾರುಣ ಸಾವು!

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೇಬಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೊಗರಿ ಕಟಾವು ಯಂತ್ರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ. ಮೃತರು ವಿಜಯಪುರ ತಾಲೂಕಿನ ಅಲಿಯಾಬಾದ್ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದಿಂದಾಗಿ ಘಟನಾ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತು.

ವಿಜಯಪುರದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ದಾರುಣ ಸಾವು!
ವಿಜಯಪುರದಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ ಐವರು ದಾರುಣ ಸಾವು..!
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 06, 2024 | 7:15 PM

ವಿಜಯಪುರ, ಡಿಸೆಂಬರ್​ 06: ಭೀಕರ ರಸ್ತೆ ಅಪಘಾತದಲ್ಲಿ (Accident) ಐವರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಸಂಭವಿಸಿದೆ. ಕಾರಿಗೆ ತೊಗರಿ ಕಟಾವು ಮಷಿನ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾರೆ. ಮೃತರು ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳಾಗಿದ್ದಾರೆ. ನಿಂಗಪ್ಪಾ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮಶಿ ಸಂಕನಾಳ (65), ಶಶಿಕಲಾ ಜೈನಾಪೂರ (50) ಹಾಗೂ ದಿಲೀಪ್ ಪಾಟೀಲ್ (45) ಮೃತರು.

ಮೃತರಾದ ಐವರು ಯಾದಗಿರಿ ಜಿಲ್ಲೆಯ ಅಗ್ನಿ ಗ್ರಾಮದಲ್ಲಿ ಕನ್ಯೆ ನೋಡಲು ಹೋಗಿದ್ದು, ವಾಪಸ್ ಆಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಕ್ರೂಸರ್ ಓವರ್ ಟೇಕ್ ಮಾಡುವ ಭರದಲ್ಲಿ ತೊಗರಿ ಕಟಾವು ಮಷಿನ್​​ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಿಂದಾಗಿ ಘಟನಾ ಸ್ಥಳದಲ್ಲಿ ಟ್ರಾಫಿಕ್‌ಜಾಮ್​ ಉಂಟಾಗಿತ್ತು. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ವಿಜಯಪುರ: ಚುಡಾಯಿಸಿದ್ದಕ್ಕೆ ಮನನೊಂದ ಬಾಲಕಿ ನೇಣಿಗೆ ಶರಣು, 1 ತಿಂಗಳ ಅಂತರದಲ್ಲಿ 2ನೇ ಪೋಕ್ಸೋ ಕೇಸ್​

ಸದ್ಯ ತಾಳಿಕೋಟೆ ಪೊಲೀಸರು ಕಾರಿನಲ್ಲಿದ್ದ ಶವಗಳನ್ನು ಜೆಸಿಬಿ ಮೂಲಕ ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಐವರ ಶವಗಳನ್ನು ಬಸನಬಾಗೇವಾಡಿ ಸಮುದಾಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಕುಖ್ಯಾತ ರೌಡಿಗಳ ಮನೆಗಳ ಮೇಲೆ ಪೊಲೀಸ್ ಅಧಿಕಾರಿಗಳಿಂದ ದಾಳಿ

ರಾತ್ರೋರಾತ್ರಿ ಜಿಲ್ಲೆಯ 172 ರೌಡಿಶೀಟರ್​ಗಳ ಮನೆಗಳ ಮೇಲೆ ಪೊಲೀಸ್ ತಂಡದಿಂದ ದಾಳಿ ಮಾಡಲಾಗಿದೆ. ಎಸ್​ಪಿ ಲಕ್ಷ್ಮಣ ನಿಂಬರಗಿ ಸೂಚನೆ ಮೇರೆಗೆ ವಿಜಯಪುರ ನಗರ, ಚಡಚಣ, ಮುದ್ದೇಬಿಹಾಳ, ಇಂಡಿ, ಸಿಂದಗಿ ಸೇರಿ ಜಿಲ್ಲೆಯಾದ್ಯಂತ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿದ್ದು, ಅಕ್ರಮ ಭೂ ವ್ಯವಹಾರ, ಕ್ರಿಮಿನಲ್ ಚಟುವಟಿಕೆ, ಬಡ್ಡಿ ದಂಧೆ ಭೂ ದಾಖಲೆ, ಬಾಂಡ್‌ಗಳನ್ನ ಇರಿಸಿಕೊಂಡಿದ್ದ ರೌಡಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಇದನ್ನೂ ಓದಿ: ಜಲ ಕಂಟಕ: ಕರ್ನಾಟಕದಲ್ಲಿ ಸೋಮವಾರ ಒಂದೇ ದಿನ 10 ಮಂದಿ ನೀರು ಪಾಲು

ರೌಡಿ ಶೀಟರ್​ಗಳ ಮನೆಗಳಲ್ಲಿ ಇಟ್ಟಿದ್ದ ತಲವಾರ್, ಕಬ್ಬಿಣದ ರಾಡ್, ಚಾಕು, ಚೂರಿ, ಹತಾರ್, ಲಾಂಗ್, ಮಚ್ಚು, ಒಂದು ಕಂಟ್ರಿ ಮೇಡ್ ಪಿಸ್ತೂಲು, ಜೀವಂತ ಗುಂಡು, 4 ಅಕ್ರಮ ಮಾರಕಾಸ್ತ್ರ, ಅಕ್ರಮವಾಗಿ ವಶದಲ್ಲಿಟ್ಟುಕೊಂಡಿದ್ದ ನಾಲ್ಕು ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಪೊಲೀಸ್ ಕಣ್ಗಾವಲಿನಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದವರ ಮನೆ ಮೇಲೂ ದಾಳಿ ಮಾಡಿದ್ದು, 21 ರೌಡಿಗಳ ಮೇಲೆ 10 ಲಕ್ಷದ ವರೆಗೆ ಬಾಂಡ್ ಓವರ್​ ಆಗಿದೆ. ಕೋರ್ಟ್​ಗೆ ಅಟೆಂಡ್ ಆಗದ 2 ರೌಡಿಶೀಟರ್ ಮೇಲೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:53 pm, Fri, 6 December 24

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ