AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಮಹಿಳೆ ಆತ್ಮಹತ್ಯೆ, ವಿವಾಹಿತೆಯ ಭಯಾನಕ ಲೈವ್ ಸೊಸೈಡ್ ವಿಡಿಯೋ ವೈರಲ್

ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ.

ವಿಜಯಪುರ:  ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಮಹಿಳೆ ಆತ್ಮಹತ್ಯೆ, ವಿವಾಹಿತೆಯ  ಭಯಾನಕ ಲೈವ್ ಸೊಸೈಡ್ ವಿಡಿಯೋ ವೈರಲ್
ಮೃತ ಮಹಿಳೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Apr 26, 2023 | 9:40 AM

Share

ವಿಜಯಪುರ: ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ. ಹೌದು ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಳೆದ ಏಪ್ರಿಲ್ 15ರಂದು ವಿವಾಹಿತೆ ಸುಹಾನಾ ಆತ್ಮಹತ್ಯೆಗೆ ಕಾರಣ ತಿಳಿಸಿ, ಮೊಬೈಲ್ ವಿಡಿಯೋ ಆನ್ ಮಾಡಿ ನೇಣಿಗೆ ಶರಣಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಲದಿನ್ನಿ ಗ್ರಾಮದ ಅಲ್ತಾಫ್ ಸುಲೆಮಾನ್ 1 ವರ್ಷದ ಹಿಂದೆ ಸುಹಾನಾ ಜೊತೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್​ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿ ಕೊಟ್ಟಿದ್ದರು.

ಇದನ್ನೂ ಓದಿ:ಬೆಂಗಳೂರು: ಪತ್ನಿಯನ್ನ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, 2 ಸಾವಿರ ರೂ. ದಂಡ

ಮೂವರಿಂದ ಸುಹಾನಾಳಿಗೆ ಕಿರುಕುಳ

ಇನ್ನು ಗ್ರಾಮದ ಯುನೀಸ್ ಪಾರ್ಥನಳ್ಳಿ ಹಾಗೂ ದಸ್ತಗಿರಸಾಬ್ ಮುಳವಾಡ ಎಂಬುವವರ ಜೊತೆಗೆ ವಿವಾಹಿತೆ ತಂದೆ ಅಸ್ಲಂ ಮುಲ್ಲಾ ದ್ವೇಷ ಹೊಂದಿದ್ದ. ದಸ್ತಗಿರಸಾಬ್ ಮುಳವಾಡ ಮಗಳ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಕ್ಕೆ ಅಸ್ಲಂ ಮುಲ್ಲಾ ಕಾರಣವೆಂದು ಸಿಟ್ಟು ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಮೂವರು ಸೇರಿ ಸುಹಾನಾ ಬೆನ್ನು ಹತ್ತಿ ಕಿರುಕುಳ ಕೊಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಂಡನನ್ನು ಬಿಟ್ಟು ಬಾ, ಇಲ್ಲವಾದರೆ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಸುಹಾನಾಳಿಗೆ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡುತ್ತಿದ್ದ.

ಇದರಿಂದ ಬೆಸತ್ತಿದ್ದ ಸುಹಾನಾ, ಮೂವರ ಹೆಸರು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಳೆ. ಈ ಕುರಿತು ಸುಹಾನಾ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಅಲ್ತಾಪ್ ಹಾಗೂ ಯುನೀಸ್​ನನ್ನ ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:34 am, Wed, 26 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ