Viral Video: ಚಲಿಸುತ್ತಿದ್ದ ರೈಲಿನ ಮುಂದೆ ಹೆಂಡತಿಯನ್ನು ತಳ್ಳಿ ಕೊಂದ ಗಂಡ; ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆ

ಹೆಂಡತಿಯನ್ನು ಕೊಂದ ಬಳಿಕ ಆ ವ್ಯಕ್ತಿ ತನ್ನ ಇಬ್ಬರು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದಿಂದ ಪರಾರಿಯಾಗಿದ್ದಾನೆ. ಈ ಸಂಪೂರ್ಣ ಘಟನೆ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Viral Video: ಚಲಿಸುತ್ತಿದ್ದ ರೈಲಿನ ಮುಂದೆ ಹೆಂಡತಿಯನ್ನು ತಳ್ಳಿ ಕೊಂದ ಗಂಡ; ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆ
ರೈಲಿನೆದುರು ಹೆಂಡತಿಯನ್ನು ತಳ್ಳಿದ ಗಂಡ
Image Credit source: times now
Updated By: ಸುಷ್ಮಾ ಚಕ್ರೆ

Updated on: Aug 23, 2022 | 12:57 PM

ಮುಂಬೈ: ಮಹಾರಾಷ್ಟ್ರದ (Maharashtra) ಪಲ್ಘಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಎದುರು ತಳ್ಳಿ, ಕೊಲೆ (Murder) ಮಾಡಿ ಆ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಸೋಮವಾರ ಪಲ್ಘಾರ್ (Palghar) ಜಿಲ್ಲೆಯ ವಸೈ ರೋಡ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ನಡುವೆ ವಸೈ ರೋಡ್ ರೈಲ್ವೆ ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಂಡತಿಯನ್ನು ಕೊಂದ ಬಳಿಕ ಆ ವ್ಯಕ್ತಿ ತನ್ನ ಇಬ್ಬರು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದಿಂದ ಪರಾರಿಯಾಗಿದ್ದಾನೆ. ಈ ಸಂಪೂರ್ಣ ಘಟನೆ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

30 ವರ್ಷದ ಆಸುಪಾಸಿನ ವ್ಯಕ್ತಿ ಮಲಗಿದ್ದ ತನ್ನ ಹೆಂಡತಿಯನ್ನು ಎಬ್ಬಿಸಿ, ಪ್ಲಾಟ್‌ಫಾರ್ಮ್‌ನ ಅಂಚಿಗೆ ಎಳೆದೊಯ್ದು ಆಕೆಯನ್ನು ಚಲಿಸುವ ಎಕ್ಸ್‌ಪ್ರೆಸ್ ರೈಲಿನ ಮುಂದೆ ತಳ್ಳಿದ್ದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಚಲಿಸುತ್ತಿದ್ದ ರೈಲಿನ ಎದುರು ಬಿದ್ದ ಆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಸಂತ್ರಸ್ತೆ ತನ್ನ ಮಕ್ಕಳೊಂದಿಗೆ ಪ್ಲಾಟ್‌ಫಾರ್ಮ್ ಸಂಖ್ಯೆ 5ರಲ್ಲಿ ಮಲಗಿದ್ದಾಗ ಆಕೆಯ ಪತಿ ಅವಳನ್ನು ಎಬ್ಬಿಸಿ, ಅವಧ್ ಎಕ್ಸ್‌ಪ್ರೆಸ್‌ ರೈಲಿನ ಮುಂದೆ ತಳ್ಳಿ ಕೊಂದಿದ್ದಾನೆ ಎಂದು ರೈಲ್ವೆ ಸಹಾಯಕ ಪೊಲೀಸ್ ಆಯುಕ್ತ ಬಾಜಿರಾವ್ ಮಹಾಜನ್ ಹೇಳಿದ್ದಾರೆ. ಮಹಿಳೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಘಟನೆಯ ವಿಡಿಯೋದಲ್ಲಿ ಆರೋಪಿ ತನ್ನ ಇಬ್ಬರು ಮಕ್ಕಳನ್ನು ಎತ್ತಿಕೊಂಡು ಪರಾರಿಯಾಗುತ್ತಿರುವುದು ಕಂಡುಬಂದಿದೆ.

ಆರೋಪಿಯು ದಾದರ್‌ಗೆ ರೈಲು ಹತ್ತಿ ಅಲ್ಲಿಂದ ಕಲ್ಯಾಣ್‌ಗೆ ಹೋಗುತ್ತಿರುವುದು ಬೆಳಕಿಗೆ ಬಂದಿದೆ. ಆತನ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ದಂಪತಿಗಳು ಮೊದಲು ಜಗಳವಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ