Viral News: ಎಟಿಎಂ ದರೋಡೆ ಮಾಡಲು ಹೋಗಿ ಮಷಿನ್ ಹಿಂದೆ ಸಿಕ್ಕಿಕೊಂಡ ಕಳ್ಳ; ಆಮೇಲೇನಾಯ್ತು?

Crime News Today: ಕಂಠಪೂರ್ತಿ ಕುಡಿದಿದ್ದ ಉಪೇಂದ್ರ ರಾಯ್​ ಎಟಿಎಂ ಒಡೆದು ದರೋಡೆ ಮಾಡಲು ಹೋಗಿದ್ದ. ಎಟಿಎಂ ಮಷಿನ್ ಹಿಂದೆ ಹೋಗಿ ನಿಂತ ಕಳ್ಳ ಗೋಡೆಯ ಬಳಿ ಸಿಕ್ಕಿಹಾಕಿಕೊಂಡಿದ್ದಾನೆ.

Viral News: ಎಟಿಎಂ ದರೋಡೆ ಮಾಡಲು ಹೋಗಿ ಮಷಿನ್ ಹಿಂದೆ ಸಿಕ್ಕಿಕೊಂಡ ಕಳ್ಳ; ಆಮೇಲೇನಾಯ್ತು?
ಎಟಿಎಂ ದರೋಡೆ ವೇಳೆ ಸಿಕ್ಕಿಬಿದ್ದ ಕಳ್ಳ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 08, 2021 | 10:13 PM

ಚೆನ್ನೈ: ಕೊರೊನಾ ಅಟ್ಟಹಾಸ ಜೋರಾಗಿದ್ದರೂ ಕೊಲೆ, ದರೋಡೆ, ಅತ್ಯಾಚಾರದಂತಹ ಅಪರಾಧ ಪ್ರಕರಣಗಳೇನೂ ಕಡಿಮೆಯಾಗಿಲ್ಲ. ಆದರೆ, ಈ ಕ್ರೈಂ ಮಾಡಲು ಹೋದಾಗಲೂ ಕೆಲವೊಂದು ಫಜೀತಿ ನಡೆದು ಕಾಮಿಡಿ ಘಟನೆಗಳು ನಡೆದಿರುವ ಪ್ರಕರಣಗಳು ಸಾಕಷ್ಟಿವೆ. ಯಾರದೋ ಮನೆಯಲ್ಲಿ ಕದಿಯಲು ಹೋದಾಗ ಅಲ್ಲೇ ಬೆಡ್​ರೂಂನಲ್ಲಿ ಮಲಗಿ ಸಿಕ್ಕಿಹಾಕಿಕೊಂಡಿದ್ದು, ಮನೆ ದೋಚುವ ಬದಲು ಅಡುಗೆ ಮನೆಯಲ್ಲಿ ಅಡುಗೆ ಮಾಡಿಕೊಂಡು ಊಟ ಮಾಡುವಷ್ಟರಲ್ಲಿ ಮನೆ ಓನರ್ ಬಂದಿದ್ದು ಹೀಗೆ ಕಳ್ಳತನ ಮಾಡಲು ಹೋದ ಕಳ್ಳರೇ ಮನೆ ಮಾಲೀಕರ ಕೈಗೆ ಸಿಕ್ಕಿಹಾಕಿಕೊಂಡು ಜೈಲು ಸೇರಿದ ಘಟನೆಗಳು ಬೇಕಾದಷ್ಟಿವೆ. ಅದೇ ರೀತಿ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ.

ದರೋಡೆಗೆಂದು ಎಟಿಎಂಗೆ ನುಗ್ಗಿದ್ದ ಕಳ್ಳನೊಬ್ಬನಿಗೆ ಎಟಿಎಂ ಮಷಿನ್ ಒಡೆಯಲು ಸಾಧ್ಯವಾಗಿಲ್ಲ. ಆಗ ಗೋಡೆಯ ಬದಿಗೆ ಹೋಗಿ ಎಟಿಎಂ ಮಷಿನ್ ಒಡೆಯುತ್ತಿದ್ದಾಗ ಮಷಿನ್ ಹಾಗೂ ಗೋಡೆಯ ನಡುವೆ ಕಳ್ಳ ಸಿಕ್ಕಿಹಾಕಿಕೊಂಡಿದ್ದಾನೆ. ಚೆನ್ನೈನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಈ ವಿಡಿಯೋ ಸೆರೆಯಾಗಿದೆ. 28 ವರ್ಷದ ಉಪೇಂದ್ರ ರಾಯ್ ಎಂಬ ಬಿಹಾರ ಮೂಲದ ಕಳ್ಳ ಎಟಿಎಂ ದರೋಡೆ ಮಾಡಲು ಬಂದು ಸಿಕ್ಕಿಹಾಕಿಕೊಂಡಿದ್ದಾನೆ.

ಕಂಠಪೂರ್ತಿ ಕುಡಿದಿದ್ದ ಉಪೇಂದ್ರ ರಾಯ್​ ಎಟಿಎಂ ಒಡೆದು ದರೋಡೆ ಮಾಡಲು ಹೋಗಿದ್ದ. ಆದರೆ, ಅಲ್ಲಿ ತಾನೇನು ಮಾಡುತ್ತಿದ್ದೇನೆ ಎಂದು ಗೊತ್ತಾಗದಷ್ಟು ಆತ ಅಮಲಿನಲ್ಲಿದ್ದ. ಎಟಿಎಂ ಮಷಿನ್ ಹಿಂದೆ ಹೋಗಿ ನಿಂತ ಕಳ್ಳ ಗೋಡೆಯ ಬಳಿ ಸಿಕ್ಕಿಹಾಕಿಕೊಂಡಿದ್ದಾನೆ. ಕುಡಿದು ಕೆಳಗೆ ಬೀಳುವಂತಾಗಿದ್ದರಿಂದ ಆತನಿಗೆ ಅಲ್ಲಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಅಲ್ಲಿಂದಲೇ ಎಟಿಎಂ ಒಡೆಯತೊಡಗಿದ ಆತ ಹಣ ದೋಚಲು ಮುಂದಾಗಿದ್ದ. ಆ ಶಬ್ದ ಕೇಳಿದ ಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಎಟಿಎಂ ಸೆಂಟರ್​ನಲ್ಲಿ ಸಿಕ್ಕಿಬಿದ್ದಿದ್ದ ಕಳ್ಳನನ್ನು ಅಲ್ಲಿಂದ ಬಿಡಿಸಿ ವಶಕ್ಕೆ ಪಡೆದಿದ್ದಾರೆ. ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಕಳ್ಳತನ ಮಾಡಲು ಹೋದ ದರೋಡೆಕೋರ ತಾನೇ ತಾನಾಗಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ: Viral News: 2 ಲಕ್ಷ ರೂ.ಗೆ ಮಾರಾಟವಾಯ್ತು 90 ಪೈಸೆಯ ಚಮಚ! ಹರಾಜಿಗೆ ಹಾಕಿದ್ದ ಮಾಲೀಕನೇ ಶಾಕ್

Shocking News: ಪೊಲೀಸರಂತೆ ಬಸ್ ನಿಲ್ಲಿಸಿ 1.2 ಕೋಟಿ ರೂ. ಕದ್ದೊಯ್ದ ಕಳ್ಳರು; ಸಿನಿಮಾ ಸ್ಟೈಲ್​ನಲ್ಲಿ ದರೋಡೆ!

(Man Gets Stuck Between ATM Machine and Wall During Trying to Steal Robbery in Tamil Nadu)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ