AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಇಡೀ ಕುಟುಂಬ ಮೈಮರೆತು ನಿದ್ರೆ ಮಾಡಿದ್ದಾಗ ಮನೆಗೆ ಬೆಂಕಿ ಹಚ್ಚಿದ ಮುಸುಕುಧಾರಿ; ವಿಡಿಯೋ ವೈರಲ್

ನಫೀಸ್ ಮಲಿಕ್ ಮತ್ತು ಅವರ ಕುಟುಂಬದ ಸದಸ್ಯರು ರಾತ್ರಿ ತಮ್ಮ ಮನೆಯಲ್ಲಿ ಮಲಗಿದ್ದಾಗ ಮೂವರು ಅಪರಿಚಿತರು ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.

Crime News: ಇಡೀ ಕುಟುಂಬ ಮೈಮರೆತು ನಿದ್ರೆ ಮಾಡಿದ್ದಾಗ ಮನೆಗೆ ಬೆಂಕಿ ಹಚ್ಚಿದ ಮುಸುಕುಧಾರಿ; ವಿಡಿಯೋ ವೈರಲ್
ದೆಹಲಿಯಲ್ಲಿ ಮನೆಗೆ ಬೆಂಕಿ ಹಚ್ಚಿರುವ ದೃಶ್ಯImage Credit source: NDTV
TV9 Web
| Edited By: |

Updated on: Jan 13, 2023 | 3:22 PM

Share

ನವದೆಹಲಿ: ದೆಹಲಿಯಲ್ಲಿ (Delhi) ಇಡೀ ಕುಟುಂಬವೊಂದು ರಾತ್ರಿ ಮಲಗಿದ್ದಾಗ ಮೂವರು ಮುಸುಕುಧಾರಿಗಳು ಆ ಮನೆಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ ಈ ಘಟನೆ ನಡೆದಿದೆ. ಮೂವರು ಮುಸುಕುಧಾರಿಗಳು ಆ ಮನೆಗೆ ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ (Social Media) ವೈರಲ್ ಆಗುತ್ತಿದೆ. ಮೂವರು ಪೆಟ್ರೋಲ್​ ಕ್ಯಾನ್​ಗಳೊಂದಿಗೆ ಆ ಮನೆಯ ಬಳಿ ಬಂದು ನಫೀಸ್ ಅವರ ಮನೆಗೆ ಬೆಂಕಿ ಹಚ್ಚುವುದನ್ನು ವಿಡಿಯೋದಲ್ಲಿ ನೋಡಬಹುದು.

ಜನವರಿ 8ರಂದು ದೆಹಲಿಯ ಭಜನಪುರದ ವಿನಯ್ ಪಾರ್ಕ್‌ನಲ್ಲಿ ಈ ಘಟನೆ ವರದಿಯಾಗಿದೆ. ನಫೀಸ್ ಮಲಿಕ್ ಮತ್ತು ಅವರ ಕುಟುಂಬದ ಸದಸ್ಯರು ರಾತ್ರಿ ತಮ್ಮ ಮನೆಯಲ್ಲಿ ಮಲಗಿದ್ದಾಗ ಮೂವರು ಅಪರಿಚಿತರು ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹೊತ್ತಿಕೊಂಡ ತಕ್ಷಣ ಎಚ್ಚರಗೊಂಡ ಅವರು ಹಿಂದಿನ ಬಾಗಿಲಿನಿಂದ ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಅವರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: Crime News: ಆಭರಣಕ್ಕಾಗಿ 7 ತಿಂಗಳ ಗರ್ಭಿಣಿ ಸೊಸೆಗೆ ಬೆಂಕಿ ಹಚ್ಚಿದ ಅತ್ತೆ-ಮಾವ

ಒಬ್ಬ ವ್ಯಕ್ತಿಯು ಬೆಂಕಿ ಹಚ್ಚಲು ಪೆಟ್ರೋಲ್ ಅನ್ನು ಮನೆಯ ಮೇಲೆ ಚೆಲ್ಲುತ್ತಾನೆ. ಅಷ್ಟರಲ್ಲಿ ಎರಡನೆಯ ವ್ಯಕ್ತಿಯು ಬೆಂಕಿಕಡ್ಡಿಗಳನ್ನು ಹೊತ್ತಿಸಿ ಆ ಮನೆಯ ಮೇಲೆ ಎಸೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ತಕ್ಷಣ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣ ಅವರು ಅಲ್ಲಿಂದ ಪರಾರಿಯಾಗಿದ್ದಾರೆ.

ಆ ಮನೆಯ ಹೊರಗೆ ನಿಲ್ಲಿಸಿದ್ದ ಸೈಕಲ್ ಹಾಗೂ ಮೋಟಾರ್ ಬೈಕ್ ಕೂಡ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹಚ್ಚಿದ ಮೂವರು ನಾಪತ್ತೆಯಾಗಿದ್ದು, ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಸ್ಥಳದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್