AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ವಧು-ವರರ ಜೊತೆ ಫೋಟೋ ತೆಗೆಸಿಕೊಳ್ಳಲು ಹೋಗಿ ಮದುವೆ ಮಂಟಪದಿಂದ ಹಣ, ಒಡವೆ ಕದ್ದ ಕಳ್ಳ!

Crime News: ಕ್ಯಾಮೆರಾದಲ್ಲಿ ಸೆರೆಯಾದ ಆಘಾತಕಾರಿ ಘಟನೆಯಲ್ಲಿ ನವವಿವಾಹಿತ ದಂಪತಿಯ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ಕಳ್ಳನೊಬ್ಬ ಬೆಲೆಬಾಳುವ ವಸ್ತುಗಳಿದ್ದ ಬ್ಯಾಗ್‌ನೊಂದಿಗೆ ಪರಾರಿಯಾಗಿದ್ದಾನೆ.

Viral News: ವಧು-ವರರ ಜೊತೆ ಫೋಟೋ ತೆಗೆಸಿಕೊಳ್ಳಲು ಹೋಗಿ ಮದುವೆ ಮಂಟಪದಿಂದ ಹಣ, ಒಡವೆ ಕದ್ದ ಕಳ್ಳ!
ಚಿನ್ನ ಕದ್ದೊಯ್ದ ಕಳ್ಳ
TV9 Web
| Edited By: |

Updated on: Feb 15, 2022 | 4:08 PM

Share

ಗ್ವಾಲಿಯರ್: ಮದುವೆ ಮನೆಯಲ್ಲಿ ವೇದಿಕೆಗೆ ಹೋಗಿ ಮದುಮಕ್ಕಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳುವುದು ಸಾಮಾನ್ಯ. ಇದೇ ರೀತಿ ವಧು-ವರರ ಜೊತೆ ಫೋಟೋ ತೆಗೆಸಿಕೊಳ್ಳಲು ಹೋಗಿದ್ದ ಖತರ್ನಾಕ್ ಕಳ್ಳನೊಬ್ಬ ಮಂಟಪದಿಂದ ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗನ್ನು ಕದ್ದೊಯ್ದಿರುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ಯಾಮೆರಾದಲ್ಲಿ ಸೆರೆಯಾದ ಆಘಾತಕಾರಿ ಘಟನೆಯಲ್ಲಿ ನವವಿವಾಹಿತ ದಂಪತಿಯ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ಕಳ್ಳನೊಬ್ಬ ಬೆಲೆಬಾಳುವ ವಸ್ತುಗಳಿದ್ದ ಬ್ಯಾಗ್‌ನೊಂದಿಗೆ ಪರಾರಿಯಾಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಕಳ್ಳನ ಈ ವಿಡಿಯೋ ವೈರಲ್ (Viral Video) ಆಗಿದೆ.

ಆ ಕಳ್ಳ ಕಪ್ಪು ಬಟ್ಟೆಯನ್ನು ಧರಿಸಿದ್ದು, ವಿಡಿಯೋ ಫೂಟೇಜ್‌ನಲ್ಲಿ ಅವರ ಮುಖ ಕಾಣುತ್ತಿಲ್ಲ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರು ಮದುವೆ ಮನೆಯಿಂದ ಸುಲಭವಾಗಿ ಹೊರಗೆ ಹೋಗುವುದನ್ನು ಕಾಣಬಹುದು. ಶನಿವಾರ ರಾತ್ರಿ ಗ್ವಾಲಿಯರ್‌ನ ಝಾನ್ಸಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸಂಗಮ್ ವಾಟಿಕಾ ಮದುವೆ ಉದ್ಯಾನದಲ್ಲಿ ಈ ಘಟನೆ ಸಂಭವಿಸಿದೆ.

ಹರ್ಷ್ ಬನ್ಸಾಲ್ ಅವರು ನವವಿವಾಹಿತ ದಂಪತಿಗಳೊಂದಿಗೆ ಫೋಟೋ ತೆಗೆದುಕೊಳ್ಳುವ ಸಲುವಾಗಿ ಮದುವೆಯ ವೇದಿಕೆಗೆ ತೆರಳಿದ್ದರು. ವಧುವಿನ ಕುರ್ಚಿಯ ಹಿಂದೆ ಬ್ಯಾಗ್ ಅನ್ನು ಇರಿಸಿದ್ದರು. ಆ ಬ್ಯಾಗ್​ನಲ್ಲಿ 1 ಲಕ್ಷ ರೂ. ನಗದು ಮತ್ತು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿತ್ತು ಎಂದು ಬನ್ಸಾಲ್ ಹೇಳಿದ್ದಾರೆ. ಬನ್ಸಾಲ್ ಪ್ರಕಾರ, ಕದ್ದ ವಸ್ತುಗಳು ಇತ್ತೀಚೆಗೆ ವಿವಾಹವಾದ ದಂಪತಿಗೆ ಸೇರಿವೆ.

ಕ್ರೈಂ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ರಾಜೇಶ್ ದಂಡೋಟಿಯಾ ಮಾತನಾಡಿ, ಮದುವೆ ಉದ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳಿಂದ ವೀಡಿಯೊವನ್ನು ಸಂಗ್ರಹಿಸಲಾಗಿದೆ. ಈ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಕಳ್ಳತನದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸಲಾಗುವುದು ಎಂದು ರಾಜೇಶ್ ದಂಡೋಟಿಯ ಹೇಳಿದ್ದಾರೆ.

ಇದನ್ನೂ ಓದಿ: Viral News: ಮದುವೆಯಾದ ಕೂಡಲೆ ಗಂಡನ ಬಿಟ್ಟು ಪ್ರಿಯಕರನ ಜೊತೆ ವಧು ಪರಾರಿ; ಲವ್ ಸ್ಟೋರಿಗೆ ಹೊಸ ಟ್ವಿಸ್ಟ್​!

Viral News: 6 ವರ್ಷಗಳಿಂದ ಗಂಡನ ಊಟಕ್ಕೆ ಡ್ರಗ್ಸ್​ ಬೆರೆಸುತ್ತಿದ್ದ ಹೆಂಡತಿ; ಕಾರಣವೇನು ಗೊತ್ತಾ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ